Home
ಸುದ್ದಿಜಾಲ

ಅಧಿಕ RAM ಸೌಲಭ್ಯದ ಈ ಅಗ್ಗದ ಫೋನಿನ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್‌!

ಇ ಕಾಮರ್ಸ್‌ ದೊಡ್ಡಣ್ಣ ಎಂದೇ ಗುರುತಿಸಿಕೊಂಡಿರುವ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಮೊಬೈಲ್‌ ಫೋನ್‌ಗಳಿಗೆ ಒಂದಿಲ್ಲೊಂದು ಬೊಂಬಾಟ್‌ ರಿಯಾಯಿತಿ ಲಭ್ಯ ಇರುತ್ತದೆ. ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೂ ಕೂಡಾ ಆಕರ್ಷಕ ಡಿಸ್ಕೌಂಟ್‌ ಸಿಗುತ್ತದೆ. ಆ ಪೈಕಿ ಐಟೆಲ್‌ S23 ಮೊಬೈಲ್‌ ಇದೀಗ ಗ್ರಾಹಕರು ಹಿಂದಿರುಗಿ ನೋಡುವಂತಹ ಕೊಡುಗೆ ಪಡೆದಿದೆ.

ಹೌದು, ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಐಟೆಲ್‌ S23 ಮೊಬೈಲ್‌ ಶೇ. 27% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 16GB RAM + 128GB ವೇರಿಯಂಟ್‌ ದರವು 10,999ರೂ. ಬೆಲೆಯನ್ನು ಪಡೆದಿದ್ದು, ಅಮೆಜಾನ್‌ ಕೊಡುಗೆಯಲ್ಲಿ 7,999ರೂ. ಗಳ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರೊಂದಿಗೆ ಇತರೆ ಕೆಲವು ಬ್ಯಾಂಕ್‌ ಆಫರ್‌ ಸಹ ಗ್ರಾಹಕರಿಗೆ ಸಿಗಲಿವೆ.

ಅಧಿಕ RAM ಸೌಲಭ್ಯದ ಈ ಅಗ್ಗದ ಫೋನಿನ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್‌!

ಇನ್ನು ಈ ಫೋನ್‌ ಯುನಿಸೊಕ್ T606 SoC ಪ್ರೊಸೆಸರ್‌ ಪವರ್‌ ಒಳಗೊಂಡಿದ್ದು, ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಅಲ್ಲದೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗಾದರೇ ಐಟೆಲ್‌ S23 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌ ಮತ್ತು ವಿನ್ಯಾಸ

ಐಟೆಲ್‌ S23 ಫೋನ್‌ 6.6 ಇಂಚಿನ HD+ ಐಪಿಎಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್‌ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ.

ಅಧಿಕ RAM ಸೌಲಭ್ಯದ ಈ ಅಗ್ಗದ ಫೋನಿನ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್‌!

ಪ್ರೊಸೆಸರ್‌ ಪವರ್‌ ಯಾವುದು

ಐಟೆಲ್‌ S23 ಫೋನ್‌ ಆಕ್ಟಾ ಕೋರ್ 12nm ಯುನಿಸೊಕ್ T606 SoC ಪ್ರೊಸೆಸರ್‌ ಪವರ್‌ ನಲ್ಲಿ ಕೆಲಸ ಮಾಡುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೊರೇಜ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ವರ್ಚುವಲ್ RAM ಬಳಸುವುದಕ್ಕೆ ಕೂಡ ಅವಕಾಶ ನೀಡಿದ್ದು, ಇದರಿಂದ ಆನ್‌ಬೋರ್ಡ್ ಮೆಮೊರಿಯನ್ನು 16 GB ವರೆಗೆ ವಿಸ್ತರಿಸಬಹುದು.

ಅಧಿಕ RAM ಸೌಲಭ್ಯದ ಈ ಅಗ್ಗದ ಫೋನಿನ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್‌!

ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ಐಟೆಲ್‌ ಸಂಸ್ಥೆಯ ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದು ಕೊಂಡಿದೆ. ಹಾಗೆಯೇ ಈ ಫೋನ್‌ LED ಫ್ಲ್ಯಾಷ್‌ನೊಂದಿಗೆ ಕಾಣಿಸಿಕೊಂಡಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಕೂಡಾ ಪಡೆದಿದೆ. ವೃತ್ತಾಕಾರ ಮಾದರಿಯ ಕ್ಯಾಮೆರಾ ರಚನೆ ಪಡೆದಿದೆ.

ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ಐಟೆಲ್‌ S23 ಫೋನ್‌ 10W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲ ನೀಡುವ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 15 ಗಂಟೆಗಳ ಬ್ಯಾಟರಿ ಅವಧಿ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಈ ಮೊಬೈಲ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಸೌಲಭ್ಯ ಇದೆ.

ಮೆಮೊರಿ ಆಯ್ಕೆ ಮತ್ತು ಕಲರ್‌ ಆಯ್ಕೆ ಮಾಹಿತಿ

ಐಟೆಲ್‌ ಕಂಪನಿಯ ಈ ಐಟೆಲ್ S23 ಫೋನ್‌ 8 GB RAM + 128 GB ಸ್ಟೋರೇಜ್ ಆಯ್ಕೆ ಅನ್ನು ಪಡೆದಿದೆ. ಹಾಗೆಯೇ ಈ ಮೊಬೈಲ್‌ ಅನ್ನು ಗ್ರಾಹಕರು ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದೆ.

Best Mobiles in India

English summary
itel S23 available at big price drop on amazon. check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+