ಅಧಿಕ ಡೇಟಾ ಬಯಸೋರಿಗೆ ಜಿಯೋದಿಂದ ಈಗ ಭರ್ಜರಿ ಗಿಫ್ಟ್!
ರಿಲಯನ್ಸ್ ಜಿಯೋ ತನ್ನ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬಳಕೆದಾರರಿಗೆ ಭರ್ಜರಿ ಹೊಸ ಕೊಡುಗೆಗಳನ್ನು ಘೋಷಿಸಿದೆ. ಈಗಾಗಲೇ ಹಲವು ಅತ್ಯುತ್ತಮ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗಮನ ಸೆಳೆದಿರುವ ಜಿಯೋ ಸಂಸ್ಥೆಯು ಇದೀಗ ತನ್ನ ಚಂದಾದಾರರಿಗೆ ಮತ್ತೆ ಸಿಹಿಸುದ್ದಿ ನಿಡಿದೆ. ಜಿಯೋ ಟೆಲಿಕಾಂ ತನ್ನ ಜನಪ್ರಿಯ ಪ್ರೀಪೇಯ್ಡ್ ಪ್ಲ್ಯಾನ್‌ಯೊಂದರಲ್ಲಿ ಹೆಚ್ಚುವರಿ ಡೇಟಾ ಪ್ರಯೋಜನ ತಿಳಿಸಿದೆ.

ಹೌದು, ಜಿಯೋ ಟೆಲಿಕಾಂ ತನ್ನ ಆರನೇ ವಾರ್ಷಿಕೋತ್ಸವದ ಅಂಗವಾಗಿ 2,999ರೂ. ಪ್ರೀಪೇಯ್ಡ್ ಪ್ಲಾನ್‌ನಲ್ಲಿ ಹೆಚ್ಚುವರಿ ಹೆಚ್ಚುವರಿ ಹೈ-ಸ್ಪೀಡ್ ಡೇಟಾ ಹಾಗೂ ಅಜಿಯೋ (Ajio), ನೆಟ್‌ಮೆಡ್ (Netmeds), ಜಿಯೋಸಾವನ್ (JioSavn) ರಿಯಾಯಿತಿಗಳು ಮತ್ತು ಕೂಪನ್‌ಗಳನ್ನು ಒಳಗೊಂಡಿವೆ. ಇನ್ನು 2,999ರೂ. ಪ್ಲಾನ್‌ಗೆ ಚಂದಾದಾರರಾಗಿರುವ ಬಳಕೆದಾರರಿಗೆ ಮಾತ್ರ ಈ ಪ್ರಯೋಜನಗಳು ಲಭ್ಯವಿರುತ್ತವೆ ಎಂದು ಜಿಯೋ ಟ್ವಿಟರ್‌ನಲ್ಲಿ ಪ್ರಕಟಿಸಿದೆ. ಅಂದಹಾಗೆ ಈ ಕೊಡುಗೆ ಸೀಮಿತ ಅವಧಿಗೆ ಮಾತ್ರ ಎಂಬುವುದನ್ನು ಗಮನಿಸಬೇಕು. ಹಾಗಾದರೆ 2999ರೂ. ಪ್ರೀಪೇಯ್ಡ್ ಪ್ಲಾನ್ ಬಗ್ಗೆ ಹಾಗೂ ಇತರೆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ. ಕೊಡುಗೆಯಲ್ಲಿ ಈ ಪ್ಲ್ಯಾನ್ 75GB ಹೆಚ್ಚುವರಿ ವೇಗದ ಡೇಟಾವನ್ನು ಒಳಗೊಂಡಿದೆ. ಹಾಗೆಯೇ ಇಕ್ಸಿಗೋ, Netmeds ಮತ್ತು Ajio ನಲ್ಲಿ ರಿಯಾಯಿತಿ ಕೂಪನ್‌ಗಳು ಸಿಗಲಿವೆ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 666 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 126 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.


Click it and Unblock the Notifications








