Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಅಧಿಕ ಸ್ಟೋರೇಜ್‌ ಇರುವ ಈ ಫೋನ್‌ ನಾಳೆಯಿಂದ ಖರೀದಿಗೆ ಲಭ್ಯ!

ಐಟೆಲ್‌ ಮೊಬೈಲ್‌ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಪರಿಚಯಿಸುವುದನ್ನು ಮುಂದುವರಿಸಿದ್ದು, ಇತ್ತೀಚಿನ ಕೆಲವು ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಐಟೆಲ್‌ A70 ಅನ್ನು ಭಾರತದಲ್ಲಿ ಲಾಂಚ್ ಮಾಡಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ನಾಳೆ (ಜ. 5 ರಂದು) ಅಮೆಜಾನ್‌ ತಾಣ ಹಾಗೂ ಪ್ರಮುಖ ಸ್ಟೋರ್‌ಗಳ ಮೂಲಕ ಮಾರಾಟ ಆರಂಭಿಸಲಿದೆ.

ಹೌದು, ಐಟೆಲ್‌ A70 ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಜ. 5 ರಿಂದ ಮಾರಾಟ ಆರಂಭಿಸಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ಸ್ಟೋರೇಜ್‌ ಸಾಮರ್ಥ್ಯದ ಫೋನ್‌ ಖರೀದಿಸುವ ಗ್ರಾಹಕರಿಗೆ ಈ ಫೋನ್‌ ಉತ್ತಮ ಆಯ್ಕೆ ಆಗಿ ಕಾಣಿಸಿಕೊಳ್ಳಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್‌ನಿಂದ ಕೆಲಸ ಮಾಡಲಿದೆ.

ಅಗ್ಗದ ಬೆಲೆಯಲ್ಲಿ ಅಧಿಕ ಸ್ಟೋರೇಜ್‌ ಇರುವ ಈ ಫೋನ್‌ ನಾಳೆಯಿಂದ ಖರೀದಿಗೆ ಲಭ್ಯ!

ಐಟೆಲ್‌ A70 ಫೋನಿನ ಆರಂಭಿಕ ಬೆಲೆಯು 5,999ರೂ. ಆಗಿದೆ. ಇದು ಡ್ಯುಯಲ್ ಸಿಮ್-ಸಪೋರ್ಟ್‌ ಜೊತೆಗೆ ಆಂಡ್ರಾಯ್ಡ್‌ 13 ಗೋ ಆವೃತ್ತಿ-ಆಧಾರಿತ ಐಟೆಲ್‌ ಓಎಸ್‌ ನಲ್ಲಿ ರನ್‌ ಆಗಲಿದೆ. ಹಾಗೆಯೇ ಡೈನಾಮಿಕ್ ಬಾರ್ ಫೀಚರ್ಸ್‌ ಅನ್ನು ಸಹ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಟೆಲ್‌ A70 ಫೋನಿನ ಫೀಚರ್ಸ್‌ ಹೀಗಿವೆ

Itel A70 ಮೊಬೈಲ್‌ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 500 ನಿಟ್ಸ್‌ನ ಬ್ರೈಟ್‌ನೆಸ್ ಲೆವೆಲ್‌ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಡೈನಾಮಿಕ್ ಬಾರ್ ಫೀಚರ್ಸ್‌ನೊಂದಿದೆ ಬರಲಿದೆ.

ಅಗ್ಗದ ಬೆಲೆಯಲ್ಲಿ ಅಧಿಕ ಸ್ಟೋರೇಜ್‌ ಇರುವ ಈ ಫೋನ್‌ ನಾಳೆಯಿಂದ ಖರೀದಿಗೆ ಲಭ್ಯ!

ಐಟೆಲ್‌ A70 ಮೊಬೈಲ್‌ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್‌ ಹೊಂದಿದೆ. ಇದು ಆಂಡ್ರಾಯ್ಡ್‌ 13 Go ಆವೃತ್ತಿ ಆಧಾರಿತ ItelOS 13 ನಲ್ಲಿ ರನ್‌ ಆಗಲಿದೆ. ಹಾಗೆಯೇ 4GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಲ್ಲಿ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 12GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಐಟೆಲ್‌ A70 ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ನಲ್ಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಅನಿರ್ದಿಷ್ಟ AI-ಬೆಂಬಲಿತ ಸೆಕೆಂಡರಿ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಐಟೆಲ್‌ A70 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi 802.11, ಬ್ಲೂಟೂತ್ 5.0, GPS/GLONASS, ಮತ್ತು USB ಟೈಪ್-C ಹಾಗೂ ಹೆಡ್‌ಫೋನ್‌ ಜ್ಯಾಕ್‌ ಸಂಪರ್ಕವನ್ನು ಬೆಂಬಲಿಸುತ್ತದೆ. ಇದಲ್ಲದೆ ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬರುತ್ತದೆ.

ಈ ಮೊಬೈಲ್‌ ಭಾರತದಲ್ಲಿ ಬೇಸ್‌ ಮಾಡೆಲ್‌ 4GB + 64GB, 4GB + 128GB ಹಾಗೂ 4GB + 256GB ರೂಪಾಂತರದ ಆಯ್ಕೆ ಪಡೆದಿದೆ. ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಬಣ್ಣಗಳಲ್ಲಿ ಆಯ್ಕೆ ಪಡೆದಿದೆ. ಗ್ರಾಹಕರು ಅಮೆಜಾನ್ ವೆಬ್‌ಸೈಟ್ ಮತ್ತು ಪ್ರಮುಖ ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಸಬಹುದು.

Best Mobiles in India

English summary
itel A70 to go on first sale tomorrow. offer, price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+