Just In
Don't Miss
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Movies
ಶಮಂತ್ಗೆ ಸಿಕ್ತು ಬಂಪರ್: ಎರಡನೇ ವಾರವೂ ಬ್ರೋ ಗೌಡ ಸೇಫ್
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಿಯೋ ಮತ್ತು ಏರ್ಟೆಲ್ 199ರೂ. ಪ್ರೀಪೇಯ್ಡ್ ಪ್ಲ್ಯಾನ್: ಯಾವುದು ಉತ್ತಮ?
ಸದ್ಯ ದೇಶಿಯ ಟೆಲಿಕಾಂ ವಲಯದಲ್ಲಿ ಸಾಕಷ್ಟು ಅಪ್ಡೇಟ್ಗಳು ನಡೆದಿದ್ದು, ಟೆಲಿಕಾಂ ಸಂಸ್ಥೆಗಳು ಚಂದಾದಾರರನ್ನು ಹೆಚ್ಚಿಸಿಕೊಳ್ಳಲು ಪೈಪೋಟಿ ನಡೆಸುತ್ತಿವೆ. ಈ ನಿಟ್ಟಿನಲ್ಲಿ ಪ್ರಮುಖ ಟೆಲಿಕಾಂಗಳು ಅಗ್ಗದ ಬೆಲೆಯಲ್ಲಿ ಪ್ರೀಪೇಯ್ಡ್ ಯೋನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಮುಖ್ಯವಾಗಿ ರಿಲಾಯನ್ಸ್ ಜಿಯೋ ಹಾಗೂ ಭಾರ್ತಿ ಏರ್ಟೆಲ್ ಟೆಲಿಕಾಂಗಳು ಹೆಚ್ಚು ಟ್ರೆಂಡ್ನಲ್ಲಿ ಕಾಣಿಸಿಕೊಂಡಿವೆ. ಈ ಎರಡು ಟೆಲಿಕಾಂಗಳ ಅಗ್ಗದ 199ರೂ. ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಜಿಯೋ ಹಾಗೂ ಏರ್ಟೆಲ್ ಟೆಲಿಕಾಂನ ಬಜೆಟ್ ದರದ ಪ್ರೀಪೇಯ್ಡ್ ಯೋಜನೆಗಳು ಬಳಕೆದಾರರ ಗಮನ ಸೆಳೆದಿವೆ. ಈ ಎರಡು ಟೆಲಿಕಾಂಗಳು 199ರೂ. ಬೆಲೆಯ ಪ್ರೀಪೇಯ್ಡ್ ಯೋಜನೆಯನ್ನು ಹೊಂದಿವೆ. ಎರಡು ಟೆಲಿಕಾಂಗಳ ಈ ಯೋಜನೆಯ ಬೆಲೆಯಲ್ಲಿ ಸಾಮ್ಯತೆ ಕಂಡರೂ ಭಿನ್ನ ಪ್ರಯೋಜನಗಳನ್ನು ಹೊಂದಿವೆ. ಪ್ರತಿದಿನ ಡೇಟಾ ಸೌಲಭ್ಯ, ವಾಯಿಸ್ ಕರೆ, ಎಸ್ಎಮ್ಎಸ್ ಹಾಗೂ ಅಧಿಕ ವ್ಯಾಲಿಡಿಟಿ ಅವಧಿಯಂತಹ ಪ್ರಯೋಜನಗಳು ಇವೆ. ಹಾಗಾದರೇ ಜಿಯೋ ಮತ್ತು ಏರ್ಟೆಲ್ ಟೆಲಿಕಾಂನ 199ರೂ. ಯೋಜನೆಯಲ್ಲಿ ರೀಚಾರ್ಜ್ಗೆ ಯಾವುದು ಉತ್ತಮ?..ಮುಂದೆ ಓದಿರಿ.

ರಿಲಾಯನ್ಸ್ ಜಿಯೋದ 199ರೂ. ಪ್ಲ್ಯಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಅನಿಯಮಿತ ಕರೆಗಳ ಸೌಲಭ್ಯ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ಕರೆಗಳಿಗೆ 1000 ನಿಮಿಷದ ಕರೆ ಮಿತಿ ಇದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗುತ್ತವೆ.

ಏರ್ಟೆಲ್ 199ರೂ. ಪ್ಲ್ಯಾನ್
ಏರ್ಟೆಲ್ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ, 100 ಎಸ್ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಆದರೆ ಈ ಯೋಜನೆಯು ಇದೀಗ ಪರಿಷ್ಕರಣೆ ಆಗಿದ್ದು, ಕೆಲವು ಚಂದಾದಾರರಿಗೆ ಈ ಯೋಜನೆಯಲ್ಲಿ 1.5GB ಡೇಟಾ ಪ್ರಯೋಜನದ ಆಯ್ಕೆ ಇದೆ.
ಪ್ರಯೋಜನಗಳಲ್ಲಿ ಭಿನ್ನತೆ
ಜಿಯೋ ಹಾಗೂ ಏರ್ಟೆಲ್ ಟೆಲಿಕಾಂಗಳ ಬಹುತೇಕ ಯೋಜನೆಗಳಲ್ಲಿ ಸಾಮ್ಯತೆ ಕಂಡು ಬಂದರೂ, ಕೆಲವು ಭಿನ್ನ ಪ್ರಯೋಜನಗಳು ಕಾಣಿಸುತ್ತವೆ. ಸದ್ಯ 199ರೂ. ಅಗ್ಗದ ಬೆಲೆಯ ರೀಚಾರ್ಜ್ ಯೋಜನೆಯಲ್ಲಿ ಎರಡು ಟೆಲಿಕಾಂಗಳು ಡೈಲಿ ಡೇಟಾ ಪ್ರಯೋಜನ ಹೊಂದಿವೆ. ಎಸ್ಎಮ್ಎಸ್ ಸೌಲಭ್ಯ ನೀಡಿವೆ. ಆದರೆ ವ್ಯಾಲಿಡಿಟಿ ಹಾಗೂ ದಿನದ ಡೇಟಾ ಮಿತಿಯಲ್ಲಿ ಪ್ರಯೋಜನಗಳಲ್ಲಿ ಭಿನ್ನತೆ ಕಾಣಬಹುದಾಗಿದೆ.

ರೀಚಾರ್ಜ್ ಮಾಡಿಸಲು ಯಾವುದು ಸೂಕ್ತ?
199ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಜಿಯೋ ಹಾಗೂ ಏರ್ಟೆಲ್ ಟೆಲಿಕಾಂಗಳು ಆಕರ್ಷಕ ಪ್ರಯೋಜನ ನೀಡಿವೆ. ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಜಿಯೋ ಉತ್ತಮ ಅನಿಸಲಿದೆ. ಏಕೆಂದರೇ ಜಿಯೋ 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಏರ್ಟೆಲ್ 24 ದಿನಗಳ ವ್ಯಾಲಿಡಿಟಿ ಪಡೆದಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190