ಅಧಿಕ ಇಂಟರ್ನೆಟ್ ಬಳಕೆ ಮಾಡುವವರಿಗೆ ಅಗ್ಗದ ದರದಲ್ಲಿ ಈ ಪ್ಲ್ಯಾನ್ ಬೆಸ್ಟ್!
ಪ್ರಸ್ತುತ ಸ್ಮಾರ್ಟ್‌ಫೋನ್ ಸೇರಿದಂತೆ ಇತರೆ ಎಲ್ಲ ಸ್ಮಾರ್ಟ್ ಡಿವೈಸ್‌ಗಳಿಗೆ ಇಂಟರ್ನೆಟ್ ಅಗತ್ಯ. ಈ ನಿಟ್ಟಿನಲ್ಲಿ ಟೆಲಿಕಾಂ ಸಂಸ್ಥೆಗಳು ಅಧಿಕ ಡೇಟಾ ಯೋಜನೆಗಳ ಆಯ್ಕೆಯನ್ನು ಪರಿಚಯಿಸುತ್ತ ಸಾಗಿವೆ. ಈ ಮೂಲಕ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನ ನಡೆಸಿವೆ. ಆ ಪೈಕಿ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಆಕರ್ಷಕ ಡೇಟಾ ಸೌಲಭ್ಯದ ಯೋಜನೆಗಳನ್ನು ಪರಿಚಯಿಸಿವೆ.

ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳ ಕೆಲವು ಪ್ಲ್ಯಾನ್‌ಗಳು ಪ್ರತಿದಿನ 2GB ಡೇಟಾ ಸೌಲಭ್ಯ ಹೊಂದಿದ್ದು, ಮತ್ತೆ ಕೆಲವು ಪ್ಲ್ಯಾನ್‌ಗಳು ಪ್ರತಿದಿನ 3GB ಡೇಟಾ ಪ್ರಯೋಜನ ಪಡೆದಿವೆ. ಈ ಅಧಿಕ ಡೇಟಾ ಯೋಜನೆಗಳು ಪ್ರಸ್ತತ ಗ್ರಾಹಕರಿಗೆ ಹೆಚ್ಚು ಅಗತ್ಯ ಅನಿಸುತ್ತವೆ. ಇನ್ನೂ ಅನೇಕರು ವರ್ಕ್ ಫ್ರಮ್ ಹೋಮ್ ನಡೆಸಿರುವುದರಿಂದ ಅವರಿಗೆ ಹೆಚ್ಚಿನ ಡೇಟಾ ಅಗತ್ಯ ಬೇಕಾಗಿರುತ್ತದೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಅಧಿಕ ಡೇಟಾ ಯೋಜನೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 444ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಏರ್‌ಟೆಲ್ 298ರೂ. ಪ್ಲ್ಯಾನ್
ಏರ್‌ಟೆಲ್‌ನ 298ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 349ರೂ. ಪ್ಲ್ಯಾನ್
ಏರ್‌ಟೆಲ್‌ನ 349ರೂ. ಪ್ರೀಪೇಡ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ವಿ ಟೆಲಿಕಾಂ 299ರೂ.ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








