Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌, ವಿ ಟೆಲಿಕಾಂಗಳ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ಗಳಲ್ಲಿ ಯಾವುದು ಬೆಸ್ಟ್‌!

ಇತ್ತೀಚಿನ ದಿನಗಳಲ್ಲಿ ಟೆಲಿಕಾಂ ಬಳಕೆದಾರರು ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಸೌಲಭ್ಯ ಬಯಸುತ್ತಾರೆ. ಇದೇ ಕಾರಣಕ್ಕೆ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್‌ ಹಾಗೂ ವೊಡಾಫೋನ್ ಐಡಿಯಾ ಟೆಲಿಕಾಂ ಸಂಸ್ಥೆಗಳು ಪ್ರತಿದಿನ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದ ಪ್ರಿಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿವೆ. ಅದರಲ್ಲೂ ಜಿಯೋ ಸಂಸ್ಥೆ ಕಳೆದ ಕೆಲ ದಿನಗಳ ಹಿಂದೆಯಷ್ಟೆ 3499 ರೂ.ಗಳ ವಾರ್ಷಿಕ ಪ್ರಿಪೇಯ್ಡ್‌ ಯೋಜನೆ ಗ್ರಾಹಕರನ್ನು ಆಕರ್ಷಿಸಿದೆ. ಅನಿಯಮಿತ ಕರಗೆಳ ಜೊತೆಗೆ ದಿನಕ್ಕೆ 3GB ಡೇಟಾ ಪ್ರಯೋಜನವನ್ನು ಇದು ಹೊಂದಿದೆ.

ಜಿಯೋ

ಹೌದು, ಜಿಯೋ, ಏರ್‌ಟೆಲ್‌, ವಿ ಟೆಲಿಕಾಂಗಳ ಬಹುತೇಕ ಪ್ರಿಪೇಯ್ಡ್‌ ಯೋಜನೆಗಳು ಅಧಿಕ ಡೇಟಾ ಜೊತೆಗೆ ಅನಿಯಮಿತ ಕರೆ ಸೌಲಭ್ಯವನ್ನು ಪಡೆದಿವೆ. ಇವುಗಳಲ್ಲಿ ಪ್ರತಿದಿನ 2GB ಡೇಟಾ ನೀಡುವ ವಾರ್ಷಿಕ ಯೋಜನೆಗಳು ಹೆಚ್ಚಿನ ಡಿಮ್ಯಾಂಡ್‌ ಪಡೆದುಕೊಂಡಿವೆ. ಆದರೆ ಜಿಯೋ ಪರಿಚಯಿಸಿರುವ ಇತ್ತಿಚಿನ ವಾರ್ಷಿಕ ಯೋಜನೆ ದಿನನಿತ್ಯ 3GB ಡೇಟಾ ಸೌಲಭ್ಯ ಪಡೆದುಕೊಂಡಿದೆ. ಹಾಗಾದ್ರೆ ಜಿಯೋ, ಏರ್‌ಟೆಲ್‌, ವಿ ಟೆಲಿಕಾಂ ಗಳ ವಾರ್ಷಿಕ ಯೋಜನೆಗಳಲ್ಲಿ ಯಾವುದು ಸೂಕ್ತ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 3499ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 3499ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ ಹೊಸ 3499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನವನ್ನು ಪಡೆದಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1095 GB ಡೇಟಾ ಸೌಲಭ್ಯ ಗ್ರಾಹಕರಿಗೆ ಲಭ್ಯವಾಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಆಪ್ಸ್‌ ಹಾಗೂ ಇತರೆ ಸೇವೆಗಳು ಸಿಗಲಿವೆ.

ಜಿಯೋ 2399ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 2399ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 2,399ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 2599ರೂ, ಪ್ರಿಪೇಯ್ಡ್ ಪ್ಲ್ಯಾನ್‌

ಜಿಯೋ 2599ರೂ, ಪ್ರಿಪೇಯ್ಡ್ ಪ್ಲ್ಯಾನ್‌

ಜಿಯೋ ಅವರ ಈ ಪ್ರಿಪೇಯ್ಡ್ ಯೋಜನೆ 2GB ದೈನಂದಿನ ಡೇಟಾವನ್ನು ಅನಿಯಮಿತ ಕರೆ ಪ್ರಯೋಜನಗಳೊಂದಿಗೆ ನೀಡುತ್ತದೆ. ಅಲ್ಲದೆ ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ. ಈ ಯೋಜನೆಯು ಡಿಸ್ನಿ + ಹಾಟ್‌ಸ್ಟಾರ್‌ಗೆ ಒಂದು ವರ್ಷದ ವಿಐಪಿ ಚಂದಾದಾರಿಕೆಯನ್ನು ನೀಡುತ್ತದೆ.

