Home
ಸುದ್ದಿಜಾಲ

ಭಾರತದಲ್ಲಿ itel Color Pro 5G ಸ್ಮಾರ್ಟ್‌ಫೋನ್‌ ಬಿಡುಗಡೆ; ಬೆಲೆ 9,999ರೂ!

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಐಟೆಲ್‌ (itel) ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಟೆಲ್‌ ಕಲರ್‌ ಪ್ರೊ 5G (itel ColorPro 5G) ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸಂಸ್ಥೆಯ ಹೊಸ ಫ್ಲ್ಯಾಗ್‌ಶಿಪ್‌ ಮಾದರಿಯ 5G ಮೊಬೈಲ್ ಆಗಿದ್ದು, ಕೆಲವು ಅಪ್‌ಡೇಟ್‌ ಫೀಚರ್ಸ್‌ಗಳೊಂದಿಗೆ ಲಗ್ಗೆ ಇಟ್ಟಿದೆ. ಇನ್ನು ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಪಡೆದಿದ್ದು, ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಹೌದು, ಐಟೆಲ್‌ (itel) ಸಂಸ್ಥೆಯು ಹೊಸದಾಗಿ ಐಟೆಲ್‌ ಕಲರ್‌ ಪ್ರೊ 5G (itel ColorPro 5G) ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಇದರ ಜೊತೆಗೆ 6GB+6GB RAM + 128 GB ROM ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ.

ಭಾರತದಲ್ಲಿ itel Color Pro 5G ಸ್ಮಾರ್ಟ್‌ಫೋನ್‌ ಬಿಡುಗಡೆ; ಬೆಲೆ 9,999ರೂ!

ಹಾಗೆಯೇ ಈ ನೂತನ 5G ಫೋನ್‌ 6GB+6GB RAM + 128 GB ROM ಸ್ಟೋರೇಜ್‌ ವೇರಿಯಂಟ್‌ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಲ್ಯಾವೆಂಡರ್ ಫ್ಯಾಂಟಸಿ ಮತ್ತು ರಿವರ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಐಟೆಲ್‌ ಕಲರ್‌ ಪ್ರೊ 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಐಟೆಲ್‌ ಕಲರ್‌ ಪ್ರೊ 5G ಫೀಚರ್ಸ್‌

ಐಟೆಲ್‌ ಕಲರ್‌ ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಪಡೆದಿದ್ದು, ಉತ್ತಮ ಬ್ರೈಟ್‌ನೆಸ್‌ ಲೆವೆಲ್‌ ಪಡೆದಿದೆ.

ಐಟೆಲ್‌ ಕಲರ್‌ ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 6GB + 6GB RAM + 128 GB ROM ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಪಡೆದಿದೆ.

ಐಟೆಲ್‌ ಕಲರ್‌ ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್, ದ್ವಿತೀಯ ಕ್ಯಾಮೆರಾ AI ಸಪೋರ್ಟ್‌ ಹೊಂದಿದೆ. ಇನ್ನು ಮುಂಭಾಗದಲ್ಲಿ ಈ ಫೋನ್ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಇದು ಒಳಗೊಂಡಿದೆ.

ಐಟೆಲ್‌ ಕಲರ್‌ ಪ್ರೊ 5G ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಆಡಿಯೋ, ಎಫ್‌ಎಂ ರೇಡಿಯೋ, ಸ್ಟಿರಿಯೊ ಸ್ಪೀಕರ್‌ಗಳು, 5G, ಡ್ಯುಯಲ್ 4G VoLTE, Wi-Fi 6, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಅನ್ನು ಸಪೋರ್ಟ್‌ ಮಾಡುತ್ತದೆ.

ಬೆಲೆ ಮತ್ತು ಲಭ್ಯತೆ

ಐಟೆಲ್‌ ಕಲರ್‌ ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆಯು 9,999ರೂ. ಗಳು ಆಗಿದೆ. ಇನ್ನು ಸ್ಮಾರ್ಟ್‌ಫೋನ್‌ ಲ್ಯಾವೆಂಡರ್ ಫ್ಯಾಂಟಸಿ ಮತ್ತು ರಿವರ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
itel Color Pro 5G With 50MP dual rear camera Launched in India. Check Price, offer, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+