ಜಿಯೋ 5G ಡೇಟಾಗಾಗಿ ರೀಚಾರ್ಜ್ ಮಾಡಬೇಕೆ?..ಹಾಗಿದ್ರೆ ಇಲ್ಲಿ ನೋಡಿ!
ಜಿಯೋ ಟೆಲಿಕಾಂ ಹಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಜಿಯೋ 5G ನೆಟ್‌ವರ್ಕ್ ದೇಶದ ಬಹುತೇಕ ನಗರಗಳಲ್ಲಿ ಈಗಾಗಲೇ ಚಾಲನೆ ಆಗಿದೆ. ಅದಕ್ಕೆ ಪೂರಕವಾಗಿ ಹಲವು 5G ಡೇಟಾ ಸಪೋರ್ಟ್ ಇರುವ ರೀಚಾರ್ಜ್ ಪ್ಲ್ಯಾನ್‌ಗಳು ಸಹ ಗಮನ ಸೆಳೆದಿವೆ. ಅಂತಹ ಕೆಲವು ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.
ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.
ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.
ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 299ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಪ್ರಯೋಜನ ಸಿಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಮೂವಿಸ್, ಜಿಯೋ ನ್ಯೂಸ್ ಹಾಗೂ ಇತರೆ ಸೇವೆಗಳು ಸಿಗಲಿವೆ.
ಜಿಯೋದ 1199 ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1199 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಜಿಯೋ ಆಪ್ಸ್ ಸಹ ಲಭ್ಯ.
ಇತರೆ ಜಿಯೋ ಟೆಲಿಕಾಂ ಪ್ರೀಪೇಯ್ಡ್ ಪ್ಲ್ಯಾನ್‌ಗಳು
ಜಿಯೋ 2023ರೂ. ಪ್ಲ್ಯಾನ್
ಜಿಯೋ 2999ರೂ. ಪ್ಲ್ಯಾನ್
ಜಿಯೋ 2545ರೂ. ಪ್ಲ್ಯಾನ್
ಜಿಯೋ 2879ರೂ. ಪ್ಲ್ಯಾನ್
ಜಿಯೋ 719ರೂ. ಪ್ಲ್ಯಾನ್
ಜಿಯೋ 419ರೂ. ಪ್ಲ್ಯಾನ್


Click it and Unblock the Notifications








