Home
ಸುದ್ದಿಜಾಲ

ಜಿಯೋದಿಂದ ದೀಪಾವಳಿಗೆ ಭರ್ಜರಿ ಗಿಫ್ಟ್‌!..ಗ್ರಾಹಕರು ಫುಲ್‌ ಖುಷ್!

ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಸೌಲಭ್ಯದ ಯೋಜನೆ ಆಯ್ಕೆ ಹೊಂದಿದೆ. ಅವುಗಳಲ್ಲಿ ಬಹುತೇಕ ಜಿಯೋ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಕೂಡಾ ಪಡೆದಿವೆ. ಆದರೆ ದೀರ್ಘ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಒಳಗೊಂಡ ಪ್ಲ್ಯಾನ್‌ಗಳಲ್ಲಿ ಜಿಯೋ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಗಮನ ಸೆಳೆದಿದೆ.

ಹೌದು, ಜಿಯೋದ 2999ರೂ. ಪ್ರೀಪೇಯ್ಡ್‌ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಇನ್ನು ಈ ರೀಚಾರ್ಜ್ ಪ್ಲ್ಯಾನ್‌ ದೈನಂದಿನ ಡೇಟಾ ಜೊತೆಗೆ ಅನಿಯಮಿತ ಧ್ವನಿ ಕರೆಯ ಪ್ರಯೋಜನ ಹೊಂದಿದ್ದು, ಇದೀಗ ದೀಪಾವಳಿ ಪ್ರಯುಕ್ತ ಹೆಚ್ಚುವರಿಯಾಗಿ 23 ದಿನಗಳ ವ್ಯಾಲಿಡಿಟಿ ಪಡೆದಿದೆ. ಅಲ್ಲದೇ ಜಿಯೋ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿದೆ. ಜಿಯೋದ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಉತ್ತಮವೇ? ಇದರ ಒಟ್ಟಾರೇ ಪ್ರಯೋಜನ ಏನು? ಮುಂದೆ ತಿಳಿಯೋಣ ಬನ್ನಿರಿ.

ಜಿಯೋದಿಂದ ದೀಪಾವಳಿಗೆ ಭರ್ಜರಿ ಗಿಫ್ಟ್‌!..ಗ್ರಾಹಕರು ಫುಲ್‌ ಖುಷ್!

ಜಿಯೋ 2999ರೂ. ಯೋಜನೆ ಮಾಹಿತಿ

ರಿಯಲನ್ಸ್‌ ಜಿಯೋದ 2999ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್‌ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ದೀಪಾವಳಿ ಪ್ರಯುಕ್ತ ಹೆಚ್ಚುವರಿಯಾಗಿ 23 ದಿನಗಳ ವ್ಯಾಲಿಡಿಟಿ ಸೇರ್ಪಡೆ ಆಗಿದ್ದು, ಒಟ್ಟಾರೇ 388 ದಿನಗಳ ವ್ಯಾಲಿಡಿಟಿ ಸಿಗಲಿದೆ.

ಇದರೊಂದಿಗೆ ಗ್ರಾಹಕರಿಗೆ ನಿತ್ಯವೂ 2.5 GB ಡೇಟಾ ಪ್ರಯೋಜನಗಳು ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 912.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದಲ್ಲದೇ ಅನಿಯಮಿತ ಧ್ವನಿ ಕರೆಗಳ ಸೌಲಭ್ಯ ಕೂಡಾ ಇದ್ದು, ನಿತ್ಯವೂ 100 ಉಚಿತ ಎಸ್ಎಮ್ಎಸ್ ಪ್ರಯೋಜನ ಪಡೆದುಕೊಂಡಿದೆ.

ಜಿಯೋದಿಂದ ದೀಪಾವಳಿಗೆ ಭರ್ಜರಿ ಗಿಫ್ಟ್‌!..ಗ್ರಾಹಕರು ಫುಲ್‌ ಖುಷ್!

ಜಿಯೋ 899ರೂ. ಪ್ರೀಪೇಯ್ಡ್‌ ಯೋಜನೆ ಮಾಹಿತಿ

ಜಿಯೋದ ಪ್ರಮುಖ ಪ್ಲ್ಯಾನ್‌ಗಳಲ್ಲಿ ಒಂದಾದ 899ರೂ. ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ದೈನಂದಿನ 2.5 GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೆ ಪೂರ್ಣ ವ್ಯಾಲಿಡಿಟಿ ಅವಧಿಗೆ 225 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ, ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಜಿಯೋ ಆಪ್ಸ್‌ಗಳು ಸಹ ದೊರೆಯಲಿವೆ.

ಜಿಯೋದಿಂದ ದೀಪಾವಳಿಗೆ ಭರ್ಜರಿ ಗಿಫ್ಟ್‌!..ಗ್ರಾಹಕರು ಫುಲ್‌ ಖುಷ್!

ಜಿಯೋದ 719ರೂ. ಪ್ರೀಪೇಯ್ಡ್‌ ಯೋಜನೆ ಮಾಹಿತಿ

ಜಿಯೋ ಸಂಸ್ಥೆಯ 719 ರೂ ಪ್ರೀಪೇಯ್ಡ್‌ ಯೋನೆಯಲ್ಲಿ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗಲಿದೆ. ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಅಲ್ಲದೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇದರ ಜೊತೆಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ಧ್ವನಿ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಇದ್ದು, ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ಸಿಗಲಿವೆ.

ಜಿಯೋದ 666ರೂ. ಪ್ರೀಪೇಯ್ಡ್‌ ಯೋಜನೆ ಮಾಹಿತಿ

ಜಿಯೋ ಸಂಸ್ಥೆಯ 666ರೂ. ಪ್ರೀಪೇಯ್ಡ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ವೇಳೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರ ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಹಾಗೆಯೇ ಜಿಯೋ ಒಳಗೊಂಡಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ಧ್ವನಿ ಕರೆಗಳ ಸೌಲಭ್ಯ ಖಚಿತ.

Best Mobiles in India

English summary
Jio Diwali offer: Jio offering 23 days extra validity on this plan. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+