ಜಿಯೋ ಮತ್ತು ಏರ್‌ಟೆಲ್ ಆರಂಭಿಕ ರೀಚಾರ್ಜ್ ಪ್ಲ್ಯಾನಿನಲ್ಲಿ ಏನುಂಟು ಏನಿಲ್ಲಾ?
ದೇಶದಲ್ಲಿ ಬಹುಬೇಡಿಕೆಯಲ್ಲಿ ಗುರುತಿಸಿಕೊಂಡಿರುವ ಖಾಸಗಿ ಟೆಲಿಕಾಂ ಸಂಸ್ಥೆಗಳೆಂದರೇ ರಿಲಾಯನ್ಸ್ ಜಿಯೋ ಮತ್ತು ಏರ್‌ಟೆಲ್ ಆಗಿವೆ. ಈ ಯೋಜನೆಗಳು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಹಲವು ಪ್ಲ್ಯಾನ್‌ಗಳು ಪ್ರತಿದಿನ ಅಧಿಕ ಡೇಟಾದ ಜೊತೆಗೆ ವ್ಯಾಲಿಡಿಟಿ ಸಹ ನೀಡುತ್ತವೆ. ಗ್ರಾಹಕರು ಸಹ ಪ್ರತಿದಿನ ಹೆಚ್ಚು ಡೇಟಾ ಲಭ್ಯ ಇರುವ ಪ್ಲ್ಯಾನ್‌ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಹೌದು, ಜಿಯೋ, ವೊಡಾಫೋನ್ ಮತ್ತು ಏರ್‌ಟೆಲ್ ಟೆಲಿಕಾಂಗಳು ಹಲವು ಆಕರ್ಷಕ ಯೋಜನೆಗಳ ಪಟ್ಟಿಯನ್ನೇ ಹೊಂದಿವೆ. ಅಗ್ಗದ ಬೆಲೆಯ ರೀಚಾರ್ಜ್‌ನಿಂದ ದುಬಾರಿ ಬೆಲೆಯ ಪ್ಲ್ಯಾನ್‌ಗಳನ್ನು ಒಳಗೊಂಡಿವೆ. ಅಗ್ಗದ ಬೆಲೆಯ ಪ್ಲ್ಯಾನಿನಲ್ಲಿಯೂ ಸಹ ಪ್ರತಿದಿನ ಡೇಟಾ ಜೊತೆಗೆ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಪಡೆದಿದೆ. ಜಿಯೋ, ವೊಡಾಫೋನ್, ಹಾಗೂ ಏರ್‌ಟೆಲ್‌ನ ಆರಂಭಿಕ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ಓದಿರಿ.

ಜಿಯೋದ 199ರೂ ಪ್ಲ್ಯಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಅನಿಯಮಿತ ಕರೆಗಳ ಸೌಲಭ್ಯ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ಕರೆಗಳಿಗೆ 1000 ನಿಮಿಷದ ಕರೆ ಮಿತಿ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗುತ್ತವೆ.

ಏರ್‌ಟೆಲ್ 197ರೂ. ಪ್ಲ್ಯಾನ್
ಏರ್‌ಟೆಲ್‌ನ 197 ರೂ. ಆರಂಭಿಕ ರೀಚಾರ್ಜ್ ಪ್ಲ್ಯಾನ್ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿವೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ 2GB ಡೇಟಾವನ್ನು ಹೊಂದಿದೆ. ಹಾಗೆಯೇ ಅನಿಯಮಿತ ಕರೆಗಳ ಸೌಲಭ್ಯವನ್ನು ಪಡೆದಿದ್ದು, ಪ್ರತಿದಿನ 100 ಎಸ್‌ಎಂಎಸ್ ಪ್ರಯೋಜನವನ್ನು ಸಹ ಲಭ್ಯವಾಗಿಸಿದೆ.

ವೊಡಾಫೋನ್ 299ರೂ. ಪ್ಲ್ಯಾನ್
ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 4GB ಡೇಟಾ ಸೌಲಭ್ಯ ದೊರೆಯುತ್ತದೆ.(ಸದ್ಯ ಆಯ್ದ ಟೆಲಿಕಾಂ ಸರ್ಕಲ್‌ಗಳಲ್ಲಿ ಈ ಪ್ಲ್ಯಾನಿಗೆ ಡಬಲ್ ಡೇಟಾ ಆಫರ್ ಇದೆ) ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








