250ರೂ. ಒಳಗೆ ಲಭ್ಯವಿರುವ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಮಾಹಿತಿ!
ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಇತ್ತೀಚಿಗೆ ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಳ ಮಾಡಿವೆ. ಕೆಲವೊಂದು ಯೋಜನೆಗಳು ಆಕರ್ಷಕ ಡೇಟಾ ಪ್ರಯೋಜನ, ಅನಿಯಮಿಯ ವಾಯಿಸ್ ಕರೆ, ಬಿಗ್ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಮತ್ತೆ ಕೆಲವು ಯೋಜನೆಗಳು ನಿಯಮಿತ ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಪಡೆದಿವೆ. ಕೆಲವು ಬಳಕೆದಾರರು ಕಡಿಮೆ ಬೆಲೆಗೆ ಅತ್ಯುತ್ತಮ ಎನಿಸುವ ಯೋಜನೆ ಗಳನ್ನು ರೀಚಾರ್ಜ್ ಮಾಡಲು ಮುಂದಾಗುತ್ತಾರೆ.

ಹೌದು, ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳ ಕೆಲವು ಯೋಜನೆಗಳು ಆಕರ್ಷಕ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ಬಿಗ್ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ. ಕೆಲವು ಗ್ರಾಹಕರು ಅಧಿಕ ಡೇಟಾ ಸೌಲಭ್ಯ ಗಮನಿಸಿದರೇ, ಮತ್ತೆ ಕೆಲವರು ಬಜೆಟ್ ದರದ ಸೌಲಭ್ಯವನ್ನು ಗಮನಿಸುತ್ತಾರೆ. ಇನ್ನು ಕೆಲವರು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳ ಯೋಜನಗಳತ್ತ ಮನಸ್ಸು ಮಾಡುತ್ತಾರೆ. ಹಾಗಾದರೇ ಈ ಮೂರು ಟೆಲಿಕಾಂಗಳು 250ರೂ. ಒಳಗೆ ಲಭ್ಯವಿರುವ ಜನಪ್ರಿಯ ಪ್ರಿಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 14 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 21 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ ಆಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋದ 199ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 23 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಆಗಲಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 34.5GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 42 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಏರ್‌ಟೆಲ್‌ನ 155ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 1GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ ಆಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಏರ್‌ಟೆಲ್ ಆಪ್ಸ್ ಸೇವೆ ಲಭ್ಯ.

ಏರ್‌ಟೆಲ್‌ನ 179ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 2GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ ಆಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಏರ್‌ಟೆಲ್ ಆಪ್ಸ್, ಹೆಲೋ ಟ್ಯೂನ್, ವೆಂಕ್ ಮ್ಯೂಸಿಕ್ ಸೇವೆ ಲಭ್ಯ.

ಏರ್‌ಟೆಲ್‌ನ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 24 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯ ಲಭ್ಯ ಆಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಆಪ್ಸ್ ಸೇವೆ ಲಭ್ಯ.

ವಿ ಟೆಲಿಕಾಂ 149ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 1 GB ಡೇಟಾ ಪ್ರಯೋಜನ ದೊರೆಯಲಿದೆ. ಎಸ್‌ಎಮ್‌ಎಸ್ ಸೌಲಭ್ಯ ಲಭ್ಯತೆ ಇಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂ 199ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 18 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆ ಯಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಹ ಲಭ್ಯ.

ವಿ ಟೆಲಿಕಾಂ 219ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆ ಯಲ್ಲಿ ಪ್ರತಿದಿನ ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಹ ಲಭ್ಯ. ಹೆಚ್ಚುವರಿ ಯಾಗಿ ವಿ ಆಪ್ಸ್ ಲಭ್ಯ ಆಗಲಿವೆ.


Click it and Unblock the Notifications








