ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಎಂಟ್ರಿ ಕೊಟ್ಟ ಐಟೆಲ್ A05s! ಬೆಲೆ ಮಾತ್ರ ತುಂಬಾ ಕಡಿಮೆ!
ಐಟೆಲ್ ಕಂಪೆನಿ ಇತ್ತೀಚಿಗಷ್ಟೇ ಭಾರತದಲ್ಲಿ ಐಟೆಲ್ A05s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್‌ನ 4GB + 64GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಬಿಡುಗಡೆ ಮಾಡಿದೆ. ಇದರಿಂದ ಐಟೆಲ್ A05s ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಮತ್ತೊಂದು ಆಯ್ಕೆಯನ್ನು ನೀಡಿದೆ.
ಹೌದು, ಐಟೆಲ್ A05s ಸ್ಮಾರ್ಟ್‌ಫೋನ್ ಮತ್ತೊಂದು ವೇರಿಯೆಂಟ್ ಆಯ್ಕೆಯಲ್ಲಿ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಪ್ರಬಲ 1.6GHz ಯುನಿಸಾಕ್ SC9863A ಆಕ್ಟಾ-ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಸುಧಾರಿತ ಕಾರ್ಯಕ್ಷಮತೆಯನ್ನು ನೀಡಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಟೆಲ್ A05s ಡಿಸ್‌ಪ್ಲೇ ರಚನೆ ಹೇಗಿದೆ?
ಐಟೆಲ್ A05s ಸ್ಮಾರ್ಟ್‌ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದರ ಮೂಲಕ ಬಳಕೆದಾರರಿಗೆ ಡಿಸ್‌ಪ್ಲೇ ಮೂಲಕ ಅತ್ಯುತ್ತಮ ಅನುಭವವನ್ನು ನೀಡಲಿದೆ.
ಐಟೆಲ್ A05s ಪ್ರೊಸೆಸರ್ ಯಾವುದು?
ಐಟೆಲ್ A05s ಸ್ಮಾರ್ಟ್‌ಫೋನ್ ಪ್ರಬಲ 1.6GHz UNISOC ಆಕ್ಟಾ-ಕೋರ್ ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಗೋ ಆವೃತ್ತಿ ಆಪರೇಟಿಂಗ್ ಸಿಸ್ಟಮ್ ನಲ್ಲಿ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದು ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಿದೆ.

ಐಟೆಲ್ A05s ಕ್ಯಾಮೆರಾ ಸೆಟಪ್ ಏನಿದೆ?
ಐಟೆಲ್ A05s ಸ್ಮಾರ್ಟ್‌ಫೋನ್ 2GB ಆಯ್ಕೆಯಲ್ಲಿ 5MP ರಿಯರ್ ಕ್ಯಾಮೆರಾವನ್ನು ಹೊಂದಿತ್ತು. ಆದರೆ 4GB RAM ಆಯ್ಕೆಯು 8MP ಸೆನ್ಸಾರ್ ಸಾಮರ್ಥ್ಯದ ರಿಯರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಫೋಟೋಗಳು ಮತ್ತು ವೀಡಿಯೊಗಳಿಗಾಗಿ AI ಸೌಂದರ್ಯವರ್ಧಕ ವಿಧಾನಗಳೊಂದಿಗೆ 5MP ಸೆಲ್ಫಿ ಕ್ಯಾಮರಾವನ್ನು ಒಳಗೊಂಡಿದೆ.
ಐಟೆಲ್ A05s ಬ್ಯಾಟರಿ ಮತ್ತು ಇತರೆ
ಐಟೆಲ್ A05s ಸ್ಮಾರ್ಟ್‌ಫೋನ್ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 5W ಅಡಾಪ್ಟರ್ ಟೈಪ್-ಸಿ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G, ವೈಫೈ, ಬ್ಲೂಟೂತ್, ಜಿಪಿಎಸ್, ಗ್ಲೋನಾಸ್ GLONASS, ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್‌ಲಾಕ್, ಜಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಒಳಗೊಂಡಿದೆ.

ಐಟೆಲ್ A05s ಬೆಲೆ ಮತ್ತು ಲಭ್ಯತೆ
ಐಟೆಲ್ A05s ಸ್ಮಾರ್ಟ್‌ಫೋನ್ 6,099ರೂ ಬೆಲೆಗೆ ಲಭ್ಯವಾಗಲಿದೆ. ಇದು ಕ್ರಿಸ್ಟಲ್ ಬ್ಲೂ, ಗ್ಲೋರಿಯಸ್ ಆರೆಂಜ್, ಮೆಡೋ ಗ್ರೀನ್ ಮತ್ತು ನೆಬ್ಯುಲಾ ಬ್ಲಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
ಇನ್ನು ಐಟೆಲ್ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಐಟೆಲ್ ವಿಷನ್ 3 ಟರ್ಬೊ ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ HD+ IPS ವಾಟರ್‌ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 269PPI ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ. ಐಟೆಲ್ ವಿಷನ್ 3 ಟರ್ಬೊ ಸ್ಮಾರ್ಟ್‌ಫೋನ್ 1.6GHz ಆಕ್ಟಾ-ಕೋರ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರನ್ ಆಗಲಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಫೋನ್ ಅನ್ನು 20 ನಿಮಿಷಗಳ ಫ್ಲ್ಯಾಶ್ ಚಾರ್ಜಿಂಗ್‌ನೊಂದಿಗೆ 3 ಗಂಟೆಗಳ ಟಾಕ್ ಟೈಂ ನೀಡಲಿದೆ .


Click it and Unblock the Notifications








