Home
ಸುದ್ದಿಜಾಲ

iQOO: ಬಹು ನಿರೀಕ್ಷಿತ ಐಕ್ಯೂ Z9x ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಐಕ್ಯೂ ಸ್ಮಾರ್ಟ್‌ಫೋನ್‌ಗಳು (IQOO smartphone) ವಿಶೇಷ ಫೀಚರ್ಸ್‌ ಆಯ್ಕೆಯ ಮೂಲಕ ಗ್ರಾಹಕರ ಗಮನ ಸೆಳೆಯುತ್ತವೆ. ಈ ನಡುವೆ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ ಆಗಿದ್ದ ಐಕ್ಯೂ Z9x ಸ್ಮಾರ್ಟ್‌ಫೋನ್‌ (IQOO Z9x smartphone) ಅನ್ನು ಲಾಂಚ್‌ ಮಾಡಲಾಗಿದೆ. ಈ ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಹೌದು, ಐಕ್ಯೂ Z9x ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಲಾಗಿದ್ದು, ಈ ಫೋನ್ ಸ್ನಾಪ್‌ಡ್ರಾಗನ್ 6 ಜನ್‌ 1 ಪ್ರೊಸೆಸರ್‌ ಬಲದೊಂದಿಗೆ 44W ಫ್ಲ್ಯಾಷ್ ಚಾರ್ಜಿಂಗ್ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಏನು, ಇದರ ಬೆಲೆ ಎಷ್ಟು ಎಂಬಿತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಬಹು ನಿರೀಕ್ಷಿತ ಐಕ್ಯೂ Z9x ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಐಕ್ಯೂ Z9x ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರ ಮತ್ತು 393ppi ಪಿಕ್ಸೆಲ್ ಸಾಂದ್ರತೆಯೊಂದಿಗೆ 6.72 ಇಂಚಿನ ಫುಲ್‌ ಹೆಚ್‌ಡಿ+ (1,080x2,408 ಪಿಕ್ಸೆಲ್‌) ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಬಳಕೆದಾರರಿಗೆ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.

ಐಕ್ಯೂ Z9x ಸ್ಮಾರ್ಟ್‌ಫೋನ್‌ ಪ್ರೊಸೆಸರ್ ವಿವರ: ಈ ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್‌ನಿಂದ ಕಾರ್ಯನಿರ್ವಹಿಸಲಿದ್ದು, 8GB ವರೆಗಿನ LPDDR4X RAM ನೊಂದಿಗೆ ಜೋಡಿಸಲಾಗಿದೆ. ಈ ಪ್ರೊಸೆಸರ್ ಇತ್ತೀಚಿನ 4nm ಪ್ರಕ್ರಿಯೆ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತದೆ. ಈ ಪವರ್‌ಹೌಸ್ ಸರಿಸಾಟಿಯಿಲ್ಲದ ಕಾರ್ಯಕ್ಷಮತೆಯನ್ನು ನೀಡುತ್ತದೆ, ಹಾಗೆಯೇ AnTuTu ಬೆಂಚ್‌ಮಾರ್ಕ್ ಸ್ಕೋರ್ 560K+ ಅನ್ನು ಮೀರಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಅಲ್ಲದೆ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್‌ ಓಎಸ್‌ 14 ನಲ್ಲಿ ರನ್ ಆಗಲಿದ್ದು, 2+3 ವರ್ಷಗಳ ಆಂಡ್ರಾಯ್ಡ್‌ ಮತ್ತು ಭದ್ರತಾ ನವೀಕರಣಗಳನ್ನು ನೀಡುತ್ತದೆ

ಬಹು ನಿರೀಕ್ಷಿತ ಐಕ್ಯೂ Z9x ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಐಕ್ಯೂ Z9x ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಫೋನ್ f/1.8 ದ್ಯುತಿರಂಧ್ರದೊಂದಿಗೆ 50 ಮೆಗಾಪಿಕ್ಸೆಲ್ ರಿಯರ್‌ ಕ್ಯಾಮೆರಾವನ್ನು ಹೊಂದಿದ್ದು, f/2.4 ದ್ಯುತಿರಂಧ್ರದೊಂದಿಗೆ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್‌ ಆಯ್ಕೆ ನೀಡಲಾಗಿದ್ದು, 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು f/2.0 ದ್ಯುತಿರಂಧ್ರದೊಂದಿಗೆ ನೀಡಲಾಗಿದೆ. ಈ ಸೆನ್ಸರ್‌ಗಳು ವಿವಿಧ ಫೀಚರ್ಸ್‌ ಅನ್ನು ಪಡೆದುಕೊಂಡಿವೆ.

