ಹೊಸ ವರ್ಷಕ್ಕೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿ, ವರ್ಷಪೂರ್ತಿ ಮತ್ತೆ ರೀಚಾರ್ಜ್ ಇರಲ್ಲ!
ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಇತ್ತೀಚಿಗೆ ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಯಲ್ಲಿ ಹೆಚ್ಚಳ ಮಾಡಿವೆ. ಬೆಲೆ ಹೆಚ್ಚಳವು ಗ್ರಾಹಕರಿಗೆ ಬಿಗ್ ಶಾಕ್ ಎನಿಸಿದೆ. ಈ ನಿಟ್ಟಿನಲ್ಲಿ ಸದ್ಯ ಬಹುತೇಕ ಗ್ರಾಹಕರು ದೀರ್ಘಾವಧಿ ವ್ಯಾಲಿಡಿಟಿ ಇರುವ ಯೋಜನೆಗಳನ್ನು ರೀಚಾರ್ಜ್ ಮಾಡಲು ಇಷ್ಟಪಡುತ್ತಾರೆ. ಅಧಿಕ ವ್ಯಾಲಿಡಿಟಿ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಇರುವ ಪ್ಲ್ಯಾನ್‌ಗಳಿಗೆ ಗಮನ ಸೆಳೆದಿವೆ.

ಹೌದು, ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಆಯ್ಕೆಗಳನ್ನು ಒಳಗೊಂಡಿದೆ. ಸದ್ಯ ಹೆಚ್ಚಿನ ಬಳಕೆದಾರರು ದೈನಂದಿನ ಅಧಿಕ ಡೇಟಾ, ಎಸ್‌ಎಮ್‌ಎಸ್ ಸೌಲಭ್ಯ, ವಾಯಿಸ್ ಕರೆ ಹಾಗೂ ಅಧಿಕ ವ್ಯಾಲಿಡಿಟಿ ಪ್ರಯೋಜನ ಇರುವ ಯೋಜನೆಗಳತ್ತ ಮುಖ ಮಾಡುತ್ತಾರೆ. ಈ ನಿಟ್ಟಿನಲ್ಲಿ ನೀವೇನಾದರೂ ಅಧಿಕ ವ್ಯಾಲಿಡಿಟಿ ಯೋಜನೆ ರೀಚಾರ್ಜ್ ಮಾಡಲು ಇಚ್ಛಿಸಿದರೇ, ನಿಮಗೆ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳು ಬೆಸ್ಟ್ ಆಯ್ಕೆ ಆಗಿವೆ. ವಾರ್ಷಿಕ ಯೋಜನೆಗಳನ್ನು ವರ್ಷದ ಆರಂಭದಲ್ಲೇ ರೀಚಾರ್ಜ್ ಮಾಡಿಸಿದರೇ, ಮತ್ತೆ ಪದೇ ಪದೇ ರೀಚಾರ್ಜ್ ಮಾಡುವ ಅಗತ್ಯ ಇರಲ್ಲ. ಹಾಗಾದರೇ ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂ ಸಂಸ್ಥೆಗಳ ವಾರ್ಷಿಕ ವ್ಯಾಲಿಡಿಟಿಯ ಯೋಜನೆಯ ಪ್ರಯೋಜನಗಳೆನು?...ಇತರೆ ದೀರ್ಘಾವಧಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಜಿಯೋದ 1199ರೂ. ಯೋಜನೆ ಪ್ರಯೋಜನಗಳು
ಜಿಯೋ 1199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.


Click it and Unblock the Notifications








