ಈ ಯೋಜನೆ ರೀಚಾರ್ಜ್ ಮಾಡಿದ್ರೆ, ದೈನಂದಿನ ಡೇಟಾ ಸಮಸ್ಯೆ ಇರೋದಿಲ್ಲ!
ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ (ವೊಡಾಪೋನ್ ಐಡಿಯಾ) ಟೆಲಿಕಾಂಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಪ್ರಿಪೇಯ್ಡ್ ಪ್ಲ್ಯಾನ್‌ಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ವಾಯಿಸ್ ಕರೆ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಹೊಂದಿವೆ. ಗ್ರಾಹಕರು ಸಹ ಬಜೆಟ್ ಬೆಲೆಯಲ್ಲಿ ಅಧಿಕ ಡೇಟಾ ಹಾಗೂ ಬೆಸ್ಟ್ ವ್ಯಾಲಿಡಿಟಿ ಸೌಲಭ್ಯ ಪಡೆದ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡುತ್ತಾರೆ.

ಹೌದು, ದೈನಂದಿನ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳಿಗೆ ಡಿಮ್ಯಾಂಡ್ ಹೆಚ್ಚು. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರತಿದಿನ 1GB, 1.5GB , 2GB ಮತ್ತು 3GB ಡೇಟಾ ಪ್ರಯೋಜನಗಳ ಯೋಜನೆಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 1 GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 2 GB ಡೇಟಾ ಸಾಕು ಎನಿಸುತ್ತದೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳ ದೈನಂದಿನ 2GB ಡೇಟಾ ಹಾಗೂ ಬೆಸ್ಟ್ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋದ 299ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋದ 1066ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಏರ್‌ಟೆಲ್ 359ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 359ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 549ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 549ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ವಿ ಟೆಲಿಕಾಂ 359ರೂ. ಪ್ರಿಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂ 359ರೂ ಪ್ರಿಪೇಯ್ಡ್ ಪ್ಲಾನ್ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿನಿತ್ಯ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಕರೆ ಪ್ರಯೋಜನ ಹಾಗೂ ಡೈಲಿ 100 ಎಸ್‌ಎಂಎಸ್ ಪ್ರಯೋಜನ ಕೂಡ ಲಭ್ಯವಿದೆ. ಇದಲ್ಲದೆ ವಿ ಮೂವಿಸ್, ಲೈವ್‌ಟಿವಿ ಯಂತಹ ಪ್ರಯೋಜನಗಳನ್ನು ನೀಡಲಿದೆ.

ವಿ ಟೆಲಿಕಾಂ 539ರೂ. ಪ್ರೀಪೇಯ್ಡ್‌ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂ 539ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನ್‌ನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ.


Click it and Unblock the Notifications








