ಜಿಯೋ ಮತ್ತು ಏರ್‌ಟೆಲ್ 149ರೂ. ಪ್ಲ್ಯಾನ್: ರೀಚಾರ್ಜ್ ಮಾಡಿಸಲು ಯಾವುದು ಬೆಸ್ಟ್?
ಭಾರತೀಯ ಟೆಲಿಕಾಂ ವಲಯದಲ್ಲಿ ಈಗಾಗಲೇ ಸಾಕಷ್ಟು ಹೊಸ ಅಪ್‌ಡೇಟ್‌ಗಳು ನಡೆದಿವೆ. ಆ ಪೈಕಿ ಪ್ರಮುಖ ಟೆಲಿಕಾಂ ಸಂಸ್ಥೆಗಳು ಚಂದಾದಾರರನ್ನು ಹೆಚ್ಚಿಸಿಕೊಳ್ಳಲು ಕಡಿಮೆ ಬೆಲೆಯಲ್ಲಿ ಹಲವು ಪ್ರಯೋಜನಗಳ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿವೆ. ಅವುಗಳಲ್ಲಿ ರಿಲಾಯನ್ಸ್ ಜಿಯೋ ಹಾಗೂ ಏರ್‌ಟೆಲ್ ಸಂಸ್ಥೆಗಳು ಹೆಚ್ಚು ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದ್ದು, ಈ ಟೆಲಿಕಾಂಗಳು ಬಜೆಟ್ ದರದ ದೀರ್ಗಾವಧಿಯ ಪ್ಲ್ಯಾನ್‌ಗಳು ಆಕರ್ಷಕ ಅನಿಸುತ್ತದೆ.

ಹೌದು, ಜಿಯೋ ಹಾಗೂ ಏರ್‌ಟೆಲ್ ಕೆಲವು ಪ್ರೀಪೇಯ್ಡ್ ಯೋಜನೆಗಳು ಗ್ರಾಹಕರನ್ನು ಹೆಚ್ಚಾಗಿ ಸೆಳೆದಿವೆ. ಮುಖ್ಯವಾಗಿ ಅಗ್ಗದ 149ರೂ. ಬೆಲೆಯ ಪ್ರೀಪೇಯ್ಡ್ ಯೋಜನೆಯು ಪ್ರತಿದಿನ ಡೇಟಾ ಸೌಲಭ್ಯ, ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಅವಧಿಯಂತಹ ಪ್ರಯೋಜನಗಳನ್ನು ಹೊಂದಿದ್ದು, ಬಹುತೇಕ ಬಳಕೆದಾರರನ್ನು ಆಕರ್ಷಿಸಿದೆ. ಹಾಗಾದರೇ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂನ 149ರೂ. ಯೋಜನೆಯಲ್ಲಿ ಯಾವುದು ಬೆಸ್ಟ್?..ಪ್ರಯೋಜನಗಳೆನು?..ಮುಂದೆ ಓದಿರಿ.

ರಿಲಾಯನ್ಸ್ ಜಿಯೋ 149ರೂ. ಪ್ರೀಪೇಯ್ಡ್ ಯೋಜನೆ
ರಿಲಾಯನ್ಸ್ ಜಿಯೋ 149ರೂ.ಗಳ ಆಲ್-ಇನ್-ಒನ್ ಪ್ರಿಪೇಯ್ಡ್ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 1 ಜಿಬಿ ಲಭ್ಯವಾಗುತ್ತದೆ. ಜಿಯೋದಿಂದ ಜಿಯೋ ಹೊರಹೋಗುವ ಕರೆಗಳು ಉಚಿತವಾಗಿರುತ್ತದೆ ಹಾಗೂ ಜಿಯೋದಿಂದ ಇತರೆ ನೆಟವರ್ಕ್‌ಗಳ ಕರೆಗಳಿಗೆ ಸಹ ಸಂಪೂರ್ಣ ಅನಿಯಮಿತ ಆಗಿವೆ. ಈ ಯೋಜನೆಯು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಅಲ್ಲದೆ, ಚಂದಾದಾರರಿಗೆ ದಿನಕ್ಕೆ 100 ಉಚಿತ ಎಸ್‌ಎಂಎಸ್ ಸೌಲಭ್ಯವನ್ನು ನೀಡುತ್ತದೆ.

ಭಾರ್ತಿ ಏರ್‌ಟೆಲ್ 149ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್‌ನ 149ರೂ. ಪ್ರೀಪೇಡ್ ಪ್ಲ್ಯಾನ್ ಸಹ ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಒಟ್ಟಾರೇ 2GB ಡೇಟಾ ಹಾಗೂ ಒಟ್ಟಾರೇ 300 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಹಾಗೂ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ. ಫ್ರೀ ಹೆಲೋ ಟ್ಯೂನ್ಸ್, ವಿಂಕ್ ಮ್ಯೂಸಿಕ್ ಸೇವೆಗಳು ಲಭ್ಯವಾಗಲಿವೆ.

ಪ್ರಯೋಜನಗಳಲ್ಲಿ ಭಿನ್ನತೆ
ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳ ಬಹುತೇಕ ಯೋಜನೆಗಳಲ್ಲಿ ಸಾಮ್ಯತೆ ಕಂಡು ಬಂದರೂ, ಕೆಲವು ಭಿನ್ನ ಪ್ರಯೋಜನಗಳು ಕಾಣಿಸುತ್ತವೆ. ಸದ್ಯ 149ರೂ. ಬಜೆಟ್ ಬೆಲೆಯ ರೀಚಾರ್ಜ್ ಯೋಜನೆಯಲ್ಲಿ ಜಿಯೋ ಟೆಲಿಕಾಂನಲ್ಲಿ ಡೈಲಿ 1 GB ಡೇಟಾ ಪ್ರಯೋಜನ ಹೊಂದಿದೆ. ಎಸ್‌ಎಮ್‌ಎಸ್ ಸೌಲಭ್ಯ ನೀಡಿವೆ. ಆದರೆ ವ್ಯಾಲಿಡಿಟಿ ಹಾಗೂ ವಾಯಿಸ್ ಕರೆ ಪ್ರಯೋಜನಗಳಲ್ಲಿ ಭಿನ್ನತೆ ಕಾಣಬಹುದಾಗಿದೆ.

ರೀಚಾರ್ಜ್ ಮಾಡಿಸಲು ಯಾವುದು ಬೆಸ್ಟ್?
149ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳು ಆಕರ್ಷಕ ಪ್ರಯೋಜನ ನೀಡಿದ್ದು, ಪ್ರತಿದಿನ 2GB ಡೇಟಾ ಆಫರ್ ಹೊಂದಿವೆ. ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಜಿಯೋ ಉತ್ತಮ ಅನಿಸಲಿದೆ. ಏಕೆಂದರೇ ಜಿಯೋ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಏರ್‌ಟೆಲ್ 28 ದಿನಗಳ ವ್ಯಾಲಿಡಿಟಿ ಪಡೆದಿದೆ.


Click it and Unblock the Notifications








