ಕೈಗೆಟಕುವ ಬೆಲೆಯ ಐಟೆಲ್ ವಿಷನ್ 3 ಟರ್ಬೊ ಫೋನ್‌ ಅನಾವರಣ! ಫೀಚರ್ಸ್‌ ಹೇಗಿದೆ?

|

ಕೈಗೆಟಕುವ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಐಟೆಲ್‌ ಕಂಪೆನಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ಐಟೆಲ್ ವಿಷನ್ 3 ಟರ್ಬೊ ಫೋನ್‌ ಅನ್ನು ಅನಾವರಣಗೊಳಿಸಿದೆ. ಇದು 1.6GHz ಆಕ್ಟಾ-ಕೋರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಐಟೆಲ್‌

ಹೌದು, ಐಟೆಲ್‌ ಕಂಪೆನಿ ಭಾರತದಲ್ಲಿ ಹೊಸ ಐಟೆಲ್‌ ವಿಷನ್ 3 ಟರ್ಬೊ ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಫೋನ್‌ ಅನ್ನು 20 ನಿಮಿಷಗಳ ಫ್ಲ್ಯಾಶ್ ಚಾರ್ಜಿಂಗ್‌ನೊಂದಿಗೆ 3 ಗಂಟೆಗಳ ಟಾಕ್‌ ಟೈಂ ನೀಡಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡೀಪ್ ಓಷನ್ ಬ್ಲೂ, ಜ್ಯುವೆಲ್ ಬ್ಲೂ ಮತ್ತು ಮಲ್ಟಿ ಗ್ರೀನ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಐಟೆಲ್‌ ವಿಷನ್ 3 ಟರ್ಬೊ ಸ್ಮಾರ್ಟ್‌ಫೋನ್ 6.6 ಇಂಚಿನ HD+ IPS ವಾಟರ್‌ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 269PPI ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದೆ. ಡಿಸ್‌ಪ್ಲೇ 480 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 91% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಐಟೆಲ್‌ ವಿಷನ್ 3 ಟರ್ಬೊ ಸ್ಮಾರ್ಟ್‌ಫೋನ್ 1.6GHz ಆಕ್ಟಾ-ಕೋರ್ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ರನ್‌ ಆಗಲಿದೆ. ಹಾಗೆಯೇ 6GB Turbo RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಸಂಗ್ರಹ ಸಾಮರ್ಥ್ಯವನ್ನು 128GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಐಟೆಲ್‌ ವಿಷನ್ 3 ಟರ್ಬೊ ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್‌ಮೋಡ್‌, ಪನೋರಮಾ, ಪ್ರೊ, ಬೊಕೆ, ಎಐ ಬ್ಯೂಟಿ ಮೋಡ್‌ ಅನ್ನು ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಐಟೆಲ್‌ ವಿಷನ್ 3 ಟರ್ಬೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದ್ದು, ಕೇವಲ 20 ನಿಮಿಷಗಳ ಫ್ಲ್ಯಾಶ್ ಚಾರ್ಜಿಂಗ್‌ನೊಂದಿಗೆ 3 ಗಂಟೆಗಳವರೆಗೆ ಟಾಕ್ ಟೈಮ್ ಅನ್ನು ನೀಡುವುದಾಗಿ ಐಟೆಲ್‌ ಕಂಪನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಹೊಂದಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್, ಸ್ಮಾರ್ಟ್ ಫೇಸ್ ಅನ್‌ಲಾಕ್, ಜಿ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಸೇರಿಂತೆ ಹಲವು ಸೆನ್ಸಾರ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಐಟೆಲ್‌ ವಿಷನ್‌ 3ಟರ್ಬೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 7,699ರೂ.ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡೀಪ್ ಓಷನ್ ಬ್ಲೂ, ಜ್ಯುವೆಲ್ ಬ್ಲೂ ಮತ್ತು ಮಲ್ಟಿ ಗ್ರೀನ್‌ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಖರೀದಿಸಿದ 100 ದಿನಗಳಲ್ಲಿ ಒಂದು-ಬಾರಿ ಸ್ಕ್ರೀನ್ ಬದಲಿ ಕೊಡುಗೆಯನ್ನು ನೀಡುತ್ತದೆ.

Best Mobiles in India

English summary
Itel Vision 3 Turbo With 5,000mAh Battery Unveiled in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X