Home
ಸುದ್ದಿಜಾಲ

ಜಿಯೋ ಟೆಲಿಕಾಂನಿಂದ ಗ್ರಾಹಕರಿಗೆ ಶಾಕ್!..ಈ ಅಗ್ಗದ ಪ್ಲ್ಯಾನ್ ಸ್ಥಗಿತ!

ಜನಪ್ರಿಯ ರಿಲಯನ್ಸ ಜಿಯೋ ಟೆಲಿಕಾಂ ಭಿನ್ನ ಪ್ರೈಸ್‌ನಲ್ಲಿ ಹಲವು ಪ್ರಿಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಜಿಯೋ ಇತ್ತೀಚಿಗೆ ಸದ್ದಿಲ್ಲದೆ ಪರಿಚಯಿಸಿದ್ದ 1 ರೂ. ಬೆಲೆಯ ಪ್ರಿಪೇಯ್ಡ್‌ ಯೋಜನೆ ಭಾರೀ ಗಮನ ಸೆಳೆದಿತ್ತು. ಆದ್ರೆ ಇದೀಗ ಜಿಯೋ 1ರೂ. ಬೆಲೆಯ ಪ್ರಿಪೇಯ್ಡ್‌ ಯೋಜನೆಯನ್ನು ಸ್ಥಗಿತಗೊಳಿಸಿದ್ದು, ಕಂಪನಿಯ ಮೈ ಜಿಯೋ ಆಪ್‌ನಲ್ಲಿ ಲಭ್ಯ ಇಲ್ಲ.

ಪ್ರಿಪೇಯ್ಡ್‌

ಜಿಯೋ ಟೆಲಿಕಾಂ ಆರಂಭದಲ್ಲಿ 1ರೂ. ಬೆಲೆಯ ಪ್ರಿಪೇಯ್ಡ್‌ ಯೋಜನೆ 100MB ಡೇಟಾ ಪ್ರಯೋಜನ ಹಾಗೂ 30 ದಿನಗಳ ವ್ಯಾಲಿಡಿಟಿ ತಿಳಿಸಿತ್ತು. ಬಳಿಕ ಯೋಜನೆಯಲ್ಲಿ ಬದಲಾವಣೆ ಮಾಡಿ 100MB ಡೇಟಾವನ್ನು 10MB ಗೆ ಇಳಿಸಿತು, ಹಾಗೆಯೇ 30 ದಿನಗಳ ವ್ಯಾಲಿಡಿಟಿಯನ್ನು (1) ಒಂದು ದಿನಕ್ಕೆ ಬದಲಾಯಿಸಿತು. ಇದೀಗ 1ರೂ. ಬೆಲೆಯ ಪ್ರಿಪೇಯ್ಡ್‌ ಯೋಜನೆ ನಿಲ್ಲಿಸಿದೆ. ಹಾಗಾದರೇ ಜಿಯೋ ಟೆಲಿಕಾಂನ ಇತರೆ ಆಕರ್ಷಕ ಪ್ರಿಪೇಯ್ಡ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 119ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 119ರೂ. ಪ್ರಿಪೇಯ್ಡ್‌ ಪ್ಲ್ಯಾನ್‌ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್‌ಎಮ್‌ಎಸ್‌ಗಳು ದೊರೆಯುತ್ತವೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 21 GB ಡೇಟಾ ಪ್ರಯೋಜನ ಸಿಗಲಿದೆ.

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್‌ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್‌ ಸೇವೆ ಲಭ್ಯ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಪ್ರಿಪೇಯ್ಡ್ ್ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio Discontinues its Cheapest Re 1 Data Plan in India: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+