ಜಿಯೋ

ಇದಲ್ಲದೆ ಜಿಯೋ ಹೊಸ ಬಳಕೆದಾರರಿಗಾಗಿ ತನ್ನ 4999 ರೂ.ಗಳ ಪ್ರಿಪೇಯ್ಡ್ ಯೋಜನೆಗಳನ್ನು ನಿಲ್ಲಿಸಿದೆ. ಈ ಯೋಜನೆಯು ದಿನಕ್ಕೆ 350GB ಡೇಟಾ, ಅನಿಯಮಿತ ಕರೆಗಳು ಮತ್ತು 100 ಎಸ್‌ಎಂಎಸ್ ನೀಡಿತು. ಪ್ರಿಪೇಯ್ಡ್ ಯೋಜನೆಯು 360 ದಿನಗಳ ಮಾನ್ಯತೆಯನ್ನು ಹೊಂದಿದೆ ಮತ್ತು ಜಿಯೋಆಪ್ಸ್ಗೆ ಪೂರಕ ಚಂದಾದಾರಿಕೆಯೊಂದಿಗೆ ಬಂದಿತು.

ಏರ್‌ಟೆಲ್‌ನ ವಾರ್ಷಿಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳು

ಏರ್‌ಟೆಲ್‌ನ ವಾರ್ಷಿಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳು

ಏರ್‌ಟೆಲ್ 2498ರೂ, ಪ್ರಿಪೇಯ್ಡ್ ಪ್ಲ್ಯಾನ್‌
ಈ ಪ್ಲ್ಯಾನ್‌ 2GB ದೈನಂದಿನ ಡೇಟಾವನ್ನು ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 ಎಸ್‌ಎಂಎಸ್ ಜೊತೆಗೆ ನೀಡುತ್ತದೆ. ಇದು 365 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ.

ಏರ್‌ಟೆಲ್ 2698ರೂ, ಪ್ರಿಪೇಯ್ಡ್ ಪ್ಲ್ಯಾನ್‌
ಏರ್‌ಟೆಲ್‌ನ ಈ ಪ್ರಿಪೇಯ್ಡ್ ಪ್ಲ್ಯಾನ್‌ 2GB ದೈನಂದಿನ ಡೇಟಾವನ್ನು ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ ಮತ್ತು 365 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಈ ಯೋಜನೆಯು ಡಿಸ್ನಿ + ಹಾಟ್‌ಸ್ಟಾರ್‌ಗೆ 1 ವರ್ಷದ ವಿಐಪಿ ಚಂದಾದಾರಿಕೆಯನ್ನು ನೀಡುತ್ತದೆ.

ವೋಡಾಫೊನ್‌ ಐಡಿಯಾ ವಾರ್ಷಿಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳು

ವೋಡಾಫೊನ್‌ ಐಡಿಯಾ ವಾರ್ಷಿಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳು

Vi 2399ರೂ ಪ್ರಿಪೇಯ್ಡ್ ಯೋಜನೆ
ಈ ಪ್ರಿಪೇಯ್ಡ್ ಯೋಜನೆಯು 1.5GB ದೈನಂದಿನ ಡೇಟಾವನ್ನು ಅನಿಯಮಿತ ಕರೆಗಳೊಂದಿಗೆ ನೀಡುತ್ತದೆ ಮತ್ತು 365 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಈ ಯೋಜನೆಯು ಒಂದು ವರ್ಷದ ಜೀ5 ಪ್ರೀಮಿಯಂ, ಆಲ್-ನೈಟ್ ಹೈಸ್ಪೀಡ್ ಡೇಟಾ ಮತ್ತು ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಕ್ಕೂ ಪ್ರವೇಶವನ್ನು ನೀಡುತ್ತದೆ.

Vi 2595ರೂ, ಪ್ರಿಪೇಯ್ಡ್ ಯೋಜನೆ
Vi ವೊಡಾಫೋನ್ ಈ ಪ್ರಿಪೇಯ್ಡ್ ಯೋಜನೆಯೊಂದಿಗೆ 2GB ದೈನಂದಿನ ಡೇಟಾ ಮತ್ತು ಅನಿಯಮಿತ ಕರೆಗಳನ್ನು ನೀಡುತ್ತದೆ. ಈ ಯೋಜನೆಯೊಂದಿಗೆ ವಾರಾಂತ್ಯದ ರೋಲ್‌ಓವರ್ ಡೇಟಾ ಪ್ರಯೋಜನಗಳನ್ನು ಯೋಜನೆ ನೀಡುತ್ತದೆ. ಯೋಜನೆಯು ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ. ಈ ಯೋಜನೆಯೊಂದಿಗೆ ಸ್ಟ್ರೀಮಿಂಗ್ ಪ್ರಯೋಜನಗಳು ಪ್ರೀಮಿಯಂ ಜೀ5 ಚಂದಾದಾರಿಕೆಗಳು ಮತ್ತು ವಿ ಚಲನಚಿತ್ರಗಳು ಮತ್ತು ಟಿವಿ ಪ್ರವೇಶವನ್ನು ಒಳಗೊಂಡಿವೆ.

Best Mobiles in India

English summary
Jio Launches Annual Data Plan For Rs. 3499 With 3GB Data Per Day: Here Are The Alternative Plans From Airtel and Vi.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+