Home
ಸುದ್ದಿಜಾಲ

ಜಿಯೋ ಗ್ರಾಹಕರಿಗೆ ಸಿಹಿಸುದ್ದಿ: ಹೊಸ ಏರ್‌ಫೈಬರ್‌ ಕನೆಕ್ಷನ್‌ಗೆ ಈ ಕೊಡುಗೆ ಲಭ್ಯ!

ಜನಪ್ರಿಯ ಜಿಯೋ ಸಂಸ್ಥೆಯು ತನ್ನ ಗ್ರಾಹಕರಿಗೆ ಇದೀಗ ಗುಡ್‌ನ್ಯೂಸ್‌ ನೀಡಿದೆ. ಜಿಯೋ ಏರ್ ಫೈಬರ್ ಹೊಸ ಗ್ರಾಹಕರಿಗೆ 'ಫ್ರೀಡಂ ಆಫರ್' (freedom offer) ಶೇಕಡಾ 30 ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದಹಾಗೆ ಜಿಯೋಫೈಬರ್ (Jio Fiber) ಅಥವಾ ಏರ್ ಫೈಬರ್ (Airfiber) ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ.

1.2 ಕೋಟಿ ಮನೆಗಳೊಂದಿಗೆ ಜಿಯೋಫೈಬರ್ ಅಥವಾ ಏರ್ ಫೈಬರ್ (Airfiber) ಎಂಬುದು ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತೀಯರ ಮನೆಗಳನ್ನು ಇನ್ನಷ್ಟು ವೇಗವಾಗಿ ಡಿಜಿಟೈಸ್ ಮಾಡುವ ಉದ್ದೇಶದಿಂದ ಮತ್ತು ಭಾರತವನ್ನು ಡಿಜಿಟಲ್ ಸಮುದಾಯವಾಗಿ ಮಾರ್ಪಡಿಸುವ ಉದ್ದೇಶದಿಂದ ಜಿಯೋದಿಂದ ಈ ಭರವಸೆಯ ಕೊಡುಗೆಯನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಕನೆಕ್ಷನ್‌ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ.

ಜಿಯೋ ಗ್ರಾಹಕರಿಗೆ ಸಿಹಿಸುದ್ದಿ: ಹೊಸ ಏರ್‌ಫೈಬರ್‌ ಕನೆಕ್ಷನ್‌ಗೆ ಈ ಕೊಡುಗೆ ಲಭ್ಯ!

ಈಗಾಗಲೇ ಕೈಗೆಟುಕುವ ಬೆಲೆಯಲ್ಲಿ ಇರುವ ಜಿಯೋ ಏರ್ ಫೈಬರ್ ಪ್ಲಾನ್ ಗಳ ಜೊತೆಗೆ ಶೇಕಡಾ 30 ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಫ್ರೀಡಂ ಆಫರ್ ಜೊತೆಗೆ ಹೊಸ ಜಿಯೋಏರ್ ಫೈಬರ್ ಬಳಕೆದಾರರು ಶೇ 30ರಷ್ಟು ರಿಯಾಯಿತಿಯನ್ನು ಹೊಸ ಕನೆಕ್ಷನ್‌ ಅನ್ನು 1000 ರೂ.ಗಳ ಇನ್‌ಸ್ಟಾಲೇಶನ್ ಶುಲ್ಕ ಮನ್ನಾದ ಮೂಲಕ ಪಡೆಯುತ್ತಾರೆ. ಇದು ಸೀಮಿತ ಅವಧಿಯ ಕೊಡುಗೆ ಆಗಿದ್ದು, ಇದೇ ಜುಲೈ 26 ರಿಂದ ಆಗಸ್ಟ್ 15 ನೇ ತಾರೀಕಿನ ಮಧ್ಯೆ ಲಭ್ಯ ಇರುತ್ತದೆ.

ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ?

ಅದು ಬಹಳ ಸರಳ. Jio.com ವೆಬ್ ಸೈಟ್ ಗೆ ಭೇಟಿ ನೀಡಿ ಮತ್ತು ನಿಮಗಿರುವ ಆಸಕ್ತಿಯನ್ನು ತಿಳಿಸಿ ಅಥವಾ 60008-60008 ಈ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಜಿಯೋದಿಂದ ಸ್ಥಿರ ನಿಸ್ತಂತು (ವೈರ್ ಲೆಸ್) ಕೊಡುಗೆ ಏರ್ ಫೈಬರ್ ಅನ್ನು ಕಳೆದ ವರ್ಷ ಗಣೇಶ ಚತುರ್ಥಿಗೆ ಪರಿಚಯಿಸಲಾಯಿತು.

