Home
ಸುದ್ದಿಜಾಲ

ಕೇವಲ 8,799ರೂ. ಬೆಲೆಯಲ್ಲಿ 50 MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಲಭ್ಯ!

ಐಟೆಲ್‌ ಕಂಪೆನಿ ತನ್ನ ಬಜೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಹತ್ತು ಸಾವಿರ ರೂ.ಕ್ಕಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಐಟೆಲ್‌ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಐಟೆಲ್‌ ಕಂಪೆನಿ ಭಾರತದಲ್ಲಿ ಹೊಸ ಐಟೆಲ್‌ S23 (itel s23) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು, ಐಟೆಲ್‌ S23 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ವಿನ್ಯಾಸದ ಡಿಸ್‌ಪ್ಲೇ ಹೊಂದಿದೆ. ಇದು ಯುನಿಸೋಕ್‌ T606 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಕೇವಲ 8,799ರೂ. ಬೆಲೆಯಲ್ಲಿ 50 MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಲಭ್ಯ!

ಐಟೆಲ್‌ S23 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ: ಐಟೆಲ್‌ S23 ಸ್ಮಾರ್ಟ್‌ಫೋನ್‌ 6.6 ಇಂಚಿನ HD+ ಐಪಿಎಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ.

ಐಟೆಲ್‌ S23 ಪ್ರೊಸೆಸರ್‌ ಸಾಮರ್ಥ್ಯ: ಐಟೆಲ್‌ S23 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 12nm ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಅನ್ನು ಹೊಂದಿದೆ. ಇದಲ್ಲದೆ ವರ್ಚುವಲ್ RAM ಬಳಸುವುದಕ್ಕೆ ಕೂಡ ಅವಕಾಶ ನೀಡಿದ್ದು, ಇದರಿಂದ ಆನ್‌ಬೋರ್ಡ್ ಮೆಮೊರಿಯನ್ನು 16GB ವರೆಗೆ ವಿಸ್ತರಿಸಬಹುದು.

ಕೇವಲ 8,799ರೂ. ಬೆಲೆಯಲ್ಲಿ 50 MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಲಭ್ಯ!

ಐಟೆಲ್‌ S23 ಕ್ಯಾಮೆರಾ ವಿಶೇಷ: ಐಟೆಲ್‌ S23 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ LED ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಐಟೆಲ್‌ S23 ಬ್ಯಾಟರಿ ಬ್ಯಾಕ್‌ಅಪ್‌ ವಿವರ: ಐಟೆಲ್‌ S23 ಸ್ಮಾರ್ಟ್‌ಫೋನ್‌ 10W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲ ನೀಡುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 15 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಹೊಂದಿದೆ.

ಕೇವಲ 8,799ರೂ. ಬೆಲೆಯಲ್ಲಿ 50 MP ಸೆನ್ಸಾರ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಲಭ್ಯ!

ಭಾರತದಲ್ಲಿ ಐಟೆಲ್‌ S23 ಬೆಲೆ ಮತ್ತು ಲಭ್ಯತೆ: ಭಾರತದಲ್ಲಿ ಐಟೆಲ್‌ S23 ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 8,799ರೂ. ಬೆಲೆ ಹೊಂದಿದೆ. ಇದು ಜೂನ್ 14 ರಿಂದ ಅಮೆಜಾನ್‌ ಮೂಲಕ ಮಾರಾಟವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB + 128GB ರೂಪಾಂತರದ ಆಯ್ಕೆಯ ಬೆಲೆಯನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಈ ಸ್ಮಾರ್ಟ್‌ಫೋನ್‌ ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ.

ಇದಲ್ಲದೆ ಇತ್ತೀಚಿಗೆ ಐಟೆಲ್‌ ಸಂಸ್ಥೆಯು ಐಟೆಲ್‌ P40 (itel P40) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದ್ದು, ಈ ಫೋನ್‌ ಮೂಲಕ ಐಟೆಲ್‌ ತನ್ನ P ಸರಣಿಯನ್ನು ವಿಸ್ತರಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಈ ಫೋನ್‌ ಶೈಲಿ ಪೊಕೊವನ್ನು ಹೋಲಲಿದ್ದು ಆಕ್ಟೋ ಕೋರ್ SC9863A ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದೆ.

Best Mobiles in India

English summary
Itel S23 Budget Phone Launched in India: Price and specification details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+