ಈ ಬಜೆಟ್‌ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ದೈನಂದಿನ ಡೇಟಾ ಕಿರಿ ಕಿರಿ ಇರೋದಿಲ್ಲ!

|

ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ (ವೊಡಾಪೋನ್ ಐಡಿಯಾ) ಟೆಲಿಕಾಂಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ವಾಯಿಸ್‌ ಕರೆ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಹೊಂದಿವೆ. ಗ್ರಾಹಕರು ಸಹ ಬಜೆಟ್‌ ಬೆಲೆಯಲ್ಲಿ ಅಧಿಕ ಡೇಟಾ ಹಾಗೂ ಬೆಸ್ಟ್‌ ವ್ಯಾಲಿಡಿಟಿ ಸೌಲಭ್ಯ ಪಡೆದ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡುತ್ತಾರೆ.

ಈ ಬಜೆಟ್‌ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ದೈನಂದಿನ ಡೇಟಾ ಕಿರಿ ಕಿರಿ ಇರೋದಿಲ್ಲ

ಪ್ರತಿದಿನ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಪ್ರಿಪೇಯ್ಡ್‌ ಯೋಜನೆಗಳಿಗೆ ಬೇಡಿಕೆ ಅಧಿಕ. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರತಿದಿನ 1.5GB , 2GB ಮತ್ತು 3GB ಡೇಟಾ ಪ್ರಯೋಜನಗಳ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 2GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 3GB ಡೇಟಾ ಬಯಸುತ್ತಾರೆ. ಇನ್ನು ಹೆಚ್ಚು ಡೇಟಾ ಬಳಕೆಮಾಡದ ಗ್ರಾಹಕರು 1GB ಡೇಟಾ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ. ಹಾಗಾದರೇ ಜಿಯೋ ಮತ್ತು ಏರ್‌ಟೆಲ್ ದೈನಂದಿನ 2GB ಡೇಟಾ ಹಾಗೂ ಬೆಸ್ಟ್ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಈ ಬಜೆಟ್‌ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ದೈನಂದಿನ ಡೇಟಾ ಕಿರಿ ಕಿರಿ ಇರೋದಿಲ್ಲ

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ 359ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

Best Mobiles in India

English summary
Jio and Airtel: Best Daily 2GB Data Plans with Attractive Validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X