Home
ಸುದ್ದಿಜಾಲ

ಜಿಯೋ ಮತ್ತು ವಿ ಟೆಲಿಕಾಂ 601ರೂ. ಪ್ಲ್ಯಾನ್: ಯಾವುದನ್ನು ರೀಚಾರ್ಜ್‌ ಮಾಡ್ತಿರಾ?

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ರಿಲಯನ್ಸ್‌ ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಅತ್ಯುತ್ತಮ ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸುತ್ತಾ ಮುಂದೆ ಸಾಗಿವೆ. ಆ ಪೈಕಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 601 ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಎಸ್‌ಎಮ್‌ಎಸ್‌

ಹೌದು, ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು 666ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ಏರ್‌ಟೆಲ್ 601 ರೂ. ಪ್ರಿಪೇಯ್ಡ್‌ ಪ್ಲ್ಯಾನಿನಲ್ಲಿ ಯಾವುದು ಉತ್ತಮ? ಈ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವೊಡಾಫೋನ್ ಐಡಿಯಾ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16GB ಡೇಟಾ ಸೌಲಬ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

ಜಿಯೋ 601 ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 601 ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 601 ರೂ. ಪ್ರಿಪೇಯ್ಡ್‌ ಪ್ಲಾನ್‌ ನಲ್ಲಿ ನಿಮಗೆ ಒಂದು ವರ್ಷದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯನ್ನು ನೀಡಲಿದೆ. ಈ ಪ್ಲಾನ್‌ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡಲಿದೆ. ಈ ಸಮಯದಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನವನ್ನು ಪಡೆಯಬಹುದು. ಹೆಚ್ಚುವರಿಯಾಗಿ 6GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೆ ಅನಿಯಮಿತ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಈ ಎರಡು ಯೋಜನೆಗಳಲ್ಲಿ ರೀಚಾರ್ಜ್‌ಗೆ ಯಾವುದು ಉತ್ತಮ?

ಈ ಎರಡು ಯೋಜನೆಗಳಲ್ಲಿ ರೀಚಾರ್ಜ್‌ಗೆ ಯಾವುದು ಉತ್ತಮ?

ಜಿಯೋ ಮತ್ತು ವಿ ಟೆಲಿಕಾಂ ಈ ಎರಡು ಕಂಪನಿಗಳು 601 ರೂ, ಪ್ರೀಪೇಯ್ಡ್‌ ಪ್ಲ್ಯಾನ್ ನಲ್ಲಿ ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಈ ಎರಡು ಟೆಲಿಕಾಂಗಳು ಬಹುತೇಕ ಸಾಮ್ಯತೆಯ ಪ್ರಯೋಜನ ಹೊಂದಿದ್ದರೂ, ಭಿನ್ನತೆ ಒಳಗೊಂಡಿವೆ. ಎರಡು ಪ್ಲ್ಯಾನ್‌ ಗಳ ಹೆಚ್ಚುವರಿ ಡೇಟಾ ಸೌಲಭ್ಯದಲ್ಲಿ ಭಿನ್ನತೆ ಕಾಣಬಹುದು. ವಿ ಟೆಲಿಕಾಂ ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿಯಲ್ಲಿ ಪ್ರತಿದಿನ 3GB ಡೇಟಾ ನೀಡುತ್ತದೆ. ಹೆಚ್ಚುವರಿಯಾಗಿ 16GB ಡೇಟಾ ನೀಡುತ್ತದೆ. ಅದೇ ರೀತಿ ಜಿಯೋ ಟೆಲಿಕಾಂ ಸಹ ಪ್ರತಿದಿನ 3GB ಡೇಟಾ ಸೌಲಭ್ಯ ಹೊಂದಿದೆ. ಹಾಗೂ ಹೆಚ್ಚುವರಿಯಾಗಿ ಹೆಚ್ಚುವರಿಯಾಗಿ 6GB ಡೇಟಾ ಪ್ರಯೋಜನ ಪಡೆದಿದೆ.

ಜಿಯೋ

ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ವಿ ಟೆಲಿಕಾಂನ ಯೋಜನೆಯು ಹೆಚ್ಚು ಆಕರ್ಷಕ ಎನಿಸುತ್ತದೆ. ಏಕೆಂದರೇ ಜಿಯೋ ಯೋಜನೆಗಿಂತ ವಿ ಟೆಲಿಕಾಂ 10 GB ಹೆಚ್ಚಿನ ಡೇಟಾ ನೀಡುತ್ತದೆ. ಇನ್ನು ಈ ಎರಡು ಯೋಜನೆಗಳು ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ಪಡೆದಿವೆ. ಹಾಗೆಯೇ ಜಿಯೋ ಮತ್ತು ವಿ ಟೆಲಿಕಾಂ ಹೆಚ್ಚುವರಿಯಾಗಿ ಕೆಲವು ಆಪ್‌ಗಳ ಸೌಲಭ್ಯ ನೀಡಿವೆ. ಒಟ್ಟಾರೆ ನೋಡುವುದಾದರೆ, ಜಿಯೋ ಟೆಲಿಕಾಂನ 601 ರೂ, ಪ್ರೀಪೇಯ್ಡ್‌ ಪ್ಲ್ಯಾನ್ ಉತ್ತಮ ಆಯ್ಕೆ ಎನಿಸುತ್ತವೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

English summary
Jio and Vi Telecom Rs. 601 Plan: Which One Should You Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+