ಕಡಿಮೆ ಬೆಲೆಗೆ ಲಾಂಚ್ ಆಗಿರುವ ಈ 5G ಫೋನಿನ ಫಸ್ಟ್ ಸೇಲ್ ಶುರುವಾಗಿದೆ!
ಸ್ವದೇಶಿ ಮೂಲದ ಮೊಬೈಲ್ ಬ್ರ್ಯಾಂಡ್ ಐಟೆಲ್ ಇತ್ತೀಚಿಗೆ ನೂತನವಾಗಿ ಅಗ್ಗದ ಬೆಲೆಗೆ ಐಟೆಲ್ P55 5G ( itel P55 5G ) ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇಂದು (ಅಕ್ಟೋಬರ್ 4) ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಮೂಲಕ ಮಾರಾಟ ಪ್ರಾರಂಭಿಸಿದೆ.
ಹೌದು, ಐಟೆಲ್ ಅಮೆಜಾನ್ ತಾಣದ ಮೂಲಕ ತನ್ನ ಹೊಸ ಐಟೆಲ್ P55 5G ( itel P55 5G ) ಫೋನಿನ ಮಾರಾಟ ಶುರು ಮಾಡಿದೆ. ಈ ಫೋನ್ 6GB + 128GB ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಬೆಲೆಯು 9,999ರೂ. ಆಗಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಇನ್ನು ಈ ಫೋನ್ ಮಿಂಟ್ ಗ್ರೀನ್ ಮತ್ತು ಗ್ಯಾಲಕ್ಸಿ ಬ್ಲೂ ಕಲರ್ ಆಯ್ಕೆ ಪಡೆದುಕೊಂಡಿದೆ. ಹಾಗಾದರೆ ಐಟೆಲ್ P55 5G ( itel P55 5G ) ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಟೆಲ್ P55 5G ಡಿಸ್‌ಪ್ಲೇ ರಚನೆ ಹೀಗಿದೆ
ಐಟೆಲ್ P55 5G ಮೊಬೈಲ್ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಪಡೆದಿದ್ದು, ಈ ಡಿಸ್‌ಪ್ಲೇ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 267 PPI ಆಗಿದೆ.
ಐಟೆಲ್ P55 5G ಪ್ರೊಸೆಸರ್ ಕಾರ್ಯವೈಖರಿ
ಐಟೆಲ್ P55 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲ ಸಹ ಪಡೆದಿದೆ. ಹಾಗೆಯೇ 4GB RAM + 64GB ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಐಟೆಲ್ P55 5G ಕ್ಯಾಮೆರಾ ಸೆನ್ಸಾರ್ ಮಾಹಿತಿ
ಐಟೆಲ್ P55 5G ಮೊಬೈಲ್ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಮತ್ತು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜತೆ 8 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳು ಇವೆ.
ಐಟೆಲ್ P55 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಐಟೆಲ್ P55 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದರ ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಸೈಡ್ ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್, ಬ್ಲೂಟೂತ್ 5.1, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಕೂಡಾ ಹೊಂದಿದೆ.
ಐಟೆಲ್ P55 5G ಬೆಲೆ ಹಾಗೂ ಲಭ್ಯತೆ ಮಾಹಿತಿ
ಭಾರತದಲ್ಲಿ ಐಟೆಲ್ P55 5G ಫೋನ್ 6GB + 128GB ವೇರಿಯಂಟ್ ಬೆಲೆಯು 9999ರೂ. ಆಗಿದೆ. ಅದೇ ರೀತಿ 4GB + 64GB ವೇರಿಯಂಟ್ ಬೆಲೆಯು 9,699ರೂ. ಗಳು ಆಗಿದೆ. ಇನ್ನು ಈ ಫೋನ್ ಬ್ಲೂ ಹಾಗೂ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಮಾಡಬಹುದಾಗಿದೆ. ಅಮೆಜಾನ್ ತಾಣದಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