ಜಿಯೋದಿಂದ 5ಜಿ ಸ್ಟ್ಯಾಂಡ್ ಅಲೋನ್ ಸಂಪರ್ಕ ಸೇವೆಗಳನ್ನು ನಿಯೋಜಿಸಲಾಗಿದೆ. 5ಜಿ ಸ್ಥಿರ ನಿಸ್ತಂತು ಸಂಪರ್ಕವನ್ನು ಒದಗಿಸುವುದಕ್ಕೆ ಮೀಸಲಿಟ್ಟ ನೆಟ್ ವರ್ಕ್ ಬಳಕೆ ಮಾಡುತ್ತಿದೆ. ನೆಟ್ ವರ್ಕ್ ಇಕ್ಕಟ್ಟಾಗುವುದನ್ನು ನಿರ್ವಹಿಸುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಆದರೂ ಏರ್ ಫೈಬರ್ ನ ಸರಾಸರಿ ಬಳಕೆದಾರರು ಒಂದು ತಿಂಗಳಿಗೆ 400 ಜಿಬಿ ಡೇಟಾ ಬಳಸುತ್ತಾರೆ.

ಏನಿದು ಜಿಯೋಏರ್ ಫೈಬರ್?

ಯಾವುದೇ ತಂತಿ ಸಂಪರ್ಕ ಇಲ್ಲದೆ ಫೈಬರ್ ರೀತಿ ವೇಗವನ್ನು ಗಾಳಿಯ ಮೂಲಕವೇ ಒದಗಿಸುತ್ತದೆ ಏರ್ ಫೈಬರ್ (Airfiber). ಬಳಕೆದಾರರು ಪ್ಲಗ್ ಹಾಕಿ, ಆನ್ ಮಾಡಿದರೆ ಆಯಿತು. ಇಷ್ಟು ಮಾಡಿದಲ್ಲಿ ತಮ್ಮ ಮನೆಯಲ್ಲಿ ವೈಯಕ್ತಿಕವಾ ಹಾಟ್ ಸ್ಪಾಟ್ ಅನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಂತಾಗುತ್ತದೆ.

ಜಿಯೋಫೈಬರ್ ಸ್ಥಿರ ನಿಸ್ತಂತು ಸಂಪರ್ಕ ಪರಿಹಾರವಾಗಿದ್ದು, ಇದರಿಂದ ಯಾವುದೇ ಅಡೆತಡೆಯಿಲ್ಲದೆ 1 ಜಿಬಿಪಿಎಸ್ ತನಕದ ಹೈ- ಸ್ಪೀಡ್ ಸಂಪರ್ಕ ಮನೆ ಮತ್ತು ಕಚೇರಿಗಳಿಗೆ ದೊರೆಯುತ್ತದೆ. ಏಕಕಾಲಕ್ಕೆ ಹಲವು ಡಿವೈಸ್‌ಗಳನ್ನು ಬಳಸಬಹುದು. ಸ್ಮಾರ್ಟ್ ಫೋನ್, ಪರ್ಸನಲ್ ಕಂಪ್ಯೂಟರ್ ಗಳು, ಟ್ಯಾಬ್ಲೆಟ್, ಸ್ಮಾರ್ಟ್ ಟೀವಿಗಳು, ಮತ್ತು ಇದರ ಜತೆಗೆ ಸೆಟ್ ಟಾಪ್ ಬಾಕ್ಸ್ ಗಳನ್ನು ಸಹ ಏಕಕಾಲಕ್ಕೆ ಕನೆಕ್ಷನ್‌ ಕೊಡಬಹುದು, ಅದು ಕೂಡ ಇಂಟರ್ ನೆಟ್ ವೇಗದಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದಂತೆ ಸಾಧ್ಯವಾಗುತ್ತದೆ.

Best Mobiles in India

English summary
Jio announces 30% discount 'freedom offer' for new Airfiber Connections. check other benefits and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+