Home
ಸುದ್ದಿಜಾಲ

ರಾಯಚೂರು ಸೇರಿ ದೇಶದ 20 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಶುರು!

ರಿಲಯನ್ಸ್ ಜಿಯೋ ಫೆಬ್ರವರಿ 21 ರಂದು ಟ್ರೂ 5G ಸೇವೆಗಳನ್ನು ಕರ್ನಾಟಕದ ರಾಯಚೂರಿನಲ್ಲಿ ಆರಂಭಿಸಿತು. ಇದರ ಜತೆಗೆ ಬೊಂಗೈಗಾಂವ್, ಉತ್ತರ ಲಖಿಂಪುರ, ಶಿವಸಾಗರ್, ತಿನ್ಸುಕಿಯಾ (ಅಸ್ಸಾಂ), ಭಾಗಲ್ಪುರ್, ಕತಿಹಾರ್ (ಬಿಹಾರ), ಮರ್ಮಗೋವಾ (ಗೋವಾ) ಸೇರಿದಂತೆ 20 ನಗರಗಳಲ್ಲಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಿತು.

ರಾಯಚೂರು ಸೇರಿ ದೇಶದ 20 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಶುರು!

ಡಿಯು (ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು), ಗಾಂಧಿಧಾಮ್ (ಗುಜರಾತ್), ಬೊಕಾರೊ ಸ್ಟೀಲ್ ಸಿಟಿ, ದಿಯೋಘರ್, ಹಜಾರಿಬಾಗ್ (ಜಾರ್ಖಂಡ್), ಸತ್ನಾ (ಮಧ್ಯಪ್ರದೇಶ), ಚಂದ್ರಾಪುರ್, ಇಚಲಕರಂಜಿ (ಮಹಾರಾಷ್ಟ್ರ), ತೌಬಲ್ (ಮಣಿಪುರ), ಫೈಜಾಬಾದ್, ಫಿರೋಜಾಬಾದ್ , ಮುಜಾಫರ್‌ನಗರ (ಉತ್ತರ ಪ್ರದೇಶ) ಸೇರಿ ಇದೀಗ ಜಿಯೋ ಟ್ರೂ 5G ಅನ್ನು ಪಡೆಯುತ್ತಿರುವ ನಗರಗಳ ಒಟ್ಟು ಸಂಖ್ಯೆಯನ್ನು 277ಕ್ಕೆ ಒಯ್ದಿದೆ.

ರಾಯಚೂರು ಸೇರಿ ದೇಶದ 20 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಶುರು!

ರಿಲಯನ್ಸ್ ಜಿಯೋ ಬಹುತೇಕ ರಾಯಚೂರಿನಲ್ಲಿ (ಕರ್ನಾಟಕ) 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಟೆಲಿಕಾಂ ಆಪರೇಟರ್ ಆಗಿದೆ. ಇಂದಿನಿಂದ ಪ್ರಾರಂಭವಾಗುವ ಸೇವೆಯನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನುವೆಲ್ಕಮ್ ಕೊಡುಗೆಗೆ ಆಹ್ವಾನಿಸಲಾಗುತ್ತದೆ.

ರಾಯಚೂರು ಸೇರಿ ದೇಶದ 20 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಶುರು!

ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು, 'ರಾಯಚೂರು ಮತ್ತು 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ 19 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಲು ನಾವು ಹೆಮ್ಮೆಪಡುತ್ತೇವೆ. ಇದರೊಂದಿಗೆ 277 ನಗರಗಳಾದ್ಯಂತ ಜಿಯೋ ಬಳಕೆದಾರರು ಹೊಸ ವರ್ಷ 2023ರಲ್ಲಿ ಜಿಯೋ ಟ್ರೂ 5ಜಿ ರೂಪಾಂತರದ ಪ್ರಯೋಜನಗಳನ್ನು ಆನಂದಿಸಬಹುದು.

'ಹೊಸದಾಗಿ ಪ್ರಾರಂಭಿಸಲಾದ ಈ ಟ್ರೂ 5ಜಿ ನಗರಗಳು ಪ್ರಮುಖ ಪ್ರವಾಸೋದ್ಯಮ ಮತ್ತು ವಾಣಿಜ್ಯ ತಾಣಗಳು ಹಾಗೂ ನಮ್ಮ ದೇಶದ ಪ್ರಮುಖ ಶಿಕ್ಷಣ ಕೇಂದ್ರಗಳಾಗಿವೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರೆ ಮಾತ್ರವಲ್ಲ. ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತಾರೆ.

