Home
ಸುದ್ದಿಜಾಲ

ಹೊಸ ವರ್ಷಕ್ಕೆ ಜಿಯೋ ಇಂಥಾ ಆಫರ್‌ ಕೊಡುತ್ತೆ ಅಂತಾ ಯಾರೂ ಊಹಿಸಿರಲಿಲ್ಲ!

ದೇಶದ ಟೆಲಿಕಾಂ ದಿಗ್ಗಜ ಎನಿಸಿಕೊಂಡಿರುವ ಜಿಯೋ ಟೆಲಿಕಾಂ ಹೊಸ ವರ್ಷದ ಪ್ರಯುಕ್ತ ಭರ್ಜರಿ ಆಫರ್‌ ಅನ್ನು ನೀಡಿದೆ. 2022 ರ ವರ್ಷವು ಅಂತ್ಯವಾಗುತ್ತಿದ್ದು, ಬರುವ ಹೊಸ ವರ್ಷ 2023 ಕ್ಕಾಗಿ ರಿಲಯನ್ಸ್ ಜಿಯೋ ಹೊಸ ಹ್ಯಾಪಿ ನ್ಯೂ ಇಯರ್ 2023 ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. ಅಂದಹಾಗೆ ಜಿಯೋ ಟೆಲಿಕಾಂ ಪ್ರತಿ ವರ್ಷ ಹೊಸ ವರ್ಷದ ಪ್ರಯುಕ್ತ ನೂತನ ಪ್ಲ್ಯಾನ್‌ ಅನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಈ ಬಾರಿಯ ಹೊಸ ವರ್ಷದ ಪ್ಲ್ಯಾನ್ ಹೆಚ್ಚು ಪ್ರಯೋಜನಗಳನ್ನು ಪಡೆದಿದ್ದು, ಗ್ರಾಹಕರಿಗೆ ಉಪಯುಕ್ತ ಎನಿಸಿದೆ.

ಹೊಸ ವರ್ಷದ ಪ್ಲ್ಯಾನ್

ಹೌದು, ಜಿಯೋ ಟೆಲಿಕಾಂ ಹೊಸ ವರ್ಷದ ಪ್ಲ್ಯಾನ್ 2023 (Happy New Year 2023 plan) ಪ್ರಯುಕ್ತ ಹೊಸದಾಗಿ ಜಿಯೋ 2023ರೂ. ಬೆಲೆಯ ಯೋಜನೆಯನ್ನು ಘೋಷಣೆ ಮಾಡಿದೆ. ಈ ಯೋಜನೆಯು ಆಕರ್ಷಕ ದೈನಂದಿನ ಡೇಟಾ ಪ್ರಯೋಜನಗಳನ್ನು ಪಡೆದಿದ್ದು, ಒಟ್ಟು 630GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ. ಹಾಗಾದರೆ ಜಿಯೋ 2023ರೂ. ಪ್ಲ್ಯಾನ್‌ ಪ್ರಯೋಜನಗಳೆನು ಹಾಗೂ ಇತರೆ ಅಧಿಕ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ ಟೆಲಿಕಾಂ 2023ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ ಹೊಸ ವರ್ಷದ ಅಂಗವಾಗಿ ಪರಿಚಯಿಸಿರುವ 2023ರೂ. ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 252 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 630GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಆಪ್‌ಗಳು ಲಭ್ಯ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಆಪ್‌ಗಳು ಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಆಪ್‌ಗಳು ಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಒಟ್ಟಾರೇ 504GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Jio has launched new Happy New Year 2023 plan priced at Rs 2023. this new plan offers unlimited calling benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+