ಏರ್‌ಟೆಲ್ ಮತ್ತು ಜಿಯೋದ ಈ ಜನಪ್ರಿಯ ಪ್ಲ್ಯಾನಿನಲ್ಲಿ ನಿಮ್ಮ ಆಯ್ಕೆ ಯಾವುದು?
ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 719 ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಕಂಪನಿಗಳು 719 ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಕಂಪನಿಗಳ 719 ರೂ. ಯೋಜನೆಗಳು ಕೆಲವೊಂದು ಭಿನ್ನತೆಗಳನ್ನು ಒಳಗೊಂಡಿವೆ. ಹಾಗಾದರೇ ಈ ಎರಡು ಟೆಲಿಕಾಂಗಳ 719 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಯಾವುದು ಉತ್ತಮ? ಈ ಪ್ಲ್ಯಾನ್‌ಗಳ ಒಟ್ಟಾರೇ ಪ್ರಯೋಜನಗಳೆನು ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್ 719ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್ ಸೌಲಭ್ಯ ದೊರೆಯುತ್ತದೆ.

ರೀಚಾರ್ಜ್‌ಗೆ ಯಾವುದು ಬೆಸ್ಟ್?
ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಈ ಎರಡು ಕಂಪನಿಗಳು 719 ರೂ ಪ್ರೀಪೇಯ್ಡ್ ಪ್ಲ್ಯಾನ್ ನಲ್ಲಿ ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಎರಡು ಟೆಲಿಕಾಂಗಳು ಬಹುತೇಕ ಸಾಮ್ಯತೆಯ ಪ್ರಯೋಜನ ಹೊಂದಿದ್ದರೂ, ಭಿನ್ನತೆ ಇದೆ. ಎರಡು ಪ್ಲ್ಯಾನ್ ಗಳು 84 ದಿನಗಳ ವ್ಯಾಲಿಡಿಟಿ ಒದಗಿಸಿವೆ. ಆದರೆ ಡೇಟಾ ವಿಭಾಗಕ್ಕೆ ಬಂದಾಗ ಜಿಯೋ ಉತ್ತಮ ಅನಿಸಲಿದೆ. ಇದು ಪ್ರತಿದಿನ 2 GB ಡೇಟಾ ನೀಡುತ್ತದೆ. ಏರ್‌ಟೆಲ್ ಟೆಲಿಕಾಂನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ. ಒಂದು ವೇಳೆ ಹೆಚ್ಚಿನ ಡೇಟಾ ಅಗತ್ಯ ಇಲ್ಲದ್ದಿದ್ದರೆ, ಏರ್‌ಟೆಲ್ ಉತ್ತಮ ಆಯ್ಕೆ ಎನಿಸಲಿದೆ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಜಿಯೋ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಏರ್‌ಟೆಲ್ ಟೆಲಿಕಾಂನ 666 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನ ಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








