Just In
- 11 hrs ago
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- 14 hrs ago
Tech News of this Week; ಈ ವಾರ ಟೆಕ್ ವಲಯದಲ್ಲಿ ಜರುಗಿದ ಘಟನೆಗಳೇನು?, ಇಲ್ಲಿದೆ ವಿವರ!
- 1 day ago
ಒಪ್ಪೋ ಕಂಪೆನಿಯ ಈ ಸ್ಮಾರ್ಟ್‌ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- 1 day ago
ಫ್ಲಿಪ್ಕಾರ್ಟ್ನಲ್ಲಿ ಐಫೋನ್ 14 ಪ್ಲಸ್ ಬೆಲೆಯಲ್ಲಿ ಭಾರಿ ಕಡಿತ! ಇದಕ್ಕಿಂತ ಒಳ್ಳೆ ಟೈಂ ಸಿಗೋದಿಲ್ಲ!
Don't Miss
- Sports
U-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಬಹುಮಾನ ಘೋಷಿಸಿದ ಜಯ್ ಶಾ
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- Movies
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಐಟೆಲ್ S17 ಸ್ಮಾರ್ಟ್‌ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಐಟೆಲ್ ಕಂಪೆನಿ ಬಜೆಟ್ ಬೆಲೆಯ ಸ್ಮಾರ್ಟ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಐಟೆಲ್ S17 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 27 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ ಎಂದು ಹೇಳಲಾಗಿದೆ.

ಹೌದು, ಐಟೆಲ್ ಕಂಪೆನಿ ಹೊಸ ಐಟೆಲ್ S17 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ನೈಜೀರಿಯನ್ ಮಾರುಕಟ್ಟೆಯಲ್ಲಿ ಅಧಿಕೃತವಾಗಿದೆ. ಇನ್ನು ಈ ಫೋನ್ 6.6-ಇಂಚಿನ IPS ಡಿಸ್‌ಪ್ಲೇಯನ್ನು ಹೊಂದಿದೆ. ಇದು 1.3GHz ಕ್ವಾಡ್-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಗೋ ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೂರು ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಐಟೆಲ್ S17 ಸ್ಮಾರ್ಟ್‌ಫೋನ್ 720x1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಐಪಿಎಸ್ ಡಿಸ್‌ಪ್ಲೇ ಆಗಿದ್ದು, ವಾಟರ್‌ಡ್ರಾಪ್-ಶೈಲಿಯ ನಾಚ್ ವಿನ್ಯಾಸವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 2.5D ಕರ್ವ್ಡ್ ಪ್ರೊಟೆಕ್ಷನ್ ಹೊಂದಿದೆ. ಇದಲ್ಲದೆ 90% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್ ಹೇಗಿದೆ?
ಐಟೆಲ್ S17 ಸ್ಮಾರ್ಟ್‌ಫೋನ್ 1.3GHz ನಲ್ಲಿ ಗಡಿಯಾರ ಹೊಂದಿರುವ ಅಜ್ಞಾತ ಕ್ವಾಡ್-ಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 1GB RAM ಮತ್ತು 16GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 128GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಐಟೆಲ್ S17 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 0.3MP AI ಕ್ಯಾಮೆರಾ ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI ಫೇಸ್ ಬ್ಯೂಟಿ 4.0, ಬೊಕೆ, ಎಆರ್ ಸ್ಟಿಕ್ಕರ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 27 ದಿನಗಳ ಸ್ಟ್ಯಾಂಡ್‌ಬೈ ಟೈಂ, 7 ಗಂಟೆಗಳ ರೇಕಾರ್ಡಿಂಗ್, 30 ಗಂಟೆಗಳ ನಾನ್‌ಸ್ಟಾಪ್ ಕಾಲ್ಸ್ ಮತ್ತು 70 ಗಂಟೆಗಳ ಎಂಟರ್‌ಟೈನ್‌ಮೆಂಟ್ ಟೈಂ ನೀಡಲಿದೆ. ಈ ಫೋನ್ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಇದಲ್ಲದೆ ಐಟೆಲ್ ನ ಕಸ್ಟಮ್ ಸ್ಕಿನ್ ಮತ್ತು ಕೆಲವು ಪೂರ್ವ ಸ್ಥಾಪಿತ ಅಪ್ಲಿಕೇಷನ್ ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಐಟೆಲ್ S17 ಸ್ಮಾರ್ಟ್‌ಫೋನ್ ನೈಜಿರಿಯಾದಲ್ಲಿ NGN 45,000 (ಅಂದಾಜು 8,200ರೂ.) ಬೆಲೆ ಪಡೆದುಕೊಂಡಿದೆ. ಈ ಫೋನ್ ಸ್ಕೈ ಬ್ಲೂ, ಮಲ್ಟಿಕಲರ್ ಗ್ರೀನ್ ಮತ್ತು ಡೀಪ್-ಓಶಿಯನ್ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇದು ಮುಂದಿನ ವಾರದಿಂದ ನೈಜೀರಿಯಾದಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ. ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಸದ್ಯ ಯಾವುದೇ ಮಾಹಿತಿ ಇಲ್ಲ.

ಇನ್ನು ಇತ್ತೀಚಿಗೆ ಭಾರತದಲ್ಲಿ ಐಟೆಲ್ ಕಂಪೆನಿ ಐಟೆಲ್ A26 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಹೊಂದಿದ್ದು, 5.7-ಇಂಚಿನ HD+ IPS ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 10 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಸೋಶಿಯಲ್ ಟರ್ಬೊ ಫೀಚರ್‌ನೊಂದಿಗೆ ಬಂದಿದ್ದು, ಬಳಕೆದಾರರಿಗೆ ವಾಟ್ಸಾಪ್ ಕರೆಗಳನ್ನು ರೆಕಾರ್ಡ್ ಮಾಡಲು, ಸ್ಟೇಟಸ್‌ಗಳನ್ನು ಸೇವ್ ಮಾಡುವುದಕ್ಕೆ ಅವಕಾಶ ನೀಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470