Home
ಸುದ್ದಿಜಾಲ

ಧಮಾಕಾ ಸೇಲ್‌!..ಈ 16GB RAM ಸ್ಮಾರ್ಟ್‌ಫೋನ್‌ ಬೆಲೆ 8799ರೂ.!

ಐಟೆಲ್‌ ಕಂಪೆನಿ ತನ್ನ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಆ ಪೈಕಿ ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ಐಟೆಲ್‌ S23 (itel s23) ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಈ ಫೋನಿನ ಪ್ರಮುಖ ಹೈಲೈಟ್‌ ಎಂದರೆ ಅದು 16 GB RAM ಮತ್ತು 50 ಮೆಗಾ ಪಿಕ್ಸಲ್‌ ಮುಖ್ಯ ಕ್ಯಾಮೆರಾ ಆಗಿದೆ.

ಹೌದು, ಐಟೆಲ್‌ S23 ಸ್ಮಾರ್ಟ್‌ಫೋನ್‌ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಮಾರಾಟ ಆರಂಭಿಸಲಿದೆ. ಈ ಸ್ಮಾರ್ಟ್‌ಫೋನ್‌ ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ವಿನ್ಯಾಸದ ಡಿಸ್‌ಪ್ಲೇ ಹೊಂದಿದೆ. ಇದು ಯುನಿಸೋಕ್‌ T606 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಧಮಾಕಾ ಸೇಲ್‌!..ಈ 16GB RAM ಸ್ಮಾರ್ಟ್‌ಫೋನ್‌ ಬೆಲೆ 8799ರೂ.!

ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಐಟೆಲ್‌ S23 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ: ಐಟೆಲ್‌ S23 ಸ್ಮಾರ್ಟ್‌ಫೋನ್‌ 6.6 ಇಂಚಿನ HD+ ಐಪಿಎಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ.

ಐಟೆಲ್‌ S23 ಪ್ರೊಸೆಸರ್‌ ಸಾಮರ್ಥ್ಯ: ಐಟೆಲ್‌ S23 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ 12nm ಯುನಿಸೊಕ್ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 128GB ಇಂಟರ್‌ ಸ್ಟೊರೇಜ್‌ ಅನ್ನು ಹೊಂದಿದೆ. ಇದಲ್ಲದೆ ವರ್ಚುವಲ್ RAM ಬಳಸುವುದಕ್ಕೆ ಕೂಡ ಅವಕಾಶ ನೀಡಿದ್ದು, ಇದರಿಂದ ಆನ್‌ಬೋರ್ಡ್ ಮೆಮೊರಿಯನ್ನು 16GB ವರೆಗೆ ವಿಸ್ತರಿಸಬಹುದು.

ಐಟೆಲ್‌ S23 ಕ್ಯಾಮೆರಾ ಸ್ಪೆಷಲ್: ಐಟೆಲ್‌ S23 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ LED ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಐಟೆಲ್‌ S23 ಬ್ಯಾಟರಿ ಬ್ಯಾಕ್‌ಅಪ್‌ ವಿವರ: ಐಟೆಲ್‌ S23 ಸ್ಮಾರ್ಟ್‌ಫೋನ್‌ 10W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲ ನೀಡುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 15 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಹೊಂದಿದೆ.

ಭಾರತದಲ್ಲಿ ಐಟೆಲ್‌ S23 ಬೆಲೆ ಮತ್ತು ಲಭ್ಯತೆ: ಭಾರತದಲ್ಲಿ ಐಟೆಲ್‌ S23 ಸ್ಮಾರ್ಟ್‌ಫೋನ್‌ 8 GB RAM + 128 GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 8,799ರೂ. ಬೆಲೆ ಹೊಂದಿದೆ. ಇದು ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಮಾರಾಟ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB + 128GB ರೂಪಾಂತರದ ಆಯ್ಕೆಯ ಬೆಲೆಯನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಈ ಸ್ಮಾರ್ಟ್‌ಫೋನ್‌ ಮಿಸ್ಟರಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ.

ಐಟೆಲ್‌ P40 ಫೋನ್‌ : ಇತ್ತೀಚಿಗೆ ಐಟೆಲ್‌ ಸಂಸ್ಥೆಯು ಐಟೆಲ್‌ P40 (itel P40) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದ್ದು, ಈ ಫೋನ್‌ ಮೂಲಕ ಐಟೆಲ್‌ ತನ್ನ P ಸರಣಿಯನ್ನು ವಿಸ್ತರಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಈ ಫೋನ್‌ ಶೈಲಿ ಪೊಕೊವನ್ನು ಹೋಲಲಿದ್ದು ಆಕ್ಟೋ ಕೋರ್ SC9863A ಪ್ರೊಸೆಸರ್‌ ಮೂಲಕ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ 6000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 13 ಮೆಗಾ ಪಿಕ್ಸಲ್‌ ಕ್ಯಾಮೆರಾ ಪಡೆದಿದೆ.

Best Mobiles in India

English summary
itel S23 with 16GB RAM available Amazon: Price starts at Rs 8,799 and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+