800MHz ಬ್ಯಾಂಡ್‌ ಸ್ಪೆಕ್ಟ್ರಮ್ ಬಳಕೆಯ ಹಕ್ಕು ಪಡೆಯಲು ಏರ್‌ಟೆಲ್‌ನೊಂದಿಗೆ ಜಿಯೋ ಒಪ್ಪಂದ!

|

ಸ್ಪೆಕ್ಟ್ರಮ್ ಟ್ರೇಡಿಂಗ್ ಮೂಲಕ ಆಂಧ್ರಪ್ರದೇಶ, ದೆಹಲಿ ಮತ್ತು ಮುಂಬೈ ಸರ್ಕಲ್‌ಗಳಲ್ಲಿನ 800 ಮೆಗಾಹರ್ಟ್ಸ್ ಬ್ಯಾಂಡ್‌ನಲ್ಲಿ ಸ್ಪೆಕ್ಟ್ರಮ್ ಬಳಸುವ ಹಕ್ಕನ್ನು ಪಡೆದುಕೊಳ್ಳಲು ಭಾರ್ತಿ ಏರ್‌ಟೆಲ್ ಲಿಮಿಟೆಡ್‌ನೊಂದಿಗೆ ಖಚಿತವಾದ ಒಪ್ಪಂದ ಮಾಡಿಕೊಂಡಿರುವುದಾಗಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ಇಂದು ಪ್ರಕಟಿಸಿದೆ. ಈ ಒಪ್ಪಂದದ ಭಾಗವಾಗಿರುವ ಸ್ಪೆಕ್ಟ್ರಮ್‌ನ ಸರ್ಕಲ್‌ವಾರು ವಿವರ ಹೀಗಿದೆ.

ದೂರಸಂಪರ್ಕ

ಈ ಒಪ್ಪಂದವು ದೂರಸಂಪರ್ಕ ಇಲಾಖೆ ಪ್ರಕಟಿಸಿರುವ ಸ್ಪೆಕ್ಟ್ರಮ್ ಟ್ರೇಡಿಂಗ್ ಮಾರ್ಗಸೂಚಿಗಳಿಗೆ ಅನುಸಾರವಾಗಿದೆ ಹಾಗೂ ಇದು ಅಗತ್ಯ ನಿಯಂತ್ರಣ ಮತ್ತು ಶಾಸನಬದ್ಧ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಸ್ಪೆಕ್ಟ್ರಮ್ ಅನ್ನು ಬಳಸುವ ಹಕ್ಕಿನ ಒಟ್ಟು ಮೌಲ್ಯ ರೂ. 1,497 ಕೋಟಿಗಳಾಗಿದ್ದು, ಯಾವುದೇ ವಹಿವಾಟು ಸಂಬಂಧಿ ಹೊಂದಾಣಿಕೆಗಳಿಗೆ ಒಳಪಟ್ಟಂತೆ ರೂ. 459 ಕೋಟಿಗಳ ಸಂಬಂಧಿತ ಮುಂದೂಡಲ್ಪಟ್ಟ ಪಾವತಿ ಹೊಣೆಗಾರಿಕೆಯ (deferred payment liability) ಪ್ರಸ್ತುತ ಮೌಲ್ಯವನ್ನೂ ಒಳಗೊಂಡಿದೆ.

ಮೆಗಾ

ಸ್ಪೆಕ್ಟ್ರಮ್ ಅನ್ನು ಬಳಸುವ ಹಕ್ಕಿನ ಈ ಟ್ರೇಡಿಂಗ್‌ನೊಂದಿಗೆ, ಆರ್‌ಜೆಐಎಲ್ ಮುಂಬೈ ಸರ್ಕಲ್‌ನ 800 ಮೆಗಾಹರ್ಟ್ಸ್ ಬ್ಯಾಂಡ್‌ನಲ್ಲಿ 2X15 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಹಾಗೂ ಆಂಧ್ರಪ್ರದೇಶ ಮತ್ತು ದೆಹಲಿ ಸರ್ಕಲ್‌ಗಳಲ್ಲಿನ 800 ಮೆಗಾ ಹರ್ಟ್ಸ್ ಬ್ಯಾಂಡ್‌ನಲ್ಲಿ 2X10 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಅನ್ನು ಪಡೆದುಕೊಂಡಂತಾಗಿದೆ.

ನೆಟ್‌ವರ್ಕ್

ಆ ಮೂಲಕ ಈ ವಲಯಗಳಲ್ಲಿ ಆರ್‌ಜೆಐಎಲ್ ತನ್ನ ಸ್ಪೆಕ್ಟ್ರಮ್ ಹೆಜ್ಜೆಗುರುತನ್ನು ಬಲಪಡಿಸಿಕೊಂಡಿದೆ. ವರ್ಧಿತ ಸ್ಪೆಕ್ಟ್ರಮ್ ಫುಟ್‌ಪ್ರಿಂಟ್, ಅದರಲ್ಲೂ ವಿಶೇಷವಾಗಿ ಪಕ್ಕಪಕ್ಕದಲ್ಲಿರುವ (contiguous) ಸ್ಪೆಕ್ಟ್ರಮ್, ಹಾಗೂ ಉತ್ತಮ ಮೂಲಸೌಕರ್ಯಗಳ ನಿಯೋಜನೆಯಿಂದಾಗಿ, ಆರ್‌ಜೆಐಎಲ್ ನೆಟ್‌ವರ್ಕ್ ಸಾಮರ್ಥ್ಯದಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.

ಜಿಯೋ ಟೆಲಿಕಾಂನ ಆಕರ್ಷಕ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು:

ಜಿಯೋ ಟೆಲಿಕಾಂನ ಆಕರ್ಷಕ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು:

ಜಿಯೋ 444ರೂ. ಪ್ರೀಪೇಯ್ಡ್‌ ಪ್ಲಾನ್
ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 555ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 555ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಆಲ್‌-ಇನ್‌-ಒನ್‌ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 599ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 999ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ 999ರೂ. ಪ್ರೀಪೇಯ್ಡ್‌ ಯೋಜನೆ

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

Best Mobiles in India

English summary
JIO ANNOUNCES SIGNING OF DEFINITIVE AGREEMENT FOR TRADING OF RIGHT TO USE SPECTRUM IN THE 800MHz BAND WITH AIRTEL.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X