ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ನಲ್ಲಿ 1GB ಡೇಟಾಗೆ ತಗಲುವ ಶುಲ್ಕ ಎಷ್ಟು ಗೊತ್ತೆ?
ಭಾರತದ ದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ ಭಿನ್ನ ಶ್ರೇಣಿಯಲ್ಲಿ ಹಲವು ಯೋಜನೆಗಳನ್ನು ಪರಿಚಯಸಿದೆ. ಅವುಗಳಲ್ಲಿ ಪ್ರೀಪೇಯ್ಡ್ ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಬಹುತೇಕ ಯೋಜನೆಗಳು ಅಧಿಕ ಡೇಟಾ ಸೌಲಭ್ಯವನ್ನು ಪಡೆದಿರುವ ಜೊತೆಗೆ ಅನಿಯಮಿತ ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿದೆ. ಆದರ ಜಿಯೋದ ಇತ್ತೀಚಿನ ಪ್ಲ್ಯಾನ್‌ವೊಂದು ಸ್ವಲ್ಪ ಭಿನ್ನವಾಗಿದೆ.

ಹೌದು, ಜಿಯೋ ಟೆಲಿಕಾಂ 597ರೂ. ಪ್ರೀಪೇಯ್ಡ್ ಯೋಜನೆಯು ದೀರ್ಘಾವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಯಾವುದೇ ದೈನಂದಿನ ಡೇಟಾ ಮಿತಿಯನ್ನು ಹೊಂದಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯವನ್ನು ಪಡೆದಿದೆ. ಒಟ್ಟು 75GB ಡೇಟಾ ಪ್ರಯೋಜನವನ್ನು ಪಡೆದಿದ್ದು, 8ರೂ. ಗಳಿಗೆ ಒಂದು 1GB ವೆಚ್ಚ ತಗಲುತ್ತದೆ. ಅಧಿಕೃತ ಕಂಪನಿಯ ವೆಬ್‌ಸೈಟ್‌ನಿಂದ ಹಾಗೂ ಇತರೆ ರೀಚಾರ್ಜ್ ಆಪ್‌ಗಳ ಮೂಲಕ ರೀಚಾರ್ಜ್ ಮಾಡಿಸಬಹುದು. ಹಾಗಾದರೇ ಜಿಯೋದ 597ರೂ. ಯೋಜನೆಯ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಸೌಲಭ್ಯಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 597ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ 597ರೂ. ಪ್ರೀಪೇಯ್ಡ್ ಪ್ಲಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ ಒಟ್ಟು 75GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಡೇಟಾ ಬಳಕೆಗೆ ಯಾವುದೇ ದೈನಂದಿನ ಮಿತಿ ಇಲ್ಲ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 555ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಲ್-ಇನ್-ಒನ್ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.


Click it and Unblock the Notifications








