ಭಾರತದಲ್ಲಿ ಐಟೆಲ್‌ A23S ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಜಸ್ಟ್‌ 5,299ರೂ.!

|

ಭಾರತದ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ಗಳಗೆ ಐಟೆಲ್‌ ಕಂಪೆನಿ ಪ್ರಸಿದ್ಧಿಯನ್ನು ಪಡೆದಿದೆ. ಅತ್ಯಂತ ಕಡಿಮೆ ಬೆಲೆಯ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಐಟೆಲ್‌ ಕಂಪೆನಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಐಟೆಲ್‌ ಕಂಪೆನಿ ಇದೀಗ ಹೊಸ ಐಟೆಲ್‌ A23S ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಹೈ-ಸ್ಪೀಡ್ ಡ್ಯುಯಲ್ 4G VoLTE ಕನೆಕ್ಟಿವಿಟಿ ಮತ್ತು HD ವಿಡಿಯೋ ಕಾಲಿಂಗ್ ಅನ್ನು ಬೆಂಬಲಿಸಲಿದೆ.

ಐಟೆಲ್‌

ಹೌದು, ಐಟೆಲ್‌ ಕಂಪೆನಿ ಭಾರತದಲ್ಲಿ ಹೊಸ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಐಟೆಲ್‌ A23S ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಭಾರತದ 14 ಹೆಚ್ಚುವರಿ ಭಾಷೆಗಳನ್ನು ಬೆಂಬಲಿಸಲಿದೆ. ಇದರಲ್ಲಿ ಹಿಂದಿ, ಗುಜರಾತಿ, ತಮಿಳು, ತೆಲುಗು, ಪಂಜಾಬಿ, ಅಸ್ಸಾಮಿ, ಬಂಗಾಳಿ, ಕನ್ನಡ, ಮಲಯಾಳಂ, ಕಾಶ್ಮೀರಿ, ಉರ್ದು, ನೇಪಾಳಿ, ಮರಾಠಿ ಮತ್ತು ಒರಿಯಾ ಸೇರಿದಂತೆ ಇಂಗ್ಲಿಷ್ ಭಾಷೆಗಳು ಸೇರಿವೆ. ಇನ್ನು ಐಟೆಲ್‌ A23S ಸ್ಮಾರ್ಟ್‌ಫೋನ್‌ ಕ್ವಾಡ್‌ ಕೋರ್‌ ಯೂನಿಸೋಕ್‌ SC9832E ಪ್ರೊಸೆಸರ್‌ ಅನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಐಟೆಲ್‌ A23S ಸ್ಮಾರ್ಟ್‌ಫೋನ್‌ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ವಿಜಿಎ ​​ಫ್ರಂಟ್ ಫೇಸಿಂಗ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ವಾಟ್ಸಾಪ್ ಕಾಲ್‌ ರೆಕಾರ್ಡಿಂಗ್, ಪೀಕ್ ಮೋಡ್, ಕಾಲ್‌ ಆಲರ್ಟ್‌ ಮತ್ತು ಸ್ಟೇಟಸ್ ಸೇವ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಐಟೆಲ್‌ A23S ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,299ರೂ.ಬೆಲೆಯನ್ನು ಹೊಂದಿದ್ದು, ಓಷನ್ ಬ್ಲೂ, ಸ್ಕೈ ಸಯಾನ್ ಮತ್ತು ಸ್ಕೈ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?

ಐಟೆಲ್‌ A23S ಸ್ಮಾರ್ಟ್‌ಫೋನ್‌ 5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 480x854 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೆಲ್ಫಿ ಕ್ಯಾಮೆರಾ ನ್ಯಾವಿಗೇಷನ್ ಟಚ್ ಬಟನ್‌ಗಳನ್ನು ಕ್ರಮವಾಗಿ ಇರಿಸಲು ಸ್ಕ್ರೀನ್‌ ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಥಿಕ್‌ ಸಮ್ಮಿತೀಯ ಬೆಜೆಲ್‌ಗಳನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ವೀಡಿಯೊ ಕರೆ ಮತ್ತು ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಐಟೆಲ್‌ A23S ಸ್ಮಾರ್ಟ್‌ಫೋನ್‌ ಕ್ವಾಡ್-ಕೋರ್ ಯೂನಿಸೋಕ್‌ SC9832E ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 32GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಕ್ಯಾಮೆರಾ ಸೆಟ್‌ಅಪ್‌ ಯಾವುದು?

