Home
ಸುದ್ದಿಜಾಲ

7,000mAh ಬ್ಯಾಟರಿ ಒಳಗೊಂಡ ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 8,099ರೂ. ಮಾತ್ರ!

ಐಟೆಲ್‌ ಕಂಪೆನಿ ತನ್ನ ಬಜೆಟ್‌ ಬೆಲೆಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಕೈ ಗೆಟಕುವ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ನೀಡುತ್ತಾ ಬಂದಿರುವ ಕಂಪೆನಿಗಳಲ್ಲಿ ಐಟೆಲ್‌ ಕೂಡ ಒಂದಾಗಿದೆ. ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಐಟೆಲ್‌ ಇದೀಗ ಹೊಸ ಐಟೆಲ್‌ P40+ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಹೌದು, ಐಟೆಲ್‌ P40+ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

7,000mAh ಬ್ಯಾಟರಿ ಒಳಗೊಂಡ ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 8,099ರೂ. ಮಾತ್ರ!

ಐಟೆಲ್‌ P40+ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಟೆಲ್‌ P40+ ಸ್ಮಾರ್ಟ್‌ಫೋನ್‌ 6.8 ಇಂಚಿನ ಹೆಚ್‌ಡಿ ಪ್ಲಸ್‌ ಐಪಿಎಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಐಟೆಲ್‌ P40+ ಪ್ರೊಸೆಸರ್‌ ಯಾವುದು?
ಐಟೆಲ್‌ P40+ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಹೆಚ್ಚುವರಿ ಬಳಕೆಯಾಗದ ಸ್ಟೋರೇಜ್‌ ಬಳಸಿಕೊಂಡು ಇನ್‌ಬಿಲ್ಟ್‌ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದಾಗಿದೆ.

7,000mAh ಬ್ಯಾಟರಿ ಒಳಗೊಂಡ ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 8,099ರೂ. ಮಾತ್ರ!

ಐಟೆಲ್‌ P40+ ಕ್ಯಾಮೆರಾ ಸೆಟ್‌ಅಪ್‌
ಐಟೆಲ್‌ P40+ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಇರಲಿದ್ದು, ಹಿಂದಿನ ಫ್ಲ್ಯಾಶ್‌ನೊಂದಿಗೆ ಬರಲಿದೆ. ಮತ್ತೊಂದು ಕ್ಯಾಮೆರಾ ಎಐ ಸೆನ್ಸಾರ್‌ ಆಗಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಐಟೆಲ್‌ P40+ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಐಟೆಲ್‌ P40+ ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಬ್ಯಾಟರಿಯು 18 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ. ಅಲ್ಲದೆ 72 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಟೈಂ ಮತ್ತು ಗರಿಷ್ಠ 41 ಗಂಟೆಗಳ ಟಾಕ್ ಟೈಮ್ ಅನ್ನು ಸಿಂಗಲ್‌ ಚಾರ್ಜ್‌ನಲ್ಲಿ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಜಿಪಿಎಸ್, 4 ಜಿ, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಫೇಸ್‌ಅನ್‌ಲಾಕ್‌ ಮತ್ತು ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಕೂಡ ಒಳಗೊಂಡಿದೆ.

7,000mAh ಬ್ಯಾಟರಿ ಒಳಗೊಂಡ ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 8,099ರೂ. ಮಾತ್ರ!

ಭಾರತದಲ್ಲಿ ಐಟೆಲ್‌ P40+ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಐಟೆಲ್‌ P40+ ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ಮಾದರಿಗೆ 8,099ರೂ.ಬೆಲೆಯನ್ನು ಹೊಂದಿದೆ. ಇದನ್ನು ಫೋರ್ಸ್ ಬ್ಲ್ಯಾಕ್ ಮತ್ತು ಐಸ್ ಸಯಾನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ ಜುಲೈ 11 ರಿಂದ ಅಮೆಜಾನ್‌ ಮೂಲಕ ಸೇಲ್‌ ಆಗಲಿದೆ. ಇದಲ್ಲದೆ ICICI ಬ್ಯಾಂಕ್ ಕಾರ್ಡ್‌ಗಳು ಮತ್ತು SBI ಕಾರ್ಡ್‌ಗಳನ್ನು ಬಳಸಿಕೊಂಡು ಖರೀದಿಸುವವರಿಗೆ 10% ಡಿಸ್ಕೌಂಟ್‌ ಕೂಡ ಲಭ್ಯವಾಗಲಿದೆ.

Best Mobiles in India

English summary
Itel P40+ With 7,000mAh Battery Launched in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+