ಭಾರತದಲ್ಲಿ ಐಟೆಲ್ ವಿಷನ್ 2 ಸ್ಮಾರ್ಟ್‌ಫೋನ್ ಅನಾವರಣ! ಆಕರ್ಷಕ ಫೀಚರ್ಸ್!
ಟೆಕ್ ವಲಯದಲ್ಲಿ ಐಟೆಲ್ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ಮನ ಗೆದ್ದಿದೆ. ಸದ್ಯ ಇದೀಗ ಹೊಸ "ಐಟೆಲ್ ವಿಷನ್ 2'' ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಒಟ್ಟಾರೆ ಕಾರ್ಯಕ್ಷಮತೆ, ಬಿಗ್ ಡಿಸ್‌ಪ್ಲೇ ಮತ್ತು ಪ್ರೀಮಿಯಂ ಡಿಸೈನ್ ಹೊಸ ಮಾನದಂಡಗಳನ್ನು ಹೊಂದಿಸಲು ವಿನ್ಯಾಸಗೊಳಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6-ಇಂಚಿನ ಹೆಚ್‌ಡಿ + ಐಪಿಎಸ್ ಡಾಟ್-ಇನ್ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ಐಟೆಲ್ ಸಂಸ್ಥೆ ಹೊಸ ಐಟೆಲ್ ವಿಷನ್ 2 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದೆ. ಇದು 1.6GHz ಗಡಿಯಾರದ ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಐಟೆಲ್ ವಿಷನ್ 2 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಹೆಚ್‌ಡಿ + ಐಪಿಎಸ್ ಡಾಟ್-ಇನ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್-ಸೆಲ್ ತಂತ್ರಜ್ಞಾನ, 2.5ಎಫ್ ಕರ್ವ್ಡ್ ಗ್ಲಾಸ್, 450 ನಿಟ್ಸ್ ಬ್ರೈಟ್‌ನೆಸ್ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್
ಇದು 1.6GHz ಗಡಿಯಾರದ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 2GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಜೊತೆಗೆ ಇದರಲ್ಲಿ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಐಟೆಲ್ ವಿಷನ್ 2 ಸ್ಮಾರ್ಟ್‌ಫೋನ್ ಎಐ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಎಲ್ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದು ಎಐ ಮೋಡ್, ಪೋರ್ಟ್ರೇಟ್ ಮೋಡ್, ಪನೋ ಮೋಡ್, ಪ್ರೊ ಮೋಡ್, ಲೋ ಲೈಟ್ ಮೋಡ್ ಮತ್ತು ಹೆಚ್‌ಡಿಆರ್ ಮೋಡ್‌ನಂತಹ ವಿವಿಧ ಫಿಲ್ಟರ್‌ಗಳು ಮತ್ತು ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 7 ಗಂಟೆಗಳ ವೀಡಿಯೊ, 35 ಗಂಟೆಗಳ ಮ್ಯೂಸಿಕ್, 25 ಗಂಟೆಗಳ ಕರೆ ಮತ್ತು 300 ಗಂಟೆಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸುತ್ತದೆ ಎಂದು ಹೇಳಲಾಗಿದೆ. ಇಂಟರ್‌ಬಿಲ್ಟ್ AI ಪವರ್ ಮಾಸ್ಟರ್ ಬ್ಯಾಟರಿ ಬ್ಯಾಕಪ್ ಅನ್ನು 10% ಹೆಚ್ಚಿಸಲು ಸಹಾಯ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಆಕ್ಟಿವ್ 4 ಜಿ VoLTE, VoWIFI, ಮತ್ತು ಫಿಂಗರ್‌ಪ್ರಿಂಟ್ ರೀಡರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಐಟೆಲ್ ವಿಷನ್ 2 ಬೆಲೆ 7,499 ರೂ. ಆಗಿದೆ. ಹ್ಯಾಂಡ್‌ಸೆಟ್ ಗ್ರೇಡೇಶನ್ ಗ್ರೀನ್ ಮತ್ತು ಡೀಪ್ ಬ್ಲೂ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications




