Home
ಸುದ್ದಿಜಾಲ

itel:128GB ಸ್ಟೋರೇಜ್‌ ಆಯ್ಕೆಯ ಈ ಫೋನ್‌ಗೆ 32% ಡಿಸ್ಕೌಂಟ್‌: ಗ್ರಾಹಕರಿಗೆ ಅಚ್ಚರಿ!

ಬಜೆಟ್‌ ಬೆಲೆಯಲ್ಲಿ ಎಂಟ್ರಿ ಕೊಡುವ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಮಾಡಿದ್ದ ಐಟೆಲ್‌ A70 ಫೋನ್‌ ಇದೀಗ ಮತ್ತೆ ಸೌಂಡ್‌ ಮಾಡಿದೆ. ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ತಾಣದಲ್ಲಿ ಡಿಸ್ಕೌಂಟ್‌ ಪಡೆದುಕೊಳ್ಳುವ ಮೂಲಕ ಗ್ರಾಹಕರನ್ನು ಅಚ್ಚರಿಗೆ ದೂಡಿದೆ. ಈ ಸ್ಮಾರ್ಟ್‌ಫೋನಿನ 128GB ಸ್ಟೋರೇಜ್‌ ಆಯ್ಕೆಯು ಇದೀಗ 32% ಡಿಸ್ಕೌಂಟ್‌ನಲ್ಲಿದೆ.

ಹೌದು, ಐಟೆಲ್‌ A70 ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಭಾರಿ ರಿಯಾಯಿತಿಯಲ್ಲಿ ದೊರೆಯುತ್ತಿದೆ. ಇನ್ನು ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ Unisoc T603 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಹಾಗಾದ್ರೆ ಐಟೆಲ್‌ A70 ಸ್ಮಾರ್ಟ್‌ಫೋನ್‌ ಮೇಲಿನ ಡಿಸ್ಕೌಂಟ್‌ ನಂತರ ಬೆಲೆ ಎಷ್ಟಿದೆ? ಇದರ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

itel:128GB ಸ್ಟೋರೇಜ್‌ ಆಯ್ಕೆಯ ಈ ಫೋನ್‌ಗೆ 32% ಡಿಸ್ಕೌಂಟ್‌:ಗ್ರಾಹಕರಿಗೆ ಅಚ್ಚರಿ

ಐಟೆಲ್‌ A70 ಡಿಸ್ಕೌಂಟ್‌ ಏನಿದೆ?
ಐಟೆಲ್‌ A70 ಸ್ಮಾರ್ಟ್‌ಫೋನಿನ ಅಮೆಜಾನ್‌ ತಾಣದಲ್ಲಿ 12GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯು 9,999ರೂ ಬೆಲೆಯಲ್ಲಿ ಪಟ್ಟಿ ಮಾಡಲಾಗಿದೆ. ಆದರೆ 32% ಡಿಸ್ಕೌಂಟ್‌ ಪಡೆದುಕೊಂಡಿದ್ದು 6,799ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ವಿವಿಧ ಬ್ಯಾಂಕ್‌ ಆಫರ್‌ಗಳು ಕೂಡ ಲಭ್ಯವಾಗುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇನ್ನಷ್ಟು ಕಡಿತವಾಗಲಿದೆ.

ಐಟೆಲ್‌ A70 ಫೀಚರ್ಸ್‌ ಹೇಗಿದೆ?
ಐಟೆಲ್‌ A70 ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಆಯ್ಕೆಯನ್ನು ಪಡೆದಿದೆ. ಇನ್ನು ಡಿಸ್‌ಪ್ಲೇಯು 120Hz ವರೆಗಿನ ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದಿದ್ದು, 500 ನಿಟ್ಸ್‌ನ ಬ್ರೈಟ್‌ನೆಸ್ ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆ ಹೋಲುವ ಡೈನಾಮಿಕ್ ಬಾರ್ ಫೀಚರ್ಸ್‌ ಅನ್ನು ಸಹ ಒಳಗೊಂಡಿದೆ.

itel:128GB ಸ್ಟೋರೇಜ್‌ ಆಯ್ಕೆಯ ಈ ಫೋನ್‌ಗೆ 32% ಡಿಸ್ಕೌಂಟ್‌:ಗ್ರಾಹಕರಿಗೆ ಅಚ್ಚರಿ

ಐಟೆಲ್‌ A70 ಪ್ರೊಸೆಸರ್‌ ಏನಿದೆ?
ಐಟೆಲ್‌ A70 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Unisoc T603 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಗೋ ಆವೃತ್ತಿ ಆಧಾರಿತ ಐಟೆಲ್‌ಓಎಸ್‌ 13ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಾಗಿದೆ.

ಐಟೆಲ್‌ A70 ಕ್ಯಾಮೆರಾ ಸೆಟಪ್‌ ಎಷ್ಟಿದೆ?
ಐಟೆಲ್‌ A70 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಎರಡನೇ ಕ್ಯಾಮೆರಾ 0.08 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಬೇಸಿಕ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

itel:128GB ಸ್ಟೋರೇಜ್‌ ಆಯ್ಕೆಯ ಈ ಫೋನ್‌ಗೆ 32% ಡಿಸ್ಕೌಂಟ್‌:ಗ್ರಾಹಕರಿಗೆ ಅಚ್ಚರಿ

ಐಟೆಲ್‌ A70 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಐಟೆಲ್‌ A70 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಿದೆ. ಇದಕ್ಕೆ ಪೂರಕವಾಗಿ 10W ಸಾಮರ್ಥ್ಯ ಫಾಸ್ಟ್‌ ಚಾರ್ಜಿಂಗ್‌ ಬೆಂಬಲವನ್ನು ಒಳಗೊಂಡಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ ಒಂದು ದಿನ ಪೂರ್ತಿ ಬ್ಯಾಕಪ್‌ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಚಾರ್ಜಿಂಗ್‌ ಬೆಂಬಲವನ್ನು ಪಡೆದಿದೆ.

ಐಟೆಲ್‌ A70 ಕಲರ್‌ ಮತ್ತು ಆಯ್ಕೆ
ಐಟೆಲ್‌ A70 ಸ್ಮಾರ್ಟ್‌ಫೋನ್‌ ಪ್ರಸ್ತುತ ಬ್ಲೂ, ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ. ಇದರ 12GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯು ಅಮೆಜಾನ್‌ನಲ್ಲಿ ಕೇವಲ 6,799ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
itel A70 Smartphone Get 32% Discount in Amazon: 128GB Storage Capacity
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+