Home
ಸುದ್ದಿಜಾಲ

ಭಾರತದಲ್ಲಿ ಕೈ ಗೆಟಕುವ ಬೆಲೆಯ ಐಟೆಲ್‌ A48 ಸ್ಮಾರ್ಟ್‌ಫೋನ್‌ ಲಾಂಚ್‌!

ಐಟೆಲ್‌ ಕಂಪೆನಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಐಟೆಲ್‌ ಕಂಪೆನಿ ಹೊಸ ಐಟೆಲ್‌ A48 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಜೆಟ್ ಸ್ನೇಹಿಯಾಗಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ಹೊಂದಿದೆ.

ಐಟೆಲ್‌ A48

ಹೌದು, ಐಟೆಲ್‌ ಕಂಪೆನಿ ಭಾರತದಲ್ಲಿ ಹೊಸ ಐಟೆಲ್‌ A48 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.1-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ 1.4GHz ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 2GB RAM ಮತ್ತು 32GB ಆನ್‌ಬೋರ್ಡ್ ಸ್ಟೋರೇಜ್ ಒಳಗೊಂಡಿದೆ. ಜೊತೆಗೆ 3,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಐಟೆಲ್‌ A48 ಸ್ಮಾರ್ಟ್‌ಫೋನ್‌ 1,560x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.1 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ ಸೆಲ್ಫಿ ಕ್ಯಾಮೆರಾಕ್ಕಾಗಿ ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಡ್ ಕೋರ್ 1.4GHz ಪ್ರೊಸೆಸರ್‌ ಬಲವನ್ನು ಹೊಂದಿದೆ, ಆಂಡ್ರಾಯ್ಡ್ 10 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 128GBಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಎರಡು 5 ಮೆಗಾಪಿಕ್ಸೆಲ್ AI- ಚಾಲಿತ ಸೆನ್ಸಾರ್‌ಗಳನ್ನು ಒಳಗೊಂಡಿರುವ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಫ್ರಂಟ್‌ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 3,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ 4G VoLTE/ ViLTE ಸಂಪರ್ಕ, ವೈ-ಫೈ, ಬ್ಲೂಟೂತ್, ಯುಎಸ್‌ಬಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಇದು ಫೇಸ್ ಅನ್‌ಲಾಕ್ ಮತ್ತು ಹಿಂಭಾಗದಲ್ಲಿ ಜೋಡಿಸಲಾದ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಪಡೆಯುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಹೊಸ ಐಟೆಲ್‌ A48 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಏಕೈಕ 2GB + 32GB ಸಂಗ್ರಹ ಮಾದರಿಗಾಗಿ 6,399.ರೂ ಬೆಲೆಯನ್ನು ಹೊಂದಿದೆ. ಇದನ್ನು ಅಮೆಜಾನ್ ಮೂಲಕ ಖರೀದಿಸಲು ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಗ್ರೇಡೇಶನ್ ಬ್ಲಾಕ್, ಗ್ರೇಡೇಶನ್ ಗ್ರೀನ್ ಮತ್ತು ಗ್ರೇಡೇಶನ್ ಪರ್ಪಲ್ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಒಂದು ಬಾರಿ ಸ್ಕ್ರೀನ್ ರಿಪ್ಲೇಸ್ಮೆಂಟ್ ಆಫರ್ ನೊಂದಿಗೆ ಬಂದಿದ್ದು, ಗ್ರಾಹಕರು ಖರೀದಿಸಿದ 100 ದಿನಗಳ ಒಳಗೆ ಪಡೆಯಬಹುದು. ಐಟೆಲ್‌ ತನ್ನ ಗ್ರಾಹಕರಿಗೆ ವಿವಿಧ Jio- ಸಂಬಂಧಿತ ಪ್ರಯೋಜನಗಳನ್ನು ನೀಡುತ್ತಿದೆ.

Best Mobiles in India

English summary
Itel A48 has been launched in India as a budget-friendly offering from the Chinese company.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+