Home
ಸುದ್ದಿಜಾಲ

ಕಡಿಮೆ ಬೆಲೆಗೆ ಪ್ರತಿದಿನ 3GB ಡೇಟಾ ಅಗತ್ಯ ಇದ್ರೆ, ಈ ಪ್ಲ್ಯಾನ್‌ಗಳು ಖಂಡಿತಾ ಸೂಕ್ತ!

ಭಾರತೀಯ ಟೆಲಿಕಾಂ ಜಿಯೋ, ಏರ್‌ಟೆಲ್‌ ಹಾಗೂ ವೊಡಾಪೋನ್-ಐಡಿಯಾ (ವಿ ಟೆಲಿಕಾಂ) ಟೆಲಿಕಾಂಗಳು ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿವೆ. ಅವುಗಳಲ್ಲಿ ಹಲವು ಯೋಜನೆಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಅದರೊಂದಿಗೆ ಅನಿಯಮಿತ ವಾಯಿಸ್‌ ಕರೆ ಪಡೆದಿವೆ. ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನವನ್ನು ಸಹ ಹೊಂದಿವೆ. ಆದರೆ ಗ್ರಾಹಕರು ಮುಖ್ಯವಾಗಿ ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡಲು ಬಯಸುತ್ತಾರೆ.

ಕಡಿಮೆ ಬೆಲೆಗೆ ಪ್ರತಿದಿನ 3GB ಡೇಟಾ ಅಗತ್ಯ ಇದ್ರೆ, ಈ ಪ್ಲ್ಯಾನ್‌ಗಳು ಸೂಕ್ತ!

ಹೌದು, ಪ್ರಸ್ತುತ ಪ್ರತಿದಿನ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಯೋಜನೆಗಳಿಗೆ ಡಿಮ್ಯಾಂಡ್‌ ಹೆಚ್ಚು, ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ದೈನಂದಿನ 1GB, 1.5GB ಮತ್ತು 2GB ಪ್ರಯೋಜನಗಳ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಬಹುತೇಕ ಗ್ರಾಹಕರು ಪ್ರತಿದಿನ 2GB ಡೇಟಾ ಯೋಜನೆಯೆ ಬಯಸಿದರೇ, ಮತ್ತೆ ಕೆಲವು ಗ್ರಾಹಕರು ಪ್ರತಿದಿನ 3GB ಡೇಟಾ ಯೋಜನೆಯ ಬಯಸುತ್ತಾರೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳ ಪ್ರತಿದಿನ 3GB ಡೇಟಾ ಪ್ರಯೋಜನದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಕಡಿಮೆ ಬೆಲೆಗೆ ಪ್ರತಿದಿನ 3GB ಡೇಟಾ ಅಗತ್ಯ ಇದ್ರೆ, ಈ ಪ್ಲ್ಯಾನ್‌ಗಳು ಸೂಕ್ತ!

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೆ 252GB ಡೇಟಾ ಸೌಲಭ್ಯ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಕಡಿಮೆ ಬೆಲೆಗೆ ಪ್ರತಿದಿನ 3GB ಡೇಟಾ ಅಗತ್ಯ ಇದ್ರೆ, ಈ ಪ್ಲ್ಯಾನ್‌ಗಳು ಸೂಕ್ತ!

ವಿ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್‌ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

Best Mobiles in India

English summary
Jio, Airtel and Vi: 3GB Daily Data Plans for Medium Term Usage.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+