Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ 5G ಫೋನ್‌ ಬೇಕೆ?..ಹಾಗಿದ್ರೆ ಈ ಆಫರ್‌ ನಿಮಗೆ ಸೂಪರ್‌!

ಕಡಿಮೆ ದರದ ಪ್ರೈಸ್‌ಟ್ಯಾಗ್‌ನಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿರುವ ಐಟೆಲ್‌ ಕಂಪನಿಯ ಕೆಲವು ಆಯ್ದ ಫೋನ್‌ಗಳಿಗೆ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಡಿಸ್ಕೌಂಟ್‌ ನೀಡಲಾಗಿದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ಐಟೆಲ್‌ P55 5G ಸ್ಮಾರ್ಟ್‌ಫೋನ್‌ ಈಗ ಸಖತ್‌ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್‌ ನಲ್ಲಿ ಐಟೆಲ್‌ P55 5G ಫೋನ್‌ ಶೇ. 22% ನೇರ ಡಿಸ್ಕೌಂಟ್‌ ಆಫರ್‌ ಪಡೆದಿದೆ. ಈ ಫೋನಿನ 12GB RAM* + 128GB ವೇರಿಯಂಟ್‌ ಫೋನ್‌ 10,499ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಸಬಹುದು. ಇದಲ್ಲದೇ ಬ್ಯಾಂಕ್ ಆಫರ್‌, ವಿನಿಮಯ ಕೊಡುಗೆ ಸಹ ಪಡೆದುಕೊಂಡರೆ, ಈ ಫೋನ್‌ ಅನ್ನು 8,999ರೂ. ಬೆಲೆಯಲ್ಲಿ ಖರೀದಿಗೆ ಅವಕಾಶ ಇದೆ.

ಅಗ್ಗದ ಬೆಲೆಯಲ್ಲಿ 5G ಫೋನ್‌ ಬೇಕೆ?..ಹಾಗಿದ್ರೆ ಈ ಆಫರ್‌ ನಿಮಗೆ ಸೂಪರ್‌!

ಅಂದಹಾಗೆ ಐಟೆಲ್‌ P55 5G ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಪವರ್‌ ಒಳಗೊಂಡಿದೆ. ಹಾಗೆಯೇ ಬ್ಲೂ ಹಾಗೂ ಗ್ರೀನ್‌ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ. ಇನ್ನುಳಿದಂತೆ ಐಟೆಲ್‌ P55 5G ಮೊಬೈಲ್‌ನ ಇನ್ನುಳಿದ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಐಟೆಲ್‌ P55 5G - ಫೀಚರ್ಸ್‌

ಐಟೆಲ್‌ ಸಂಸ್ಥೆಯ ಈ 5G ಫೋನ್‌ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಪಡೆದಿದ್ದು, ಈ ಡಿಸ್‌ಪ್ಲೇ ಪ್ರತಿ ಇಂಚಿನ ಪಿಕ್ಸಲ್‌ ಸಾಂದ್ರತೆಯು 267 PPI ಆಗಿದೆ.

ಹಾಗೆಯೇ ಐಟೆಲ್‌ P55 5G ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ. ಇದರೊಂದಿಗೆ 4GB RAM + 64GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಈ ಫೋನ್‌ ಪಡೆದಿದೆ.

ಐಟೆಲ್‌ ಕಂಪನಿಯ ಈ ಮೊಬೈಲ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 8 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ಕೆಲವು ಬೇಸಿಕ್‌ ಫೋಟೋ ಎಡಿಟಿಂಗ್ ಆಯ್ಕೆಗಳು ಇವೆ.

ಅದೇ ರೀತಿ ಐಟೆಲ್‌ P55 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.1, ಜಿಪಿಎಸ್‌, ಯುಎಸ್‌ಬಿ ಟೈಪ್‌-ಸಿ ಲಭ್ಯ ಇವೆ. ಅಲ್ಲದೇ ಈ ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್ಪ್ರಿಂಟ್‌ ಸೆನ್ಸಾರ್ ಪಡೆದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಐಟೆಲ್‌ P55 5G ಮೊಬೈಲ್‌ 6GB + 128GB ವೇರಿಯಂಟ್‌ ಹಾಗೂ 4GB + 64GB ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ ಬ್ಲೂ ಹಾಗೂ ಗ್ರೀನ್‌ ಬಣ್ಣಗಳ ಆಯ್ಕೆಗಳಲ್ಲಿ ಖರೀದಿ ದೊರೆಯುತ್ತದೆ. ಗ್ರಾಹಕರು ಅಮೆಜಾನ್‌ ತಾಣದಲ್ಲಿ ಖರೀದಿ ಮಾಡಬಹುದು.

Best Mobiles in India

English summary
itel P55 5G huge price cut in India. check out offer details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+