Home
ಸುದ್ದಿಜಾಲ

ಐಟೆಲ್‌ A70 ಫೋನ್‌ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ; ಗ್ರಾಹಕರಿಗೆ ಉಳಿತಾಯ!

ಅಗ್ಗದ ಮೊಬೈಲ್‌ ಬ್ರ್ಯಾಂಡ್‌ಗಳ ಪೈಕಿ ಐಟೆಲ್‌ ಸಹ ಒಂದಾಗಿದೆ. ಈ ಸಂಸ್ಥೆಯು ಕಡಿಮೆ ಬೆಲೆಯಲ್ಲಿ ಹಲವು ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ತನ್ನದೇ ಗ್ರಾಹಕ ವರ್ಗವನ್ನು ಪಡೆದುಕೊಂಡಿದೆ. ಸಂಸ್ಥೆಯು ಜನಪ್ರಿಯ ಫೋನ್‌ಗಳ ಪೈಕಿ ಐಟೆಲ್‌ A70 ಫೋನ್‌ ಸಹ ಒಂದಾಗಿದ್ದು, ಇದು ಆಕರ್ಷಕ ಸ್ಟೈಲ್‌ ಜೊತೆಗೆ ಕೆಲವು ಉತ್ತಮ ಫೀಚರ್ಸ್‌ ಪಡೆದಿದೆ. ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಐಟೆಲ್‌ A70 ಫೋನ್‌ ಬೊಂಬಾಟ್‌ ಡಿಸ್ಕೌಂಟ್‌ ಪಡೆದಿದ್ದು, ಮೊಬೈಲ್‌ ಪ್ರಿಯರು ಹುಬ್ಬೇರಿಸುವಂತೆ ಆಗಿದೆ.

ಹೌದು, ಲೀಡಿಂಗ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಇದೀಗ ಐಟೆಲ್‌ A70 ಫೋನ್‌ ಶೇ. 32% ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 12GB* + 128GB ಸ್ಟೋರೇಜ್‌ ವೇರಿಯಂಟ್‌ 6,799ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಇತರೆ ಆಯ್ದ ಬ್ಯಾಂಕ್‌ ಕೊಡುಗೆಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಐಟೆಲ್‌ A70 ಫೋನ್‌ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ; ಗ್ರಾಹಕರಿಗೆ ಉಳಿತಾಯ!

ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಹಾಗಾದರೇ ಐಟೆಲ್‌ A70 ಮೊಬೈಲ್‌ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಐಟೆಲ್‌ A70 ಮೊಬೈಲ್ ಫೀಚರ್ಸ್‌
ಐಟೆಲ್‌ A70 ಫೋನ್‌ 6.6 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್‌ ಸಪೋರ್ಟ್‌ ಇದ್ದು, 500 ನಿಟ್ಸ್‌ನ ಬ್ರೈಟ್‌ನೆಸ್ ಲೆವೆಲ್‌ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಡೈನಾಮಿಕ್ ಬಾರ್ ಫೀಚರ್ಸ್‌ ಲಭ್ಯ.

ಐಟೆಲ್‌ A70 ಮೊಬೈಲ್‌ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಗೋ ಆವೃತ್ತಿ ಆಧಾರಿತ ಐಟೆಲ್‌ ಓಎಸ್‌ 13 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಲ್ಲಿ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 12GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ಐಟೆಲ್‌ A70 ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಅಲ್ಲದೇ ಇದರ ಸೆಕೆಂಡರಿ ಕ್ಯಾಮೆರಾವು ಬೇಸಿಕ AI-ಬೆಂಬಲಿತ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಐಟೆಲ್‌ A70 ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪ್ರಯೋಜನ ಪಡೆದುಕೊಂಡಿದ್ದು, 10W ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, Wi-Fi 802.11, ಬ್ಲೂಟೂತ್ 5.0, GPS/GLONASS, ಮತ್ತು USB ಟೈಪ್-C ಹಾಗೂ ಹೆಡ್‌ಫೋನ್‌ ಜ್ಯಾಕ್‌ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಸೌಲಭ್ಯ ಸಹ ಲಭ್ಯ.

ಐಟೆಲ್‌ A70 ಮೊಬೈಲ್‌ 4GB + 64GB ಆಯ್ಕೆ, 4GB + 128GB ಸ್ಟೋರೇಜ್‌ ಆಯ್ಕೆ ಹಾಗೂ 4GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಮಾಡಬಹುದು.

Best Mobiles in India

English summary
itel days 2024: Awesome Price Cut on itel A70 Phone on amazon website. check other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+