ಗ್ರ್ಯಾಂಡ್ ಎಂಟ್ರಿಗೆ ಸಜ್ಜಾಗಿದೆ ಐಕ್ಯೂ Z9x 5G ಫೋನ್; ಬಿಗ್ ಬ್ಯಾಟರಿ ಸೌಲಭ್ಯ!
ಐಕ್ಯೂ ಕಂಪನಿಯು ಭಾರತದಲ್ಲಿ ಮತ್ತೊಂದು ಹೊಸ ಫೋನ್ ಲಾಂಚ್ ಮಾಡಲು ಸಂಪೂರ್ಣ ತಯಾರಾಗಿದ್ದು, ಅದುವೇ ಐಕ್ಯೂ Z9x 5G ಫೋನ್. ಈ ಫೋನ್ ಇದೇ ಮೇ 16 ರಂದು ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದೆ.
ಹೌದು, ಐಕ್ಯೂ ಸಂಸ್ಥೆಯು ಮೇ 16 ರಂದು ತನ್ನ ಹೊಸ ಐಕ್ಯೂ Z9x 5G ಫೋನ್ ಅನ್ನು ಬಿಡುಗಡೆ ಮಾಡಲಿದೆ. ಈ ಫೋನ್ ಲಾಂಚ್ ಕುರಿತಾಗಿ ಅಮೆಜಾನ್ ಮೈಕ್ರೋ ಸೈಟ್ ಕೂಡಾ ತೆರೆದಿದೆ. ಇನ್ನು ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಇದು ಪ್ರಮುಖ ಹೈಲೈಟ್ ಆಗಿ ಗುರುತಿಸಿಕೊಳ್ಳಲಿದೆ.

ಅಂದಹಾಗೆ ಈ ಫೋನ್ ಬ್ಲ್ಯಾಕ್ ಹಾಗೂ ಲೈಟ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ. ಇದರಲ್ಲದೇ ಈ ಫೋನ್ 12GB RAM ಮತ್ತು 256GB ಹಾಗೂ 8GB RAM ಮತ್ತು 128GB ವೇರಿಯಂಟ್ ಆಯ್ಕೆಗಳಲ್ಲಿ ಲಗ್ಗೆ ಇಡಲಿದೆ ಎನ್ನಲಾಗಿದೆ. ಹಾಗಾದರೇ ಐಕ್ಯೂ Z9x 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ Z9x 5G ಫೋನ್ ನಿರೀಕ್ಷಿತ ಫೀಚರ್ಸ್
ಐಕ್ಯೂ Z9x 5G ಮೊಬೈಲ್ 6.72 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು ಫುಲ್ ಹೆಚ್‌ಡಿ+ ರೆಸಲ್ಯೂಶನ್ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಒಳಗೊಂಡಿರಲಿದೆ.
ಐಕ್ಯೂ Z9x 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಪವರ್ ಸೌಲಭ್ಯವನ್ನು ಪಡೆದಿರಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದಿರುವುದು ಬಹುತೇಕ ಖಚಿತವಾಗಿದೆ. ಈ ಫೋನ್ 12GB RAM ಮತ್ತು 256GB ಹಾಗೂ 8GB RAM ಮತ್ತು 128GB ವೇರಿಯಂಟ್ ಆಯ್ಕೆಗಳಲ್ಲಿ ಲಾಂಚ್ ಆಗಲಿದೆ ಎನ್ನಲಾಗಿದೆ.
ಐಕ್ಯೂ Z9x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇರಲಿದೆ. ಇದರ ಎರಡನೇ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇನ್ನು ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ.
ಐಕ್ಯೂ Z9x 5G ಸ್ಮಾರ್ಟ್‌ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿರಲಿದ್ದು, ಇದಕ್ಕೆ ಬೆಂಬಲವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇರಲಿದೆ ಎನ್ನಲಾಗಿದೆ. ಈ ಫೋನಿನ ಬ್ಯಾಟರಿಯು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳವರೆಗೆ ಬಾಳಿಕೆ ಬರಲಿದೆ ಎಂದು ಹೇಳಲಾಗಿದೆ.
ಹಾಗೆಯೇ ಬರೀ 30 ನಿಮಿಷಗಳ ಚಾರ್ಜ್ ನಲ್ಲಿ ಸುಮಾರು 10 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಮ್ ಅನ್ನು ಇದು ಒದಗಿಸಲಿದೆ ಎಂದು ಹೇಳಲಾಗುತ್ತದೆ.ಅಲ್ಲದೇ ಈ ಫೋನ್ 3.5mm ಆಡಿಯೊ ಜ್ಯಾಕ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್, ವೈ ಫೈ 5 ಮತ್ತು ಬ್ಲೂಟೂತ್ ಆವೃತ್ತಿ 5.1 ಸೇರಿವೆ. ಅಲ್ಲದೆ ಈ ಫೋನ್ 199 ಗ್ರಾಂ ತೂಕ ಹೊಂದಿರಲಿದೆ. ಅಂದಹಾಗೆ ಐಕ್ಯೂ Z9x 5G ಸ್ಮಾರ್ಟ್‌ಫೋನ್ ಚೀನಾದಲ್ಲಿ ಇದರ ಬೆಲೆ 1,499 (ಭಾರತದಲ್ಲಿ ಅಂದಾಜು ಬೆಲೆ 10,900 ರೂ.ಗಳು) ನಿಂದ ಪ್ರಾರಂಭ ಆಗಲಿದೆ.


Click it and Unblock the Notifications








