ಜಿಯೋದಿಂದ ಪ್ರತಿದಿನ 1.5GB ಡೇಟಾ!..ಕಕ್ಕಾಬಿಕ್ಕಿಯಾದ ಏರ್‌ಟೆಲ್ ಮತ್ತು ವೊಡಾಫೋನ್!
ಪ್ರಸ್ತುತ ದೇಶದ ಟೆಲಿಕಾಂ ವಲಯದಲ್ಲಿನ ಹಲವು ಮಹತ್ತರ ಬೆಳವಣಿಗೆಗಳು ಖಾಸಗಿ ಟೆಲಿಕಾಂಗಳ ನಡುವೆ ಪೈಪೋಟಿ ಹೆಚ್ಚಿಸಿವೆ. ಈ ನಿಟ್ಟಿನಲ್ಲಿ ಚಂದಾದಾರರನ್ನು ಸೆಳೆಯಲು ಟೆಲಿಕಾಂ ಸಂಸ್ಥೆಗಳು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಜಿಯೋ, ಏರ್‌ಟೆಲ್ ಮತ್ತು ವೊಡಾಪೋನ್ ನಡುವೆ ದರ ಮತ್ತು ಡೇಟಾ ಸಮರ ನಡೆಯುತ್ತಿದೆ. ಈ ಪೈಪೋಟಿಯ ಓಟದಲ್ಲಿ ಜಿಯೋ ಇದೀಗ ಅಚ್ಚರಿಯ ಹೆಜ್ಜೆಯೊಂದನ್ನು ಮುಂದಿಟ್ಟಿದೆ.
ಹೌದು, ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯು ಚಂದಾದಾರರನ್ನು ಆಕರ್ಷಿಸಲು ಈಗ ತನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಅಧಿಕ ಡೇಟಾ ಪ್ರಯೋಜನವನ್ನು ಒದಗಿಸುತ್ತಿದೆ. ಸಂಸ್ಥೆಯ ಜನಪ್ರಿಯ ಜಿಯೋ 199ರೂ, 399ರೂ, 555ರೂ ಮತ್ತು 2299ರೂ, ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳಲ್ಲಿ ಡೇಟಾನು ಹೆಚ್ಚಿದೆ, ವ್ಯಾಲಿಡಿಟಿ ಸಹ ಲಭ್ಯ ಇದೆ. ಇನ್ನು ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಹೆಚ್ಚುವರಿ ಸೌಲಭ್ಯಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಜಿಯೋ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಅನಿಯಮಿತ ಕರೆಗಳ ಸೌಲಭ್ಯ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ಕರೆಗಳಿಗೆ 1000 ನಿಮಿಷದ ಕರೆ ಮಿತಿ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗುತ್ತವೆ.

ಜಿಯೋ 399ರೂ. ಪ್ರೀಪೇಯ್ಡ್ ಪ್ಲ್ಯಾನ್
ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಇತರೆ ನೆಟವರ್ಕ ಕರೆಗಳಿಗೆ 2000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.5GB ಡೇಟಾ ಪ್ರಯೋಜನವನ್ನು ಹೊಂದಿದ್ದು, ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಜಿಯೋ 2299ರೂ. ಪ್ರೀಪೇಯ್ಡ್ ಪ್ಲ್ಯಾನ್
ಜಿಯೋ 2299ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಪ್ರೀಪೇಯ್ಡ್ ಪ್ಲ್ಯಾನ್ ಆಗಿದೆ. ಇನ್ನು ಈ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.5GB ಡೇಟಾ ಪ್ರಯೋಜನವನ್ನು ಹೊಂದಿದ್ದು, ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 12,000 ಉಚಿತ ನಿಮಿಷಗಳ ಮಿತಿ ಹೊಂದಿದೆ.


Click it and Unblock the Notifications