ಐಟೆಲ್‌ A23S ಸ್ಮಾರ್ಟ್‌ಫೋನ್‌ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ವಿಜಿಎ ​​ಫ್ರಂಟ್ ಫೇಸಿಂಗ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಟೆಲ್‌ A23S ಸ್ಮಾರ್ಟ್‌ಫೋನ್‌ 3,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 24 ಗಂಟೆಗಳ 4G ಟಾಕ್-ಟೈಮ್ ಅನ್ನು ಒದಗಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE ವೈ-ಫೈ ಮತ್ತು ಬ್ಲೂಟೂತ್ v4.2 ವೈರ್‌ಲೆಸ್ ಸಂಪರ್ಕವನ್ನು ಬೆಂಬಲಿಸುತ್ತದೆ. ಇದು 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಇದಲ್ಲದೆ ಸ್ಮಾರ್ಟ್ ಫೇಸ್ ಅನ್‌ಲಾಕ್, ವಾಟ್ಸಾಪ್‌ಕಾಲ್‌ ರೆಕಾರ್ಡಿಂಗ್, ಬಹು-ಭಾಷಾ ಬೆಂಬಲ ಸೇರಿದಂತೆ ಅನೇಕ ಫೀಚರ್ಸ್‌ಗಳನ್ನು ಒಳಗೊಂಡಿದೆ.

ವಿಶೇಷ ಫೀಚರ್ಸ್‌ ಏನಿದೆ?

ವಿಶೇಷ ಫೀಚರ್ಸ್‌ ಏನಿದೆ?

ಈ ಸ್ಮಾರ್ಟ್‌ಫೋನ್‌ ಹೈ-ಸ್ಪೀಡ್ ಡ್ಯುಯಲ್ 4G VoLTE ಕನೆಕ್ಟಿವಿಟಿ ಮತ್ತು HD ವಿಡಿಯೋ ಕಾಲಿಂಗ್ ಅನ್ನು ಬೆಂಬಲಿಸುತ್ತದೆ. ಹಿಂದಿ, ಗುಜರಾತಿ, ತಮಿಳು, ತೆಲುಗು, ಪಂಜಾಬಿ, ಅಸ್ಸಾಮಿ, ಬಂಗಾಳಿ, ಕನ್ನಡ, ಮಲಯಾಳಂ, ಕಾಶ್ಮೀರಿ, ಉರ್ದು, ನೇಪಾಳಿ, ಮರಾಠಿ ಮತ್ತು ಒರಿಯಾ ಸೇರಿದಂತೆ ಇಂಗ್ಲಿಷ್ ಮತ್ತು 14 ಹೆಚ್ಚುವರಿ ಭಾರತೀಯ ಭಾಷೆಗಳನ್ನು ಬೆಂಬಲಿಸುತ್ತದೆ. ಇದಲ್ಲದೆ ಪೀಕ್ ಮೋಡ್, ಕಾಲ್‌ ಆಲರ್ಟ್‌ ಮತ್ತು ಸ್ಟೇಟಸ್ ಸೇವ್‌ನಂತಹ ಫೀಚರ್ಸ್‌ಗಳನ್ನು ಕೂಡ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಟೆಲ್‌ A23S ಸ್ಮಾರ್ಟ್‌ಫೋನ್‌ 2GB RAM + 32GB ಸ್ಟೋರೇಜ್ ಕಾನ್ಫಿಗರೇಶನ್ ಆಯ್ಕೆಗೆ 5,299ರೂ.ಬೆಲೆಯನ್ನು ಹೊಂದಿದೆ. ಇದು ಓಷನ್ ಬ್ಲೂ, ಸ್ಕೈ ಸಯಾನ್ ಮತ್ತು ಸ್ಕೈ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಆನ್‌ಲೈನ್ ಮತ್ತು ರಿಟೇಲ್‌ ಸ್ಟೋರ್‌ಗಳಲ್ಲಿ ಸೇಲ್‌ ಆಗಲಿದೆ ಎನ್ನಲಾಗಿದೆ.

ಐಟೆಲ್‌

ಇನ್ನು ಐಟೆಲ್‌ ಕಂಪೆನಿ ಭಾರತದಲ್ಲಿ ಕಳೆದ ವರ್ಷ ಐಟೆಲ್‌ A23 ಸ್ಮಾರ್ಟ್‌ಫೋನ್‌ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ ಕೂಡ ಎಂಟ್ರಿ ಲೆವೆಲ್‌ ಬೆಲೆಯಲ್ಲಿ ಎಂಟ್ರಿ ನೀಡಿತ್ತು. ಇನ್ನು ಈ ಸ್ಮಾರ್ಟ್‌ಫೋನ್‌ 720x1,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.7-ಇಂಚಿನ HD+ IPS ಡಿಸ್‌ಪ್ಲೇ ಹೊಂದಿದೆ. ಕ್ವಾಡ್-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ

ಸ್ಮಾರ್ಟ್‌ಫೋನ್‌

ಐಟೆಲ್‌ A23 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ 5 ಮೆಗಾಪಿಕ್ಸೆಲ್ AI ಸೆನ್ಸರ್ ಮತ್ತು VGA ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸೆಲ್ಫಿ ಕ್ಯಾಮೆರಾವು ಹೈ-ಡೆಫಿನಿಷನ್ ಇಮೇಜಿಂಗ್ ಸಾಮರ್ಥ್ಯಗಳೊಂದಿಗೆ ಚಿತ್ರವನ್ನು ಸೆರೆಹಿಡಿಯುತ್ತದೆ. 3,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Itel A23S With Smart Face Unlock Launched in India: Specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X