Just In
Don't Miss
- Automobiles
ಸಪ್ತ ಸಾಗರದಾಚೆಯೂ ಮಹೀಂದ್ರಾ ಕಾರಿಗೆ ಬೇಡಿಕೆ... ನೇಪಾಳದಲ್ಲಿ ಎಕ್ಸ್ಯುವಿ700 ಬಿಡುಗಡೆ
- News
ಚಿರತೆ ಹಾವಳಿ ತಡೆಗೆ ಟಾಸ್ಕ್ ಪೋರ್ಸ್ ರಚಿಸಿ ಆದೇಶ ಹೊರಡಿಸಿದ ಸರ್ಕಾರ, ತಂಡಗಳ ವಿವರ ಇಲ್ಲಿದೆ
- Movies
"ಕಾಂತಾರ' ಯಾಕೆ ಆಸ್ಕರ್ಗೆ ನಾಮಿನೇಟ್ ಆಗ್ಲಿಲ್ಲ ಅಂದ್ರೆ? ಸೀಕ್ವೆಲ್ಗೆ ಪ್ರಶಸ್ತಿ ಗ್ಯಾರೆಂಟಿ": ವಿಜಯ್ ಕಿರಗಂದೂರ್
- Sports
Union Budget 2023: ಕಳೆದ ಬಾರಿಗಿಂತ 700 ಕೋಟಿ ರೂ. ಅಧಿಕ ಪಡೆದ ಕ್ರೀಡಾ ಸಚಿವಾಲಯ
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Lifestyle
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಅಗ್ಗದ ಬೆಲೆಯ ಐಟೆಲ್ A49 ಸ್ಮಾರ್ಟ್‌ಫೋನ್ ಬಿಡುಗಡೆ!
ಭಾರತದ ಟೆಕ್ ಮಾರುಕಟ್ಟೆಯಲ್ಲಿ ಐಟೆಲ್ ಕಂಪೆನಿ ತನ್ನ ಬಜೆಟ್ ಬೆಲೆಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಎಂಟ್ರಿ ಲೆವೆಲ್ ಪ್ರೈಸ್ ಟ್ಯಾಗ್‌ನಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಐಟೆಲ್ A49 ಸ್ಮಾರ್ಟ್‌ಫೋನ್ ಅನ್ನು ಬಜೆಟ್ ಪ್ರೈಸ್‌ನಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂರು ವಿಭಿನ್ನ ಬಣ್ಣ ಆಯ್ಕೆಗಳೊಂದಿಗೆ ಬರಲಿದೆ. ಇದು ವಾಟರ್‌ಡ್ರಾಪ್-ಶೈಲಿಯ ನಾಚ್ ಡಿಸ್‌ಪ್ಲೇಯನ್ನು ಹೊಂದಿದ್ದು, ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾ ಎಫೆಕ್ಟ್‌ಗಳನ್ನು ಒಳಗೊಂಡಿದೆ.

ಹೌದು, ಐಟೆಲ್ ಕಂಪೆನಿ ಭಾರತದಲ್ಲಿ ಹೊಸ ಐಟೆಲ್ A49 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 6.6 ಇಂಚಿನ HD+ IPS ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್-ಕೋರ್ 1.4GHz ಪ್ರೊಸೆಸರ್ ಬಲವನ್ನು ಪಡೆದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಟೆಲ್ A49 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಶೈಲಿಯನ್ನು ಹೊಂದಿದೆ. ಇದು 60Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಐಟೆಲ್ A49 ಸ್ಮಾರ್ಟ್‌ಫೋನ್ ಕ್ವಾಡ್-ಕೋರ್ 1.4GHz ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಅನ್ನು ಬಳಸಿಕೊಂಡು 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, AI ಚಾಲಿತ ಸೆನ್ಸಾರ್ ಒಳಗೊಂಡಿರುವ LED ಫ್ಲ್ಯಾಷ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸೆಲ್ಫಿ ಕ್ಯಾಮೆರಾ AI ಬ್ಯೂಟಿ ಮೋಡ್‌ನಂತಹ ಫೀಚರ್ಸ್‌ಗಳನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಐಟೆಲ್ A49 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLTE/ ViLTE , Wi-Fi, ಬ್ಲೂಟೂತ್ ಮತ್ತು USB ಪೋರ್ಟ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಫೇಸ್ ಅನ್‌ಲಾಕ್ ಫೀಚರ್ಸ್ ಅನ್ನು ಬೆಂಬಲಿಸುತ್ತದೆ ಮತ್ತು ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಐಟೆಲ್ A49 ಸ್ಮಾರ್ಟ್‌ಫೋನ್ ಬೆಲೆ ಏಕೈಕ 2GB RAM + 32GB ಸ್ಟೋರೇಜ್ ಮಾದರಿಗೆ 6,499ರೂ ಆಗಿದೆ. ಇದು ಕ್ರಿಸ್ಟಲ್ ಪರ್ಪಲ್, ಡೋಮ್ ಬ್ಲೂ, ಸ್ಕೈ ಸಯಾನ್ ಬಣ್ಣಗಳ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಇನ್ನು ಈ ಫೋನ್ ಕಂಪನಿಯ ವೆಬ್‌ಸೈಟ್ ಮೂಲಕ ಖರೀದಿಸಲು ಲಭ್ಯವಿದೆ. ಈ ಹೊಸ ಐಟೆಲ್ ಫೋನ್ ಉಚಿತ ಒನ್-ಟೈಮ್ ಸ್ಕ್ರೀನ್ ರಿಪ್ಲೇಸ್‌ಮೆಂಟ್ ಆಫರ್‌ನೊಂದಿಗೆ ಬರುತ್ತದೆ ಮತ್ತು ಗ್ರಾಹಕರು ಖರೀದಿಸಿದ 100 ದಿನಗಳಲ್ಲಿ ಪಡೆಯಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470