ಐಕ್ಯೂ Z9x ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: 6000mAh ಸಾಮರ್ಥ್ಯದ ಅಲ್ಟ್ರಾ-ತೆಳುವಾದ ಗ್ರ್ಯಾಫೈಟ್ ಬ್ಯಾಟರಿಯನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ ಬಳಕೆದಾರರಿಗೆ ಎರಡು ದಿನಗಳ ಬ್ಯಾಟರಿ ಬ್ಯಾಕಪ್‌ ಅನ್ನು ನೀಡಲಿದೆ. ಹಾಗೆಯೇ 44W ಫ್ಲ್ಯಾಶ್‌ಚಾರ್ಜ್ ಡಿವೈಸ್‌ ಅನ್ನು ಕೇವಲ 37 ನಿಮಿಷಗಳಲ್ಲಿ 50% ವರೆಗೆ ಚಾರ್ಜ್ ಮಾಡಬಹುದು. ಇದು ದಿನವಿಡೀ ನಿರಂತರ ಬಳಕೆಯನ್ನು ಖಚಿತಪಡಿಸುತ್ತದೆ. ಅಲ್ಟ್ರಾ ಬ್ಯಾಟರಿ ಸೇವರ್ ಮೋಡ್ ಮತ್ತು ಆಂಟಿ ಏಜಿಂಗ್ ಚಾರ್ಜಿಂಗ್ ಅಲ್ಗಾರಿದಮ್‌ನಂತಹ ಹೆಚ್ಚುವರಿ ಫೀಚರ್ಸ್‌ಗಳು ಬ್ಯಾಟರಿ ದಕ್ಷತೆಯನ್ನು ನೀಡಲಿದೆ.

ಬಹು ನಿರೀಕ್ಷಿತ ಐಕ್ಯೂ Z9x ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ಐಕ್ಯೂ Z9x ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಲಭ್ಯತೆ: ಈ ಫೋನ್‌ನ 4GB + 128GB ವೇರಿಯಂಟ್‌ಗೆ 12,999 ರೂ.ಗಳ ಬೆಲೆಯಿದ್ದು, 11,999ರೂ.ಗಳ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದ್ದು, 6GB+128GB ವೇರಿಯಂಟ್‌ಗೆ 14,499 ರೂ.ಗಳ ಬೆಲೆ ನಿಗದಿ ಮಾಡಲಾಗಿದ್ದು, ನೀವು 12,999 ರೂ.ಗಳಲ್ಲಿ ಖರೀದಿ ಮಾಡಬಹುದಾಗಿದೆ. ಇದರ ಜೊತೆಗೆ 8GB+128GB ವೇರಿಯಂಟ್ ಬೆಲೆ 15,999ರೂ.ಗಳಾಗಿದ್ದು, ಇದನ್ನು 14,499 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ ಇ-ಸ್ಟೋರ್ ಮತ್ತು ಅಮೆಜಾನ್‌ ನಲ್ಲಿ ಖರೀದಿ ಮಾಡಬಹುದಾಗಿದೆ. ಹಾಗೆಯೇ ಟೊರ್ನಾಡೋ ಗ್ರೀನ್ ಮತ್ತು ಸ್ಟಾರ್ಮ್ ಗ್ರೇ ಬಣ್ಣದ ಆಯ್ಕೆಯಲ್ಲಿ ಲಭ್ಯ ಇದೆ.

Best Mobiles in India

English summary
IQOO Z9x smartphone has been launched and this phone is powered by Snapdragon 6 Gen 1 processor with 44W flash charging option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+