ಇಂದು iQOO Z9s ಫಸ್ಟ್ ಸೇಲ್; ಈ ಹೊಸ ಫೋನಿಗೆ ಭರ್ಜರಿ ಡಿಸ್ಕೌಂಟ್!
ಐಕ್ಯೂ ಮೊಬೈಲ್ ಸಂಸ್ಥೆಯು ನೂತನವಾಗಿ ಲಾಂಚ್ ಮಾಡಿರುವ ಐಕ್ಯೂ Z9s (iQOO Z9) ಮೊಬೈಲ್ ಕೆಲವು ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನ್ ಇಂದು (ಆಗಷ್ಟ್ 29 ರಂದು) ಭಾರತದಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಇಂದು ಐಕ್ಯೂ Z9s (iQOO Z9) ಸೇಲ್ ಪ್ರಾರಂಭ ಮಾಡಲಿದೆ. ಇನ್ನು ಈ ಮೊಬೈಲ್ 8GB RAM +128GB, 8GB + 256GB ಹಾಗೂ 12GB + 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಹಾಗೆಯೇ ಇದು 5,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಕೂಡಾ ಒಳಗೊಂಡಿದೆ.

ಇನ್ನು ಈ ಮೊಬೈಲ್ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಇದ್ದು, ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಇನ್ನುಳಿದಂತೆ ಐಕ್ಯೂ Z9s (iQOO Z9) ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಐಕ್ಯೂ Z9s - ಫೀಚರ್ಸ್
ಐಕ್ಯೂ Z9s (iQOO Z9) ಮೊಬೈಲ್ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, ಇದರೊಂದಿಗೆ 120Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದೆ. ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಸೌಲಭ್ಯ ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದಿದೆ.
ಇನ್ನು ಈ ಮೊಬೈಲ್ 8GB RAM + 128GB, 8GB + 256GB ಹಾಗೂ 12GB + 256GB ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇದಲ್ಲದೇ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಇದ್ದು, ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಫೋನ್ 5,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಐಕ್ಯೂ Z9s ಫೋನ್ ಬೆಲೆ ಹೀಗಿವೆ
8GB + 128GB ವೇರಿಯಂಟ್ ಬೆಲೆಯು - 19,999ರೂ.
8GB + 256GB ವೇರಿಯಂಟ್ ಬೆಲೆಯು - 21,999ರೂ.
12GB + 256GB ವೇರಿಯಂಟ್ ಬೆಲೆಯು - 23,999ರೂ.
ಇನ್ನು ಐಕ್ಯೂ Z9s ಫೋನ್ ಇಂದು ಅಮೆಜಾನ್ ಹಾಗೂ ಐಕ್ಯೂ ಆನ್‌ಲೈನ್ ಸ್ಟೋರ್ ಮೂಲಕ ಪ್ರಥಮ ಮಾರಾಟ ಪ್ರಾರಮಭ ಮಾಡಲಿದೆ. ಇನ್ನು ಈ ಫೋನ್ ಟೈಟಾನಿಯಂ ಮ್ಯಾಟ್ ಮತ್ತು ಓನಿಕ್ಸ್ ಗ್ರೀನ್ ಕಲರ್‌ನಲ್ಲಿ ಖರೀದಿಗೆ ಲಭ್ಯ ಇರಲಿದೆ.
ಅದೇ ರೀತಿ ಐಕ್ಯೂ Z9s ಪ್ರೊ ಮೊಬೈಲ್ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, 2392×1080 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಸಪೋರ್ಟ್ ಇದ್ದು, ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಅಲ್ಲದೇ ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಇದ್ದು, 5,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.


Click it and Unblock the Notifications







