ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ 2999ರೂ. ಪ್ಲ್ಯಾನ್: ಯಾವುದು ಬೆಸ್ಟ್?
ಭಾರತೀಯ ಟೆಲಿಕಾಂ ವಲಯದಲ್ಲಿ ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಆಯ್ಕೆಗಳು ಸೇರಿವೆ. ಆ ಪೈಕಿ ಕೆಲವೊಂದು ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಪ್ರಯೋಜನದಿಂದ ಹೈಲೈಟ್ ಎನಿಸಿವೆ. ಆ ಪೈಕಿ 2999ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದು.
ಹೌದು, ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂ 2999ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಮೂರು ಸಂಸ್ಥೆಗಳ ಈ ಮೊತ್ತದ ರೀಚಾರ್ಜ್ ಪ್ಲ್ಯಾನಿನಲ್ಲಿ ಅಧಿಕ ದೈನಂದಿನ ಡೇಟಾ, ದೀರ್ಘ ವ್ಯಾಲಿಡಿಟಿ, ಅನಿಯಮಿತ ಧ್ವನಿ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಕೂಡಾ ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಚಂದಾದಾರಿಕೆ ಸಹ ಸಿಗಲಿವೆ. ಹಾಗಾದರೇ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ 2999ರೂ. ಪ್ಲ್ಯಾನಿನಲ್ಲಿ ಯಾವುದು ಬೆಸ್ಟ್? ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಭಾರ್ತಿ ಏರ್‌ಟೆಲ್‌ನ 2999ರೂ. ರೀಚಾರ್ಜ್ ಯೋಜನೆ
ಭಾರ್ತಿ ಏರ್‌ಟೆಲ್‌ನ 2999ರೂ. ರೀಚಾರ್ಜ್ ಯೋಜನೆಯು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಹೊಂದಿದೆ. ಈ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ಗ್ರಾಹಕರಿಗೆ ಲಭ್ಯವಾಗಲಿವೆ. ಹಾಗೆಯೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ 5G ಡೇಟಾ, ಹೆಲೋ ಟ್ಯೂನ್ಸ್, ವಿಂಕ್ ಮ್ಯೂಸಿಕ್ ಸೇವೆಗಳು ಲಭ್ಯ.
ರಿಲಯನ್ಸ್ ಜಿಯೋ 2999ರೂ. ರೀಚಾರ್ಜ್ ಯೋಜನೆ
ರಿಲಯನ್ಸ್ ಜಿಯೋ 2999ರೂ. ರೀಚಾರ್ಜ್ ಯೋಜನೆ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಈ ಯೋಜನೆಯಲ್ಲಿ 912.5GB ಡೇಟಾ ಸೌಲಭ್ಯ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಸೇವೆಗಳು ಲಭ್ಯ.
ವಿ ಟೆಲಿಕಾಂನ 2999ರೂ. ರೀಚಾರ್ಜ್ ಯೋಜನೆ
ವಿ ಟೆಲಿಕಾಂನ 2999ರೂ. ರೀಚಾರ್ಜ್ ಯೋಜನೆಯು ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದುಕೊಂಡಿದೆ. ಈ ಯೋಜನೆಯಲ್ಲಿ ಒಟ್ಟು 850 GB ಡೇಟಾ ಸೌಲಭ್ಯ ಗ್ರಾಹಕರಿಗೆ ದೊರೆಯುತ್ತದೆ. ಅಲ್ಲದೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ವಿ ಟೆಲಿಕಾಂ ಆಪ್ಸ್ ಸೌಲಭ್ಯ ಲಭ್ಯ.
ರೀಚಾರ್ಜ್‌ಗೆ ಯಾವುದು ಬೆಸ್ಟ್?
ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂ 2999ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್‌ಗಳು ವ್ಯಾಲಿಡಿಟಿಯಲ್ಲಿ ಸಾಮ್ಯತೆ ಹೊಂದಿವೆ. ಅದಾಗ್ಯೂ ಇತರೆ ಪ್ರಯೋಜನಗಳಲ್ಲಿ ಈ ಮೂರು ಪ್ಲ್ಯಾನ್‌ಗಳ ನಡುವೆ ಭಿನ್ನತೆ ಕಾಣಬಹುದಾಗಿದೆ. ಏರ್‌ಟೆಲ್‌ನ ಯೋಜನೆಯು ಸಹ ದೈನಂದಿನ 2GB ಡೇಟಾ ಜೊತೆಗೆ ಆಕರ್ಷಕ ಎನಿಸುತ್ತದೆ. ಇನ್ನು ದೈನಂದಿನ ಅಧಿಕ ಡೇಟಾ ಅಗತ್ಯತೆಯ ದೃಷ್ಠಿಕೋನದಿಂದ ನೋಡುವುದಾದರೆ ಜಿಯೋದ 2999ರೂ ಯೋಜನೆಯು ಹೆಚ್ಚು ಸೂಕ್ತ ಎನಿಸುತ್ತದೆ.


Click it and Unblock the Notifications








