ಭಾರತದಲ್ಲಿ ಕೈಗೆಟಕುವ ಬೆಲೆಯ ಐಟೆಲ್ A26 ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಐಟೆಲ್‌ ಕಂಪೆನಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಬಜೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಇದೀಗ ತನ್ನ ಹೊಸ ಐಟೆಲ್ A26 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇನ್ನು ಹೆಸರಿಸದ 1.4GHz ಕ್ವಾಡ್-ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಐಟೆಲ್

ಹೌದು, ಐಟೆಲ್ ಕಂಪೆನಿ ಹೊಸ ಐಟೆಲ್ A26 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5.7-ಇಂಚಿನ HD+ IPS ಡಿಸ್‌ಪ್ಲೇ ಹೊಂದಿದೆ. ಈ ಫೋನ್‌ ಆಂಡ್ರಾಯ್ಡ್ 10 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಸೋಶಿಯಲ್ ಟರ್ಬೊ ಫೀಚರ್‌ನೊಂದಿಗೆ ಬಂದಿದ್ದು, ಬಳಕೆದಾರರಿಗೆ ವಾಟ್ಸಾಪ್‌ ಕರೆಗಳನ್ನು ರೆಕಾರ್ಡ್ ಮಾಡಲು, ಸ್ಟೇಟಸ್‌ಗಳನ್ನು ಸೇವ್‌ ಮಾಡುವುದಕ್ಕೆ ಅವಕಾಶ ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಐಟೆಲ್ A26 720x1,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.7-ಇಂಚಿನ HD+ IPS ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಈ ಡಿಸ್‌ಪ್ಲೇ 19:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಐಟೆಲ್‌ A26 ಸ್ಮಾರ್ಟ್‌ಫೋನ್‌ ಇನ್ನೂ ಹೆಸರಿಸಿದ 1.4GHz ಕ್ವಾಡ್-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಐಟೆಲ್‌ A26 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ 5 ಮೆಗಾಪಿಕ್ಸೆಲ್ AI ಸೆನ್ಸರ್ ಮತ್ತು VGA ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸೆಲ್ಫಿ ಕ್ಯಾಮೆರಾವು ಹೈ-ಡೆಫಿನಿಷನ್ ಇಮೇಜಿಂಗ್ ಸಾಮರ್ಥ್ಯಗಳೊಂದಿಗೆ ಚಿತ್ರವನ್ನು ಸೆರೆಹಿಡಿಯುತ್ತದೆ. ಇದು ಬ್ಲರ್‌ ಮತ್ತು ಯಾವುದೇ ಬೆಳಕಿನ ಪ್ರದೇಶಗಳಲ್ಲಿಯೂ ಸಹ ಬ್ರೈಟ್‌ನೆಸ್‌ ಹೊಂದಿರುವ ಮತ್ತು ಸ್ಪಷ್ಟವಾದ ಚಿತ್ರಗಳನ್ನು ಖಾತ್ರಿಪಡಿಸುತ್ತದೆ. ಇದು ಪೋರ್ಟ್ರೇಟ್ ಮೋಡ್, ಬ್ಯೂಟಿ ಮೋಡ್, ನಂತಹ ಮಲ್ಟಿ ಕ್ಯಾಮರಾ ಎಫೆಕ್ಟ್‌ಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಟೆಲ್‌ A26 ಸ್ಮಾರ್ಟ್‌ಫೋನ್‌ 3,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE, 4G ViLTE, 3G ಮತ್ತು 2G ನೆಟ್‌ವರ್ಕ್‌ಗಳನ್ನು ಬೆಂಬಲಿಸಲಿದೆ. ಜೊತೆಗೆ ಇದು ಸೋಶಿಯಲ್ ಟರ್ಬೊ ಫೀಚರ್‌ನೊಂದಿಗೆ ಬಂದಿದ್ದು, ಬಳಕೆದಾರರಿಗೆ ವಾಟ್ಸಾಪ್ ಕರೆಗಳನ್ನು ರೆಕಾರ್ಡ್ ಮಾಡಲು, ಸ್ಟೇಟಸ್‌ಗಳನ್ನು ಉಳಿಸಲು, ಕರೆ ಅಲರ್ಟ್‌ಗಳು ಮತ್ತು ಪೀಕ್ ಮೋಡ್ ಫಂಕ್ಷನ್‌ಗಳೊಂದಿಗೆ ಅನುಮತಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಟೆಲ್‌ A26 ಸ್ಮಾರ್ಟ್‌ಫೋನ್‌ ಭಾರತದಲ್ಲಿ 5,999ರೂ,ಬೆಲೆಯನ್ನು ಹೊಂದಿದೆ. ಆದರೆ ಫ್ಲಿಪ್ ಕಾರ್ಟ್ ನಲ್ಲಿ ಈ ಸ್ಮಾರ್ಟ್‌ಫೋನ್‌ 6,399ರೂ ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡೀಪ್ ಬ್ಲೂ, ಗ್ರೇಡೇಶನ್ ಗ್ರೀನ್ ಮತ್ತು ಲೈಟ್ ಪರ್ಪಲ್ ಕಲರ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದನ್ನು ಖರೀದಿಸಿದಾಗಿನಿಂದ 100 ದಿನಗಳವರೆಗೆ ಮಾನ್ಯವಾಗಿರುವ ಒನ್-ಟೈಮ್ ಸ್ಕ್ರೀನ್ ರಿಪ್ಲೇಸ್ಮೆಂಟ್ ಆಫರ್ ಅನ್ನು ಸಹ ನೀಡಲಾಗುತ್ತದೆ.

Most Read Articles
Best Mobiles in India

English summary
Itel A26 has been launched in India on September 22 as a budget-friendly offering from the brand.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X