'ಅಸ್ಸಾಂ, ಬಿಹಾರ, ಗೋವಾ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಹಾಗೂ ಡಿಯು, ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ ಮತ್ತು ಉತ್ತರ ಪ್ರದೇಶದ ರಾಜ್ಯ ಸರ್ಕಾರಗಳು ಮತ್ತು ಆಡಳಿತಾಧಿಕಾರಿಗಳು ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡಿದ್ದಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ,' ಎಂದಿದ್ದಾರೆ.

ರಾಯಚೂರು ಸೇರಿ ದೇಶದ 20 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಶುರು!

ಜಿಯೋ 5G ಡೇಟಾ ಪ್ಲ್ಯಾನ್‌ಗಳ ಮಾಹಿತಿ

ಜಿಯೋ 5G ಸೇವೆ ಲಭ್ಯವಿರುವ ಪ್ರದೇಶದ ಗ್ರಾಹಕರು ಜಿಯೋ 239 ರೂ. ಪ್ರಿಪೇಯ್ಡ್ ಯೋಜನೆ ಅಥವಾ ಅದಕ್ಕಿಂತ ಅಧಿಕ ಮೊತ್ತದ ಪ್ಲ್ಯಾನ್‌ ರೀಚಾರ್ಜ್ ಮಾಡಿರುವ ಗ್ರಾಹಕರು ಹೆಚ್ಚುವರಿ ಪ್ಯಾಕ್ ಖರೀದಿಸುವ ಅಗತ್ಯವಿಲ್ಲ. ಆದರೆ ಕಡಿಮೆ ಬೆಲೆಯ ಪ್ಲ್ಯಾನ್‌ಗಳನ್ನು ರೀಚಾರ್ಜ್‌ ಮಾಡಿರುವ ಗ್ರಾಹಕರಿಗೆ 5G ಅನ್ನು ಅನುಭವಿಸಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಜಿಯೋ ಹೊಸ 5G ಅಪ್‌ಗ್ರೇಡ್‌ ಪ್ರಿಪೇಯ್ಡ್ ಯೋಜನೆಯನ್ನು ಈಗ ಅವರಿಗೆ ಲಭ್ಯ ಮಾಡಿದೆ. ಅದುವೇ ಜಿಯೋ 61ರೂ. ಪ್ಲ್ಯಾನ್ ಆಗಿದ್ದು, ಇದು 6GB ಡೇಟಾ ಪ್ರಯೋಜನ ಪಡೆದಿದೆ.

ಗ್ರಾಹಕರು ತಮ್ಮ ಚಾಲ್ತಿ ಇರುವ ಪ್ರಿಪೇಯ್ಡ್ ಯೋಜನೆ ಅವಧಿ ಮುಗಿಯುವವರೆಗೆ 61ರೂ. ಪ್ಲ್ಯಾನ್‌ ಸಕ್ರಿಯವಾಗಿರುತ್ತದೆ. ಜಿಯೋ 119ರೂ, ಜಿಯೋ 149ರೂ, ಜಿಯೋ 179ರೂ, ಜಿಯೋ 199ರೂ ಅಥವಾ ಜಿಯೋ 209ರೂ. ಬೆಲೆಯ ಪ್ರಿಪೇಯ್ಡ್ ಪ್ಲ್ಯಾನ್‌ ರೀಚಾರ್ಜ್ ಮಾಡಿರುವ ಗ್ರಾಹಕರಿಗೆ ಈ 5G ಅಪ್‌ಗ್ರೇಡ್‌ ಡೇಟಾ ಪ್ಲಾನ್ ಕಾರ್ಯನಿರ್ವಹಿಸುತ್ತದೆ. ಆದರೆ, ಗ್ರಾಹಕರು ಜಿಯೋ 5G ವೆಲ್ಕಮ್ ಆಫರ್ ಅನ್ನು ಸ್ವೀಕರಿಸದಿದ್ದರೆ, ಈ ಪ್ಲ್ಯಾನ್ ಉಪಯುಕ್ತವಾಗದು.

Best Mobiles in India

English summary
Jio announces True 5G roll-Out in Raichur and 19 more cities; Know more details in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+