ಜಿಯೋ, ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ ಒಂದು ವರ್ಷ ಪ್ರತಿದಿನ 2GB ಡೇಟಾ!
ಪ್ರಸ್ತುತ ಟೆಲಿಕಾಂ ಸಂಸ್ಥೆಗಳು ಅಧಿಕ ಡೇಟಾ ಸೌಲಭ್ಯದ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಪ್ರತಿದಿನ 1.5GB ಮತ್ತು 2GB ಡೇಟಾ ಆಫರ್ ಸಾಮಾನ್ಯವಾಗಿದೆ. ಆ ಪೈಕಿ ರಿಲಾಯನ್ಸ್ ಜಿಯೋ ಹಾಗೂ ಏರ್‌ಟೆಲ್ ಸಂಸ್ಥೆಗಳು ಮೂಂಚುಣಿಯಲ್ಲಿ ಕಾಣಿಸಿಕೊಂಡಿವೆ. ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಘೋಷಿಸಿವೆ. ಆದರೆ ಅಧಿಕ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್ ಹೆಚ್ಚು.

ಹೌದು, ಜಿಯೋ, ಏರ್‌ಟೆಲ್ ಟೆಲಿಕಾಂಗಳ ಬಹುತೇಕ ಯೋಜನೆಗಳು ಹೆಚ್ಚಿನ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯ ಹೊಂದಿವೆ. ಆದರೆ ಅವುಗಳಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡ ವಾರ್ಷಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಕ ಅನಿಸಿವೆ. ಈ ವಾರ್ಷಿಕ ವ್ಯಾಲಿಡಿಟಿ ಯೋಜನೆಗಳು ಡೇಟಾ, ವ್ಯಾಲಿಡಿಟಿ ಸೌಲಭ್ಯಗಳ ಜೊತೆಗೆ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೇರಿದಂತೆ ಹೆಚ್ಚುವರಿ ಪ್ರಯೋಜನ ಪಡೆದಿವೆ. ಹಾಗಾದರೇ 2GB ಡೇಟಾ ಸೌಲಭ್ಯದ ಜಿಯೋ ಮತ್ತು ಏರ್‌ಟೆಲ್ ವಾರ್ಷಿಕ ಪ್ಲ್ಯಾನ್‌ಗಳ ಪ್ರಯೋಜನಗಳೆನು ಹಾಗೂ ಯಾವುದು ಯೋಗ್ಯ ಎಂಬುದನ್ನು ಮುಂದೆ ತಿಳಿಯೋಣ.

ಜಿಯೋ 2599ರೂ. ಪ್ಲಾನ್
ಜಿಯೋ ಹೊಸ 2599ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಟು ಜಿಯೋ ಅನಿಯಮಿತ ವಾಯಿಸ್ ಕರೆಗಳು ಸೇರಿದಂತೆ ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಇತರೆ ಟೆಲಿಕಾಂ ಕರೆಗಳಿಗೆ 12000 ನಿಮಿಷಗಳ ಉಚಿತ ವಾಯಿಸ್ ಕರೆ ಸೌಲಭ್ಯ ಪಡೆದಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಹಾಟ್‌ಸ್ಟಾರ್ ಡಿಸ್ನಿ ಪ್ಲಸ್ ಚಂದಾದಾರಿಕೆ ಲಭ್ಯ.

ಜಿಯೋ 2399ರೂ. ಪ್ಲ್ಯಾನ್
ಜಿಯೋ ಹೊಸ 2,399ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಟು ಜಿಯೋ ಅನಿಯಮಿತ ವಾಯಿಸ್ ಕರೆಗಳು ಸೇರಿದಂತೆ ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಇತರೆ ಟೆಲಿಕಾಂ ಕರೆಗಳಿಗೆ 12000 ನಿಮಿಷಗಳ ಉಚಿತ ವಾಯಿಸ್ ಕರೆ ಸೌಲಭ್ಯ ಪಡೆದಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್ 2498ರೂ. ಪ್ಲ್ಯಾನ್
ಏರ್‌ಟೆಲ್‌ನ ಹೊಸ 2498ರೂ. ಪ್ರೀಪೇಡ್ ಪ್ಲ್ಯಾನ್ ವಾರ್ಷಿಕ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ.


Click it and Unblock the Notifications








