ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಇದೇ ಜುಲೈ 3 ರಿಂದ ಈ ಹೊಸ ಪ್ಲ್ಯಾನ್ ಲಭ್ಯ!
ದೇಶದ ಟೆಲಿಕಾಂ ಕ್ಷೇತ್ರದ ಅತಿದೊಡ್ಡ ಸಂಸ್ಥೆ ರಿಲಯನ್ಸ್ ಜಿಯೋ ಇನ್ಫೊಕಾಮ್ ಲಿಮಿಟೆಡ್ ಈಗಾಗಲೇ ತನ್ನ ಚಂದಾದಾರರಿಗೆ ಹಲವು ಅತ್ಯುತ್ತಮ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಬಹುತೇಕ ಪ್ರೀಪೇಯ್ಡ್ ಯೋಜನೆಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಒಳಗೊಂಡಿವೆ. ಇದೀಗ ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸಿದ್ದಿ ನೀಡಲು ಸಜ್ಜಾಗಿದೆ. ಇದೇ ಜುಲೈ 3 ರಿಂದ ಜಾರಿಗೆ ಬರುವಂತೆ ಹಲವು ಹೊಸ ಅನಿಯಮಿತ ಯೋಜನೆ (ಅನ್‌ಲಿಮಿಟೆಡ್ ಪ್ಲಾನ್) ಪ್ರಕಟಿಸಿದೆ.
ಹೌದು, ಜಿಯೋ ಸಂಸ್ಥೆಯ ಹೊಸ ಯೋಜನೆಗಳ ಮೂಲಕ ಕಡಿಮೆ ದರಕ್ಕೆ ಇಂಟರ್ನೆಟ್ ಸೇವೆ ಒದಗಿಸುವ ತನ್ನ ಬದ್ಧತೆಯನ್ನು ಕಂಪನಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಭಾರತದಲ್ಲಿ ತನ್ನ 5ಜಿ ಸಂಪರ್ಕವು ಬಹಳ ವೇಗವಾಗಿ ಬೆಳೆಯುತ್ತಿದ್ದು ಶೇ 85 ರ ವೆರೆಗೆ ತಲುಪಿದೆ ಎಂದು ತಿಳಿಸಿದೆ.

ತಿಂಗಳ ಯೋಜನೆ 189ರೂ. ಗೆ 2ಜಿಬಿ ಇದ್ದು ವಾರ್ಷಿಕ ಯೋಜನೆ 3,599ರೂ. ರಲ್ಲಿ ದಿನಕ್ಕೆ 2.5 ಜಿಬಿ ಡೇಟಾ ಸಿಗಲಿದೆ. ದಿನಕ್ಕೆ 2 ಜಿಬಿ ಮತ್ತು ಅದಕ್ಕಿಂತ ಹೆಚ್ಚಿನ 5ಜಿ ಡೇಟಾದ ಎಲ್ಲಾ ಯೋಜನೆಗಳನ್ನೂ ಇದು ಒಳಗೊಂಡಿದೆ. ಅನಿಯಮಿತ 5ಜಿ ಡೇಟಾ ಸೇವೆಯು ದಿನಕ್ಕೆ 2ಜಿಬಿ ಅಥವಾ ಅದಕ್ಕಿಂತ ಹೆಚ್ಚಿನದ್ದಕ್ಕೆ ಅನ್ವಯಿಸುತ್ತದೆ ಎಂದು ಕಂಪನಿ ತಿಳಿಸಿದೆ.
ಗರಿಷ್ಠ ಗುಣಮಟ್ಟದ, ಕೈಗೆಟಕುವ ಇಂಟರ್ನೆಟ್ ಸೌಲಭ್ಯವು ಡಿಜಿಟಲ್ ಇಂಡಿಯಾದ ಬೆನ್ನೆಲುಬಾಗಿದೆ. ಇದಕ್ಕೆ ಹೆಚ್ಚಿನ ಕೊಡುಗೆ ನೀಡುತ್ತಿರುವುದಕ್ಕೆ ಜಿಯೋ ಹೆಮ್ಮೆಪಡುತ್ತದೆ. ನಮ್ಮ ದೇಶ ಮತ್ತು ಗ್ರಾಹಕರು ಕಂಪನಿಯ ಆದ್ಯತೆಯಾಗಿದೆ. ಭಾರತಕ್ಕಾಗಿ ಹೂಡಿಕೆ ಮಾಡುವುದನ್ನು ಕಂಪನಿ ಮುಂದುವರಿಸಲಿದೆ ಎಂದು ರಿಲಯನ್ಸ್ ಜಿಯೋ ಅಧ್ಯಕ್ಷ ಆಕಾಶ್ ಎಂ. ಅಂಬಾನಿ ಹೇಳಿದರು.
