ಈ 5G ಸ್ಮಾರ್ಟ್‌ಫೋನ್ ಈಗ ಅತೀ ಕಡಿಮೆ ಬೆಲೆಗೆ ಲಭ್ಯ!..ಸ್ಮಾರ್ಟ್ ಆಫರ್!
ಮಾರುಕಟ್ಟೆಯಲ್ಲಿ ಐಟೆಲ್ ಮೊಬೈಲ್ ಕಂಪನಿಯು ಅಗ್ಗದ ದರದ ಮೊಬೈಲ್‌ಗಳ ಮೂಲಕ ಗ್ರಾಹಕರಿಗೆ ಪರಿಚಿತವಾಗಿದೆ. ಐಟೆಲ್ ಸಂಸ್ಥೆಯು ಇತ್ತೀಚಿಗೆ ಅತೀ ಅಗ್ಗದ 5G ಫೋನ್ ಅನ್ನು ಪರಿಚಯಿಸಿದ್ದು, ಅದುವೇ ಐಟೆಲ್ P55 5G ಫೋನ್ ಆಗಿದೆ. ಈ ಫೋನ್ ಇದೀಗ ಅಮೆಜಾನ್ ವೆಬ್‌ಸೈಟ್‌ನಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಐಟೆಲ್ P55 5G ( itel P55 5G ) ಫೋನ್ ಶೇ. 22% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನ್ 128GB ವೇರಿಯಂಟ್ ಆಯ್ಕೆಯ ಬೆಲೆಯು 13,499ರೂ. ಆಗಿದ್ದು, ಸದ್ಯ ಅಮೆಜಾನ್ ತಾಣದಲ್ಲಿ 10,499ರೂ. ಗಳಿಗೆ ಖರೀದಿಗೆ ಲಭ್ಯ ಆಗಲಿದೆ. ಇದರೊಂದಿಗೆ ಇತರೆ ಕೆಲವು ಡಿಸ್ಕೌಂಟ್ ಸಹ ಲಭ್ಯವಾಗಲಿವೆ.

ಅಂದಹಾಗೆ ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಇನ್ನು ಈ ಫೋನ್ ಮಿಂಟ್ ಗ್ರೀನ್ ಮತ್ತು ಗ್ಯಾಲಕ್ಸಿ ಬ್ಲೂ ಕಲರ್ ಆಯ್ಕೆ ಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಐಟೆಲ್ P55 5G ( itel P55 5G ) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ಡಿಸೈನ್
ಐಟೆಲ್ P55 5G ಫೋನ್ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಪಡೆದಿದ್ದು, ಈ ಡಿಸ್‌ಪ್ಲೇ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 267 PPI ಆಗಿದೆ.
ಯಾವ ಪ್ರೊಸೆಸರ್ ಸಪೋರ್ಟ್ ಇದೆ
ಐಟೆಲ್ ಸಂಸ್ಥೆಯ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ 4GB RAM + 64GB ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ಐಟೆಲ್ P55 5G ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಮತ್ತು ದ್ವಿತೀಯ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜತೆ 8 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳು ಲಭ್ಯ.
ಅಧಿಕ ಬ್ಯಾಟರಿ ಸೌಲಭ್ಯ ಮತ್ತು ಇತರೆ ಆಯ್ಕೆಗಳು
ಐಟೆಲ್ P55 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದರ ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಸೈಡ್ ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್, ಬ್ಲೂಟೂತ್ 5.1, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಕೂಡಾ ಹೊಂದಿದೆ.
ಮೆಮೊರಿ ಆಯ್ಕೆ ಹಾಗೂ ಕಲರ್ ಆಯ್ಕೆಯ ಮಾಹಿತಿ
ಭಾರತದಲ್ಲಿ ಐಟೆಲ್ P55 5G ಫೋನ್ 6GB + 128GB ವೇರಿಯಂಟ್ ಹಾಗೂ 4GB + 64GB ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಬ್ಲೂ ಹಾಗೂ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಮಾಡಬಹುದಾಗಿದೆ. ಅಮೆಜಾನ್ ತಾಣದಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








