ಜಿಯೋ ಮತ್ತು ಏರ್‌ಟೆಲ್ ಮತ್ತು ವಿ 299ರೂ.ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಬೆಸ್ಟ್?
ದೇಶದ ಟೆಲಿಕಾಂ ವಲಯದಲ್ಲಿ ರಿಲಾಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಕಂಪನಿಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಅತ್ಯುತ್ತಮ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಕೂಡಿವೆ. ಆದರೆ ಅಗ್ಗದ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗ್ರಾಹಕರನ್ನು ಆಕರ್ಷಿಸಿವೆ. ಸಾಮಾನ್ಯವಾಗಿ ಹೆಚ್ಚಿನ ಬಳಕೆದಾರರು 299ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮನಸ್ಸು ಮಾಡುತ್ತಾರೆ.

ಹೌದು, ಏರ್‌ಟೆಲ್, ಜಿಯೋ, ವಿ ಟೆಲಿಕಾಂಗಳು 299ರೂ. ಬೆಲೆಯ ಪ್ರೀಪೇಯ್ಡ್ ಯೋಜನೆಯನ್ನು ಒಳಗೊಂಡಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ದೀರ್ಘಾವಧಿಯ ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಲಭ್ಯವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಚಂದಾದಾರಿಕೆಯು ಆಯ್ಕೆಗಳು ಇವೆ. ಅದಾಗ್ಯೂ ಈ ಮೂರು ಟೆಲಿಕಾಂನ ಯೋಜನೆಗಳಲ್ಲಿ ಕೆಲವು ಭಿನ್ನತೆಗಳು ಇವೆ. ಮೂರು ಟೆಲಿಕಾಂಗಳಲ್ಲಿ ರೀಚಾರ್ಜ್‌ಗೆ ಯಾವುದು ಉತ್ತಮ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ 299ರೂ. ಪ್ಲ್ಯಾನಿನಲ್ಲಿ ಒಟ್ಟಾರೇ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.
ಭಾರ್ತಿ ಏರ್‌ಟೆಲ್ 299ರೂ ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 299ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಮತ್ತು ವಿಂಕ್ ಮ್ಯೂಸಿಕ್‌ಗೆ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ಫಾಸ್ಟ್‌ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸೌಲಭ್ಯ ಸಹ ಲಭ್ಯವಾಗಲಿದೆ.

ವೊಡಾಫೋನ್ ಐಡಿಯಾ (Vi) 299ರೂ ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವೊಡಾಫೋನ್ ಐಡಿಯಾ ಟೆಲಿಕಾಂನ 299ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ವಿಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಸಿಗಲಿದೆ.
ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 299ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಪಡೆದಿದೆ. ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ದೈನಂದಿನ ಡೇಟಾ ಸೌಲಭ್ಯ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಪ್ರಯೋಜನ ಸಿಗಲಿದೆ. ಜೊತೆಗೆ ಅನಿಯಮಿತ ವಾಯಿಸ್ ಕರೆ ಮತ್ತು 100 ಎಸ್‌ಎಂಎಸ್ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಮೂವಿಸ್, ಜಿಯೋ ನ್ಯೂಸ್ ಹಾಗೂ ಇತರೆ ಸೇವೆಗಳು ಸಿಗಲಿವೆ.


Click it and Unblock the Notifications