ದೇಶದಲ್ಲಿ ಡೇಟಾ ಬಳಕೆ ಮತ್ತು ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಿಸಲು ಜಿಯೋ ಕಂಪನಿಯು ಮಹತ್ವದ ಕೊಡುಗೆ ನೀಡುತ್ತಿದೆ. ಕಂಪನಿಯು ದೂರಸಂಪರ್ಕ ಕ್ಷೇತ್ರಕ್ಕೆ ಕಾಲಿಟ್ಟಿದ್ದರಿಂದ ಪ್ರತಿಸ್ಪರ್ಧಿ ಕಂಪನಿಗಳು ರಿಚಾರ್ಜ್ ದರ ತಗ್ಗಿಸುವಂತೆ ಮತ್ತು ಡೇಟಾ ಕೊಡುಗೆಯಲ್ಲಿ ಸುಧಾರಣೆ ತರುವಂತೆ ಆಗಿದೆ.
ಎರಡು ಹೊಸ ಅಪ್ಲಿಕೇಶನ್‌ಗಳು
ಜಿಯೋ ಕಂಪನಿಯು ತನ್ನ ಡಿಜಿಟಲ್ ಸೌಲಭ್ಯದ ವ್ಯಾಪ್ತಿಯನ್ನೂ ವಿಸ್ತರಿಸಿದೆ. ಜಿಯೋ ಸೇಫ್ (JioSafe) ಮತ್ತು ಜಿಯೋ ಟ್ರಾನ್ಸ್‌ಲೇಟ್ (JioTranslate) ಎಂಬ ಎರಡು ಅಪ್ಲಿಕೇಷನ್‌ಗಳನ್ನು ಬಿಡುಗಡೆ ಮಾಡಿದೆ. ಜಿಯೋ ಸೇಫ್ ತಿಂಗಳ ದರ 199 ರೂ ಇದ್ದು, ಸುರಕ್ಷಿತ ಕರೆ, ಮೆಸೇಜಿಂಗ್ ಮತ್ತು ಫೈಲ್ ಟ್ರಾನ್ಸ್‌ಫರ್ ಸೇವೆಯನ್ನು ಒದಗಿಸುತ್ತದೆ.
ಜಿಯೋ ಟ್ರಾನ್ಸ್‌ಲೇಟ್ ಆಪ್‌ನಲ್ಲಿ ತಿಂಗಳಿಗೆ 99 ರೂ ನೀಡಿದರೆ, ಕೃತಕ ಬಿದ್ದಿಮತ್ತೆಯಿಂದ ಚಾಲಿತ ಆಪ್, ವಾಯ್ಸ್, ಕಾಲ್, ಮೆಸೇಜ್, ಟೆಕ್ಸ್ಟ್ ಮತ್ತು ಇಮೇಜ್‌ಗಳನ್ನು ಟ್ರಾನ್ಸ್‌ಲೇಟ್ ಮಾಡಬಲ್ಲದು. ಜಿಯೋ ಬಳಕೆದಾರರಿಗೆ ಒಂದು ವರ್ಷದವೆರೆಗೆ ಈ ಎರಡೂ ನೂತನ ಆಪ್‌ಗಳು ಉಚಿತವಾಗಿ ಲಭ್ಯ.
ಜಿಯೋ ಸಂಸ್ಥೆಯ 999ರೂ. ರೀಚಾರ್ಜ್ ಪ್ಲ್ಯಾನ್ ಗಮನ ಸೆಳೆದಿದೆ. ಜಿಯೋ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ, ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 252 GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಜಿಯೋ ಸಿನಿಮಾ, ಜಿಯೋ ಟಿವಿ ಹಾಗೂ ಇತರೆ ಜಿಯೋ ಆಪ್ಸ್ ಸೇವೆ ಸಿಗಲಿದೆ.


Click it and Unblock the Notifications








