ಈ ಪ್ಲ್ಯಾನ್‌ಗಳು ದುಬಾರಿ!..ಸಿಗುತ್ತೆ ಉಚಿತ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ!
ಭಾರತೀಯ ಟೆಲಿಕಾಂ ಸಂಸ್ಥೆಗಳು ಸದ್ಯದ ದಿನಗಳಲ್ಲಿ ಅಧಿಕ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಚಂದಾದಾರರನ್ನು ಆಕರ್ಷಿಸುತ್ತಿವೆ. ಇದರೊಂದಿಗೆ ಜೊತೆಗೆ ಕೆಲವು ಆಯ್ದ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆ ಹೆಚ್ಚುವರಿಯಾಗಿ OTT ಓಟಿಟಿ ಸೇವೆಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ಏರ್‌ಟೆಲ್, ವಿ ಹಾಗೂ ಜಿಯೋ ಟೆಲಿಕಾಂಗಳು ಕೆಲವು ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿಯಾಗಿ ಉಚಿತ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ನೀಡಿದೆ. ಈ ಯೋಜನೆಗಳು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಜೊತೆಗೆ ಇತರೆ ಆಕರ್ಷಕ ಪ್ರಯೋಜನ ಗಳನ್ನು ಹೊಂದಿವೆ.

ಹೌದು, ಏರ್‌ಟೆಲ್, ವಿ ಹಾಗೂ ಜಿಯೋ ಟೆಲಿಕಾಂಗಳು ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಚಂದಾದಾರಿಕೆಯ ಪ್ಲ್ಯಾನ್‌ಗಳನ್ನು ಹೊಂದಿವೆ. ಆ ಪೈಕಿ ಕೆಲವು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಯೋಜನೆಗಳು ಬಜೆಟ್ ದರದಲ್ಲಿ ಕಾಣಿಸಿಕೊಂಡಿದ್ದರೆ, ಮತ್ತೆ ಕೆಲವು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ದುಬಾರಿ ಪ್ರೈಸ್‌ಟ್ಯಾಗ್ ಪಡೆದಿವೆ. ಮೂರು ಟೆಲಿಕಾಂಗಳು ಭಿನ್ನ ದರದಲ್ಲಿ ಯೋಜನೆಯ ಆಯ್ಕೆ ಹೊಂದಿದ್ದು, ಹಾಗೆಯೇ ಭಿನ್ನ ವ್ಯಾಲಿಡಿಟಿ, ಡೇಟಾ ಪ್ರಯೋಜನದ ಸೌಲಭ್ಯದ ಆಯ್ಕೆಗಳನ್ನು ಪಡೆದಿವೆ. ಹಾಗಾದರೇ ದುಬಾರಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ಓದಿರಿ.

ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ X stream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂ 3099ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 3099ರೂ. ಪ್ರಿಪೇಯ್ಡ್ ಯೋಜನೆ ಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್ ಓವರ್ ಪ್ರಯೋಜನ ಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿ ಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಲಭ್ಯ ಆಗಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.


Click it and Unblock the Notifications








