Home
ಸುದ್ದಿಜಾಲ

BSNLನ ಈ ಪ್ಲ್ಯಾನ್‌ಗಳು ಅಗ್ಗದ ಬೆಲೆಗೆ ಲಭ್ಯ!.ಭರ್ಜರಿ ವ್ಯಾಲಿಡಿಟಿ ಸೌಲಭ್ಯ!

ಖಾಸಗಿ ಟೆಲಿಕಾಂಗಳಾದ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಕಂಪನಿಗಳು ಜುಲೈ 3 ರಿಂದ ತಮ್ಮ ಪ್ರೀಪೇಯ್ಡ್ ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು, ಚಂದಾದಾರರಿಗೆ ಶಾಕ್‌ ನೀಡಿವೆ. ಈ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂನ ಕೆಲವು ಅಗ್ಗದ ರೀಚಾರ್ಜ್‌ ಪ್ಲ್ಯಾನ್‌ಗಳು ಹೆಚ್ಚು ಗಮನ ಸೆಳೆಯುತ್ತಿವೆ. ಬಿಎಸ್‌ಎನ್‌ಎಲ್‌ ಟೆಲಿಕಾಂನ ಬಹುತೇಕ ಪ್ಲ್ಯಾನ್‌ಗಳು ಕೂಡಾ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ ಹಾಗೂ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಪಡೆದಿವೆ.

ಹೌದು, ಖಾಸಗಿ ಟೆಲಿಕಾಂಗಳ ದರ ಏರಿಕೆಯಿಂದಾಗಿ ಬಿಎಸ್‌ಎನ್‌ಎಲ್‌ ಟೆಲಿಕಾಂನ ಕೆಲವು ಅಗ್ಗದ ಪ್ಲ್ಯಾನ್‌ಗಳು ಈಗ ಆಕರ್ಷಕ ಎನಿಸುತ್ತಿವೆ. ಬಿಎಸ್‌ಎನ್‌ಎಲ್‌ ಅಲ್ಪಾವಧಿ ವ್ಯಾಲಿಡಿಟಿಯಿಂದ ವಾರ್ಷಿಕ ವ್ಯಾಲಿಡಿಟಿ ಅವಧಿ ವರೆಗೂ ಭಿನ್ನ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ. ಅದಾಗ್ಯೂ ಅಗ್ಗದ ಬೆಲೆಯಲ್ಲಿ ರೀಚಾರ್ಜ್‌ಗೆ ಲಭ್ಯ ಇರುವ ಕೆಲವು ಯೋಜನೆಗಳು ಗಮನ ಸೆಳೆಯುತ್ತವೆ. ಹಾಗಾದರೇ ಬಿಎಸ್‌ಎನ್‌ಎಲ್‌ನ ಬಜೆಟ್ ದರದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

BSNLನ ಈ ಪ್ಲ್ಯಾನ್‌ಗಳು ಅಗ್ಗದ ಬೆಲೆಗೆ ಲಭ್ಯ!.ಭರ್ಜರಿ ವ್ಯಾಲಿಡಿಟಿ ಸೌಲಭ್ಯ!

ಬಿಎಸ್‌ಎನ್‌ಎಲ್‌ 107ರೂ. ರೀಚಾರ್ಜ್‌ ಪ್ಲ್ಯಾನ್‌
ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 35 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯು ಒಟ್ಟಾರೇ ಅವಧಿಗೆ 3GB ಡೇಟಾ ಪ್ರಯೋಜನ ಪಡೆದಿದ್ದು, ಇದರ ಜೊತೆಗೆ 200 ನಿಮಿಷಗಳ ವಾಯಿಸ್‌ ಕರೆಯ ಸೌಲಭ್ಯವನ್ನು ಈ ಯೋಜನೆಯು ಪಡೆದಿದೆ.

ಬಿಎಸ್‌ಎನ್‌ಎಲ್‌ 197ರೂ. ರೀಚಾರ್ಜ್‌ ಪ್ಲ್ಯಾನ್‌
ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯ ಮೊದಲ 18 ದಿನಗಳ ಅವಧಿಗೆ ನಿತ್ಯ 2GB ಡೇಟಾ ಪ್ರಯೋಜನ ಸಿಗಲಿದ್ದು, ಹಾಗೆಯೇ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಇದೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯವನ್ನು ಈ ಯೋಜನೆಯು ಪಡೆದಿದೆ.

ಬಿಎಸ್‌ಎನ್‌ಎಲ್‌ 199ರೂ. ರೀಚಾರ್ಜ್‌ ಪ್ಲ್ಯಾನ್‌
ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ನಿತ್ಯ 2GB ಡೇಟಾ ಪ್ರಯೋಜನ ಸಿಗಲಿದ್ದು, ಹಾಗೆಯೇ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಇದೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯವನ್ನು ಈ ಯೋಜನೆಯು ಪಡೆದಿದೆ.

ಬಿಎಸ್‌ಎನ್‌ಎಲ್‌ 397ರೂ. ರೀಚಾರ್ಜ್‌ ಪ್ಲ್ಯಾನ್‌
ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ 397ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 150 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯ ಮೊದಲ 30 ದಿನಗಳ ಅವಧಿಗೆ ನಿತ್ಯ 2GB ಡೇಟಾ ಪ್ರಯೋಜನ ಸಿಗಲಿದ್ದು, ಹಾಗೆಯೇ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಇದೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯವನ್ನು ಈ ಯೋಜನೆಯು ಪಡೆದಿದೆ.

ಬಿಎಸ್‌ಎನ್‌ಎಲ್‌ 797ರೂ. ರೀಚಾರ್ಜ್‌ ಪ್ಲ್ಯಾನ್‌
ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ 797ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 300 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯ ಮೊದಲ 60 ದಿನಗಳ ಅವಧಿಗೆ ನಿತ್ಯ 2GB ಡೇಟಾ ಪ್ರಯೋಜನ ಸಿಗಲಿದ್ದು, ಹಾಗೆಯೇ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಇದೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯವನ್ನು ಈ ಯೋಜನೆಯು ಪಡೆದಿದೆ.

ಬಿಎಸ್‌ಎನ್‌ಎಲ್‌ 1999ರೂ. ರೀಚಾರ್ಜ್‌ ಪ್ಲ್ಯಾನ್‌
ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ 1999ರೂ. ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಒಟ್ಟು 600GB ಡೇಟಾ ಪ್ರಯೋಜನ ಗ್ರಾಹಕರಿಗೆ ಸಿಗಲಿದ್ದು, ಹಾಗೆಯೇ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಇದೆ. ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯವನ್ನು ಈ ಯೋಜನೆಯು ಪಡೆದಿದೆ.

Best Mobiles in India

English summary
Jio, Airtel and Vi plans hike, but BSNL still offering plans at affordable price. check all details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+